ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅನಿಲ್​ ದೇಶ್​ಮುಖ್​ ನ.12ರವರೆಗೆ ಇ.ಡಿ.ಕಸ್ಟಡಿಗೆ.

Twitter
Facebook
LinkedIn
WhatsApp
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಬಂಧನ .

ದೆಹಲಿ: ಅಕ್ರಮ ಹಣವರ್ಗಾವಣೆ ಪ್ರಕರಣದಡಿ ಈಗಾಗಲೇ ಇ.ಡಿ.ಯಿಂದ ಬಂಧಿತರಾಗಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್ ರನ್ನು ತಮ್ಮ ಕಸ್ಟಡಿಗೆ ನೀಡುವಂತೆ ಸಿಬಿಐ ಕೂಡ ಮನವಿ ಮಾಡಿದೆ.  ಮೊನ್ನೆ ಅನಿಲ್​ ದೇಶ್​ಮುಖ್​​ರನ್ನು ಬಂಧಿಸಿದ್ದ ಇ.ಡಿ.ಅಧಿಕಾರಿಗಳು ಅವರನ್ನು ಮುಂಬೈ ಕೋರ್ಟ್​ಗೆ ಹಾಜರುಪಡಿಸಿದ್ದರು. ಹಾಗೇ, ಇನ್ನೂ 9 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ತಿರಸ್ಕರಿಸಿದ್ದ ಕೋರ್ಟ್​ ಅನಿಲ್​ ದೇಶ್​​ಮುಖ್​ರನ್ನು ಜೈಲಿಗೆ ಕಳಿಸಿತ್ತು. 

ಇನ್ನು ತಮ್ಮ ಮನವಿಯನ್ನು ಪುರಸ್ಕರಿಸದ ಸೆಷನ್ಸ್​ ಕೋರ್ಟ್​​ ತೀರ್ಪಿನ ವಿರುದ್ಧ ಇ.ಡಿ.ಅಧಿಕಾರಿಗಳು ಕೂಡ ಬಾಂಬೆ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​, ನವೆಂಬರ್​ 12ರವರೆಗೂ ಇ.ಡಿ.ಅಧಿಕಾರಿಗಳು ಅನಿಲ್​ ದೇಶ್​ಮುಖ್​​ರನ್ನು ವಿಚಾರಣೆ ನಡೆಸಬಹುದು ಎಂದೂ ಹೇಳಿದೆ.  ಇನ್ನು ಅನಿಲ್​ ದೇಶ್​ಮುಖ್​ ಅವರನ್ನು ಇ.ಡಿ.ಅಧಿಕಾರಿಗಳು ವಿಚಾರಣೆ ಮಾಡಿ ಮುಗಿಸುತ್ತಿದ್ದಂತೆ ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಂದರೆ ಅನಿಲ್​ ದೇಶ್​​ಮುಖ್​​ರನ್ನು ಕಸ್ಟಡಿಗೆ ಕೊಡುವಂತೆ ಸಿಬಿಐ ಅಧಿಕಾರಿಗಳು ಕೋರ್ಟ್​ಗೆ ಮನವಿ ಸಲ್ಲಿಸಲಿದ್ದಾರೆ. ನ್ಯಾಯಾಲಯ ಅನುಮತಿ ನೀಡಿದರೆ,  ದೇಶಮುಖ್ ವಿರುದ್ಧ ಇರುವ ಭ್ರಷ್ಟಾಚಾರ ಆರೋಪ ಮತ್ತು ಪೊಲೀಸ್​ ಅಧಿಕಾರಿಗಳ ವರ್ಗಾವಣೆಯಲ್ಲಿ ನಡೆಸಿದ್ದಾರೆ ಎನ್ನಲಾದ ಅಕ್ರಮದ ಬಗ್ಗೆ ಸಿಬಿಐ ಅವರನ್ನು ಪ್ರಶ್ನಿಸಲಿದೆ.

ಅನಿಲ್​ ದೇಶ್​​ಮುಖ್​ ವಿರುದ್ಧ ಮಾಜಿ ಪೊಲೀಸ್​ ಅಧಿಕಾರಿ ಪರಮ್​ ಬೀರ್​ ಸಿಂಗ್​ ಭ್ರಷ್ಟಾಚಾರ ಮತ್ತು ಸುಲಿಗೆ ಆರೋಪ ಮಾಡಿದ್ದಾರೆ. ಈ ಹಿಂದಿನ ಪೊಲೀಸ್ ಅಧಿಕಾರಿ ಸಚಿನ್​ ವಾಜ್​​ರನ್ನು ಬಳಸಿಕೊಂಡು  ಬಾರ್​ ಆ್ಯಂಡ್​ ರೆಸ್ಟೋರೆಂಟ್​, ಹೋಟೆಲ್​ಗಳ  ಮೂಲಕ 100 ಕೋಟಿ ರೂಪಾಯಿ ವಸೂಲಿ ಮಾಡುತ್ತಿದ್ದರು ಎಂದು ಪರಮ್​ ಬೀರ್​ ಸಿಂಗ್​​ ಪತ್ರ ಬರೆದು ಉದ್ಧವ್​ ಠಾಕ್ರೆಗೆ ತಿಳಿಸಿದ್ದರು. ಅದಾದ ಮೇಲೆ ಅನಿಲ್​ ದೇಶ್​ಮುಖ್​ ಮೇಲಿನ ಆರೋಪಗಳೆಲ್ಲ ಮುನ್ನೆಲೆಗೆ ಬಂದು, ಇ.ಡಿ. ಮತ್ತು ಸಿಬಿಐ ಎರಡೂ ತನಿಖಾ ದಳಗಳೂ ಪ್ರಕರಣ ದಾಖಲು ಮಾಡಿವೆ. ಅನಿಲ್​ ದೇಶ್​ಮುಖ್​ ವಿರುದ್ಧ ಮಾಡಲಾದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟಂತೆ ನಡೆಸಲಾದ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸುವಂತೆ ಮಾರ್ಚ್​ನಲ್ಲಿಯೇ ಬಾಂಬೆ ಹೈಕೋರ್ಟ್ ಸಿಬಿಐಗೆ ಸೂಚಿಸಿತ್ತು.  ಇನ್ನು ಇ.ಡಿ. ವಿಚಾರಣೆಗೆ ಅವರು ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಬಂಧಿಸಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು