ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಧಿಕಾರಿಗಳಿಗೆ ಶಾಕ್; ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ!

Twitter
Facebook
LinkedIn
WhatsApp
ಲೋಕಾಯುಕ್ತ ದಾಳಿ
ಬೆಂಗಳೂರು, ಆ.17: ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ(Lokayukta Raids) ನಡೆಸಿ ಶಾಕ್ ಕೊಟ್ಟಿದ್ದಾರೆ. ಚಿತ್ರದುರ್ಗ, ದಾವಣಗೆರೆ ಸೇರಿ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಕೆ.ಮಹೇಶ್ ಪತ್ನಿ BBMP ಎಇ ಹೆಚ್.ಭಾರತಿ ಮನೆ ಮೇಲೆ ದಾಳಿ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳು ದಾವಣಗೆರೆಯ ಜಯನಗರದಲ್ಲಿರುವ ಮಹೇಶ್ ಅವರ​​ ಮನೆ ಬಾಗಿಲು ತಟ್ಟಿದ್ದಾರೆ. ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಣ್ಣ ನೀರಾವರಿ ಇಲಾಖೆ, ಬೆಂಗಳೂರಿನ BBMP ಕಚೇರಿ ಮೇಲೂ ದಾಳಿ ನಡೆಯುವ ಸಾಧ್ಯತೆ ಇದೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು ಬಂದ ಹಿನ್ನೆಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಫ್ರೀ ಬಸ್‌ ನಿಲ್ಲಲ್ಲ, ನಾನೇ ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದು, ಸುಳ್ಳು ಸುದ್ದಿಗಳನ್ನು ನಂಬದಂತೆ ಜನರಿಗೆ ಕೋರಿದ್ದಾರೆ.

ಶಕ್ತಿ ಯೋಜನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಕುರಿತಂತೆ ಟ್ವೀಟ್‌ ಮೂಲಕ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಮೊದಲಿಗೆ ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು. ಈಗ ಆ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂತಹ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ಸ್ಥಗಿತಗೊಳ್ಳುವುದಿಲ್ಲ. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ ಎಂದು ತಿಳಿಸಿದ್ದಾರೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿ, ಶಕ್ತಿ ಯೋಜನೆಯನ್ನು ನಿಲ್ಲಿಸಲಾಗುತ್ತದೆ ಎಂದು ಒಂದು ರಾಜಕೀಯ ಪಕ್ಷ ಸುಳ್ಳು ಹರಡುತ್ತಿದೆ. ಯೋಜನೆಯ ಯಶಸ್ಸನ್ನು ಸಹಿಸಿಕೊಳ್ಳಲಾಗದ ಪ್ರತಿಪಕ್ಷದವರು ಈ ರೀತಿ ಮಾಡುತ್ತಿದ್ದಾರೆ. ಈ ಐದು ವರ್ಷ ಮಾತ್ರವಲ್ಲ ಇನ್ನೂ ಹತ್ತು ವರ್ಷ ಶಕ್ತಿ ಯೋಜನೆ ಮುಂದುವರೆಯಲಿದೆ ಎಂದು ಹೇಳಿದರು.

ಯೋಜನೆಯ ಲಾಭ ಪಡೆಯಲು ಸದ್ಯಕ್ಕೆ ಯಾರೂ ಪಾಸ್‌ ಪಡೆಯುವ ಅಗತ್ಯವೂ ಇಲ್ಲ. ಮುಂದೆಯೂ (2028) ನಾವೇ ಅಧಿಕಾರಕ್ಕೆ ಬರುತ್ತೇವೆ. ಹೀಗಾಗಿ ಮುಂದಿನ 10 ವರ್ಷ ಮಹಿಳೆಯರು ರಾಜ್ಯಾದ್ಯಂತ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಇದರಲ್ಲಿ ಯಾವುದೇ ಗೊಂದಲಗಳು ಬೇಕಿಲ್ಲ ಎಂದು ಸ್ಪಷ್ಪಪಡಿಸಿದರು.

ಈ ಬಗ್ಗೆ ಸಾರಿಗೆ ಇಲಾಖೆಯು ಸ್ಪಷ್ಟನೆ ನೀಡಿದ್ದು, ಸಾರ್ವಜನಿಕರು ಶಕ್ತಿ ಯೋಜನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಗೊಂದಲಕಾರಿ ಸಂದೇಶಗಳನ್ನು ನಂಬಬಾರದು. ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯು ಎಂದಿನಂತೆಯೇ ಮುಂದುವರೆಯಲಿದೆ ಎಂದು ಹೇಳಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ