ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮಿತ್ ಶಾ ಪ್ರಯಾಣಿಸುತ್ತಿದ್ದ ವಿಮಾನ ಗುವಾಹಟಿಯಲ್ಲಿ ತುರ್ತು ಲ್ಯಾಂಡಿಂಗ್

Twitter
Facebook
LinkedIn
WhatsApp
whatsapp image 2023 01 04 at 11.55.39 pm 1 sixteen nine

ಅಗರ್ತಲಾ: ದಟ್ಟ ಮಂಜಿನಿಂದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ವಿಮಾನ ಬುಧವಾರ ರಾತ್ರಿ ಅಗರ್ತಲಾದ (Agartala) ಮಹಾರಾಜ ಬೀರ್ ಬಿಕ್ರಮ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಬದಲು ಗುವಾಹಟಿಯಲ್ಲಿ ತುರ್ತು ಲ್ಯಾಂಡ್ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಅಮಿತ್ ಶಾ ಅವರಿದ್ದ ವಿಮಾನವನ್ನು ಗುವಾಹಟಿಯ ಲೋಕಪ್ರಿಯಾ ಗೋಪಿನಾಥ್ ಬೊರ್ಡೊಲೊಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು.

ಅಮಿತ್ ಶಾ ಬುಧವಾರ ರಾತ್ರಿ ಅಗರ್ತಲಾಕ್ಕೆ ಆಗಮಿಸಬೇಕಿತ್ತು. ಇಂದು ಅವರು ಈಶಾನ್ಯ ರಾಜ್ಯದಲ್ಲಿ 2 ರಥಯಾತ್ರೆಗಳಿಗೆ ಚಾಲನೆ ನೀಡಲಿದ್ದಾರೆ. ಅಸ್ಸಾಂನಲ್ಲಿ ಈ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಆಗಮಿಸಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಎಂಬಿಬಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಬೇಕಿತ್ತು. ಆದರೆ ದಟ್ಟ ಮಂಜಿನಿಂದ ಉಂಟಾದ ಗೋಚರತೆಯ ಕೊರತೆಯಿಂದಾಗಿ ಅವರು ಗುವಾಹಟಿ ವಿಮಾನ ನಿಲ್ದಾಣಕ್ಕೆ ತೆರಳಿದರು ಎಂದು ಪಶ್ಚಿಮ ತ್ರಿಪುರದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಶಂಕರ್ ತಿಳಿಸಿದ್ದಾರೆ.

ಎಂಬಿಬಿ ವಿಮಾನ ನಿಲ್ದಾಣಕ್ಕೆ ತೆರಳಬೇಕಿದ್ದ ವಿಮಾನವು ಗುವಾಹಟಿಗೆ ಬಂದಿಳಿದಿದ್ದು, ಅಮಿತ್ ಶಾ ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಗುವಾಹಟಿಯ ವಿಮಾನ ನಿಲ್ದಾಣದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮ ಅಮಿತ್ ಶಾ ಅವರನ್ನು ಸ್ವಾಗತಿಸಿದ್ದಾರೆ.

ಉತ್ತರ ತ್ರಿಪುರಾ ಜಿಲ್ಲೆಯ ಧರ್ಮನಗರ ಮತ್ತು ದಕ್ಷಿಣ ತ್ರಿಪುರಾ ಜಿಲ್ಲೆಯ ಸಬ್ರೂಮ್ ಉಪವಿಭಾಗದಿಂದ ರಥಯಾತ್ರೆಗೆ ಚಾಲನೆ ನೀಡಲು ಶಾ ಇಂದು ಬೆಳಗ್ಗೆ 11 ಗಂಟೆಗೆ ಅಗರ್ತಲಾಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ರಾಜೀಬ್ ಭಟ್ಟಾಚಾರ್ಜಿ ತಿಳಿಸಿದ್ದಾರೆ.

ಅಮಿತ್ ಶಾ ಅವರು ಮೊದಲು ಧರ್ಮನಗರಕ್ಕೆ ತೆರಳಲಿದ್ದು, ಅಲ್ಲಿ ಯಾತ್ರೆಗೆ ಚಾಲನೆ ನೀಡಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಅವರು ಸಬ್ರೂಮ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಮತ್ತೊಂದು ರಥಯಾತ್ರೆಯನ್ನು ಉದ್ಘಾಟಿಸಲಿದ್ದಾರೆ. ಅಲ್ಲಿಯೂ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಬ್ರೂಮ್ ಕಾರ್ಯಕ್ರಮದ ನಂತರ, ಶಾ ಅಗರ್ತಲಾಕ್ಕೆ ಹಿಂತಿರುಗಿ ಇಂದು ಸಂಜೆ ತ್ರಿಪುರಾದಿಂದ ಹೊರಡಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ