ಸೋಮವಾರ, ಏಪ್ರಿಲ್ 29, 2024
Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅದು ಕುಮಾರಸ್ವಾಮಿಗೆ ಚೆನ್ನಾಗಿ ಗೊತ್ತಿದೆ - ಗಂಡಸ್ತನದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ

Twitter
Facebook
LinkedIn
WhatsApp
ಅದು ಕುಮಾರಸ್ವಾಮಿಗೆ ಚೆನ್ನಾಗಿ ಗೊತ್ತಿದೆ – ಗಂಡಸ್ತನದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಹೇಳಿರುವ ಗಂಡಸ್ತನ ಹೇಳಿಕೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು ಇಂತಹ ಪದ ಬಳಕೆ ಅಕ್ಷಮ್ಯ ಅಪರಾಧ. ಗಂಡಸ್ತನ ಯಾವ ಯಾವುದಕ್ಕೆ ಬಳಸಬೇಕು ಎಂದು ಕುಮಾರಸ್ವಾಮಿಗೆ ಚೆನ್ನಾಗಿ ಗೊತ್ತಿದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.

ಹಲಾಲ್ ವಿಚಾರದಲ್ಲಿ ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಗಂಡಸ್ತನ ಇದ್ದರೆ ಮಧ್ಯೆ ಪ್ರವೇಶಿಸಿ ಇದಕ್ಕೆ ತಡೆಯೊಡ್ಡಲಿ ಎಂದು ಕುಮಾರಸ್ವಾಮಿ ಸವಾಲೊಡ್ಡಿದ್ದರು.
ಈ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಕೆ ಎಸ್ ಈಶ್ವರಪ್ಪ, ” ಮುಖ್ಯಮಂತ್ರಿಯಾಗಿದ್ದವರು, ಮತ್ತೊಬ್ಬ ಮುಖ್ಯಮಂತ್ರಿಯ ಗಂಡಸ್ತನ ಬಗ್ಗೆ ಪ್ರಶ್ನೆ ಮಾಡುವುದು ಸರಿಯಲ್ಲ. ಅವರು ಒಬ್ಬರು ಹಿರಿಯ ರಾಜಕಾರಣಿ. ಗಂಡಸ್ತನ ಯಾವ ಯಾವುದಕ್ಕೆ ಬಳಸಬೇಕು ಎಂದು ಕುಮಾರಸ್ವಾಮಿಗೆ ಗೊತ್ತಿದೆ. ಒಂದು ಕಡೆ ಬಳಸಬೇಕೋ, ಎರಡು ಕಡೆ ಬಳಸಬೇಕೋ ಅಥವಾ ಮೂರು ಕಡೆ ಬಳಸಬೇಕೋ ಎಂದು ಅವರಿಗೆ ಗೊತ್ತು” ಎಂದು ಟಾಂಗ್ ನೀಡಿದರು.
ಹಲಾಲ್ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಹಲಾಲ್, ಜಟ್ಕಾ ಕಟ್ ಈ ಬಗ್ಗೆ ನನಗೆ ತಿಳಿದಿಲ್ಲ. ನಾನೂ ಈ ವಿಷಯದ ಬಗ್ಗೆ ಪತ್ರಿಕೆಯ ಮೂಲಕ ನೋಡಿದ್ದೇನೆ. ಹಿಂದೂ ಸಂಪ್ರದಾಯದಂತೆ ಪ್ರಾಣಿ ಹತ್ಯೆಯಾಗಲಿ ಎಂಬುದು ನನ್ನ ಅಭಿಪ್ರಾಯ. ಆದರೆ ಮುಸಲ್ಮಾನರಿಗೆ ಒಂದು ಅಭಿಪ್ರಾಯ ಇದೆ. ಅವರು ಅದನ್ನು ನಡೆಸಿಕೊಂಡು ಹೋಗಲಿ. ಅದು ಅವರವರ ಇಚ್ಚೆಗೆ ಬಿಟ್ಟಿರುವ ವಿಚಾರವಷ್ಟೇ . ಮುಸಲ್ಮಾನರು ಹಿಂದೂಗಳ ಬಳಿ ಹೋಗಿ ಖರೀದಿ ಮಾಡಬೇಡಿ ಎನ್ನಲು ಅವರಿಗೆ ಯಾವ ಹಕ್ಕು ಇಲ್ಲ ಎಂದು ಇದೇ ವೇಳೆ ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ