ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪಘಾತದ ಬಳಿಕ ರಕ್ತದ ಮಡುವಿನಲ್ಲಿ ನರಳಾಡಿದ ಪಂತ್; ವಿಡಿಯೋ ವೈರಲ್

Twitter
Facebook
LinkedIn
WhatsApp
ANI 20221213241 0 1672375904047 1672375904047 1672375927848 1672375927848

ಶುಕ್ರವಾರ ಬೆಳಗ್ಗೆ ಭೀಕರ ಕಾರು ಅಪಘಾತಕ್ಕೊಳಗಾದ ಭಾರತದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್  ಅವರು ಪ್ರಸ್ತುತ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿಯಿಂದ ಉತ್ತರಾಖಂಡಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಪಂತ್ ಎಚ್ಚರ ತಪ್ಪಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂಬುದು ತಿಳಿದುಬಂದಿದೆ. ಭೀಕರ ಅಪಘಾತದ ಬಳಿಕ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಕಾರಿನ ಗಾಜನ್ನು ಹೊಡೆದು ಪಂತ್, ಕಾರಿನೊಳಗಿನಿಂದ ಹೊರಬಂದಿದ್ದಾರೆ. ಇದೀಗ, ಅಪಘಾತಕ್ಕೀಡಾದ ಬಳಿಕ ರಸ್ತೆ ಬದಿಯಲ್ಲಿ, ರಕ್ತದ ಮಡುವಿನಲ್ಲಿ ನರಳಾಡುತ್ತಿರುವ ಪಂತ್ ಅವರ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿದೆ.

ರಿಷಬ್ ಪಂತ್ ಅವರ ಕಾರು ಮುಂಜಾನೆ 5:30 ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ರೂರ್ಕಿ ಬಳಿಯ ಮೊಹಮ್ಮದ್‌ಪುರ ಜಟ್‌ನಲ್ಲಿ ಈ ಘಟನೆ ನಡೆದಿದೆ. ‘‘ಕಾರನ್ನು ಡ್ರೈವ್ ಮಾಡುವಾಗ ನಿದ್ರೆಗೆ ಜಾರಿದೆ. ಇದರ ಪರಿಣಾಮವಾಗಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ’’ ಎಂದು ಸ್ವತಃ ಪಂತ್ ಅವರೇ ಹೇಳಿಕೆ ನೀಡಿದ್ದಾರೆ. ಕೂಡಲೇ ಪಂತ್ ಅವರನ್ನು ರೂರ್ಕಿ ಆಸ್ಪತ್ರೆಗೆ ಕರೆದುಯ್ಯಲಾಗಿದ್ದು, ಅಲ್ಲಿಂದ ಡೆಹ್ರಾಡೂನ್‌ಗೆ ಸ್ಥಳಾಂತರಿಸಲಾಗಿದೆ ಎಂದು ಡಿಜಿಪಿ ಅಶೋಕ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಹೇಳಿಕೆ ಪ್ರಕಾರ, ಅಪಘಾತದ ಸಮಯದಲ್ಲಿ ಕಾರಿನಲ್ಲಿ ಕ್ರಿಕೆಟಿಗ ಒಬ್ಬರೇ ಇದ್ದರು. ಬೆಂಕಿ ಹೊತ್ತಿಕೊಂಡ ನಂತರ ಕಾರಿನಿಂದ ಹೊರಬರಲು ಪಂತ್, ವಿಂಡ್‌ಸ್ಕ್ರೀನ್ ಒಡೆದಿದ್ದಾರೆ ಎಂದು ಖಚಿತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ