ಬುಧವಾರ, ಮೇ 8, 2024
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!-ನಾಳೆ SSLC ಪಲಿತಾಂಶ ಪ್ರಕಟ ; ಇಲ್ಲಿದೆ ಲಿಂಕ್-ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅನುಕಂಪದ ಆಧಾರದಲ್ಲಿ ನೌಕರಿ ಪಡೆಯುವುದು ಹಕ್ಕಲ್ಲ: ಹೈಕೋರ್ಟ್‌

Twitter
Facebook
LinkedIn
WhatsApp
768 512 17560369 thumbnail 3x2 don

ಬೆಂಗಳೂರು(ಜ.24):  ಕುಟುಂಬವೊಂದರ ಸದಸ್ಯ ಈಗಾಗಲೇ ಸರ್ಕಾರದ ಅಧೀನದ ಸಂಸ್ಥೆಯಲ್ಲಿ ನೌಕರನಾಗಿ ಕಾರ್ಯ ನಿರ್ವಹಿಸುತ್ತಿದ್ದರೆ ಅದೇ ಕುಟುಂಬದ ಮತ್ತೊಬ್ಬ ಸದಸ್ಯನಿಗೆ ಅದೇ ಸಂಸ್ಥೆಯಲ್ಲಿ ಅನುಕಂಪದ ಆಧಾರದಲ್ಲಿ ಉದ್ಯೋಗ ಕಲ್ಪಿಸಲಾಗದು ಎಂದು ಆದೇಶಿಸಿರುವ ಹೈಕೋರ್ಟ್‌, ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆಯುವುದು ಹಕ್ಕು ಅಲ್ಲ ಎಂದು ಸ್ಪಷ್ಟಪಡಿಸಿದೆ.

ಅನುಕಂಪದ ಆಧಾರದಲ್ಲಿ ಉದ್ಯೋಗ ಕಲ್ಪಿಸಲು ನಿರಾಕರಿಸಿದ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತದ (ಕೆಪಿಟಿಸಿಎಲ್‌) ಕ್ರಮ ಪ್ರಶ್ನಿಸಿ ಬೆಂಗಳೂರಿನ ಉಲ್ಲಾಳದ ನಿವಾಸಿ ರಂಗನಾಥ್‌ ಎಂಬುವರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆಲೋಕ್‌ ಆರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ. ಮೇಲ್ಮನವಿದಾರರ ಸಹೋದರ ಈಗಾಗಲೇ ಕೆಪಿಟಿಸಿಎಲ್‌ನಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ರಂಗನಾಥ್‌ ಅವರಿಗೂ ಅದೇ ಸಂಸ್ಥೆಯಲ್ಲಿ ಅನುಕಂಪದ ಆಧಾರದಲ್ಲಿ ಮತ್ತೊಂದು ಉದ್ಯೋಗ ನೀಡಲಾಗದು ಎಂದು ತಿಳಿಸಿ ಮೇಲ್ಮನವಿ ವಜಾಗೊಳಿಸಿದೆ.

ಪ್ರಕರಣದ ವಿವರ:

ಕೆಪಿಟಿಸಿಎಲ್‌ನಲ್ಲಿ ಉದ್ಯೋಗ ಮಾಡುತ್ತಿದ್ದ ರಂಗನಾಥ್‌ ತಂದೆ ಎನ್‌.ರಾಮಯ್ಯ 2002ರ ಅ.7ರಿಂದ ದಿಢೀರ್‌ ನಾಪತ್ತೆಯಾಗಿದ್ದರು. 2010ರಲ್ಲಿ ಅನುಕಂಪದ ಆಧಾರದಲ್ಲಿ ತಮಗೆ ಉದ್ಯೋಗ ನೀಡುವಂತೆ ಕೋರಿ ರಂಗನಾಥ್‌ ತಾಯಿ ಸಲ್ಲಿಸಿದ್ದ ಅರ್ಜಿಯನ್ನು ಕೆಪಿಟಿಸಿಎಲ್‌ ತಿರಸ್ಕರಿಸಿತ್ತು. ಬಳಿಕ, ತಂದೆ ನಾಪತ್ತೆಯಾದ ಕಾರಣ ಸಿವಿಲ್‌ ನ್ಯಾಯಾಲಯಕ್ಕೆ ದಾವೆ ಹೂಡಿದ್ದ ರಂಗನಾಥ್‌, ತಂದೆ ಹೆಸರಿನಲ್ಲಿ ಮರಣ ಪತ್ರ ವಿತರಿಸಲು ಬಿಬಿಎಂಪಿಗೆ ಆದೇಶಿಸುವಂತೆ ಕೋರಿದ್ದರು. ದಾವೆಯನ್ನು ಪುರಸ್ಕರಿಸಿ ಸಿವಿಲ್‌ ನ್ಯಾಯಾಲಯ ನೀಡಿದ್ದ ಸೂಚನೆ ಮೇರೆಗೆ ರಾಮಯ್ಯ ಹೆಸರಿನಲ್ಲಿ ಬಿಬಿಎಂಪಿಯು 2011ರಲ್ಲಿ ಮರಣ ಪ್ರಮಾಣ ಪತ್ರ ನೀಡಿತ್ತು.

2012ರಲ್ಲಿ ರಂಗನಾಥ್‌ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿ, ಅನುಕಂಪದ ಆಧಾರದಲ್ಲಿ ತಮಗೆ ನೌಕರಿ ಕಲ್ಪಿಸಲು ಕೆಪಿಟಿಸಿಎಲ್‌ಗೆ ಸೂಚಿಸುವಂತೆ ಕೋರಿದ್ದರು. ಆದರೆ, ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠ, ರಂಗನಾಥ್‌ ಮನವಿಯನ್ನು ಕಾನೂನು ಪ್ರಕಾರದಲ್ಲಿ ಪರಿಗಣಿಸುವಂತೆ ಕೆಪಿಟಿಸಿಎಲ್‌ಗೆ ನಿರ್ದೇಶಿಸಿತ್ತು. ಪ್ರಕರಣ ಪರಿಶೀಲಿಸಿದ್ದ ಕೆಪಿಟಿಸಿಎಲ್‌, ರಂಗನಾಥ್‌ ಕುಟುಂಬದ ಸದಸ್ಯರು ಇದೇ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಆದ ಕಾರಣ ಅದೇ ಕುಟುಂಬದ ಮತ್ತೊಬ್ಬರಿಗೆ ಉದ್ಯೋಗಾವಕಾಶ ಕಲ್ಪಿಸಲಾಗದು ಎಂದು ತಿಳಿಸಿ 2013ರಲ್ಲಿ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ರಂಗನಾಥ್‌ ಮತ್ತೆ ಸಲ್ಲಿಸಿದ್ದ ಅರ್ಜಿಯನ್ನು 2014ರಲ್ಲಿ ತಿರಸ್ಕರಿಸಿದ್ದ ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠ, ಕೆಪಿಟಿಸಿಎಲ್‌ ಆದೇಶ ಎತ್ತಿಹಿಡಿದಿತ್ತು. ಇದರಿಂದ ರಂಗನಾಥ್‌ ಮೇಲ್ಮನವಿ ಸಲ್ಲಿಸಿದ್ದು, ಅದನ್ನೂ ಈಗ ವಿಭಾಗೀಯ ಪೀಠ ವಜಾಗೊಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ