ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮಿತ್ ಶಾ ಭೇಟಿ ಹಿನ್ನಲೆ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಇಂದು ಮದ್ಯ ಮಾರಾಟ ಮಳಿಗೆ ಬಂದ್

Twitter
Facebook
LinkedIn
WhatsApp
ಅಮಿತ್ ಶಾ ಭೇಟಿ ಹಿನ್ನಲೆ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಇಂದು ಮದ್ಯ ಮಾರಾಟ ಮಳಿಗೆ ಬಂದ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹಾಗೂ ಪುತ್ತೂರಿಗೆ ಇಂದು (ಫೆಬ್ರವರಿ 11) ಬಿಜೆಪಿ ಚಾಣಕ್ಯ ಎಂದೇ ಖ್ಯಾತಿ ಪಡೆದಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಇಂದು ಮದ್ಯದ ಅಂಗಡಿಗಳಿಗೆ ಹಾಗೂ ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಆದೇಶದ ಪ್ರಕಾರ, ಇಂದು ಮಧ್ಯಾಹ್ನ 12ರಿಂದ ರಾತ್ರಿ 8ರವರೆಗೆ ಮದ್ಯ ಮಾರಾಟ ಮಾಡುವಂತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಧಿಕಾರಿಯವರು ಈ ಆದೇಶ ಹೊರಡಿಸಿದ್ದಾರೆ.

ಪುತ್ತೂರಿನ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಲುವಾಗಿ ಕೇಂದ್ರ ಸಚಿವ ಅಮಿತ್ ಶಾ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ಪ್ರಬಲ ನಾಯಕರ ಹೆಸರಲ್ಲಿ ತನ್ನ ಭದ್ರಕೋಟೆಗಳನ್ನು ಉಳಿಸಿಕೊಳ್ಳುವ ಸಾಹಸ ಮಾಡುತ್ತಿರುವ ಬಿಜೆಪಿ ಕರಾವಳಿ ಜಿಲ್ಲೆಗೆ ಅಮಿತ್ ಶಾ ಭೇಟಿಗೆ ರತ್ನಗಂಬಳಿ ಹಾಸಿದೆ.

ಅಮಿತ್ ಶಾ ಮಂಗಳೂರು ಭೇಟಿ ವೇಳಾಪಟ್ಟಿ ಫೆಬ್ರುವರಿ 11, ಶನಿವಾರ ಮಧ್ಯಾಹ್ನ 2.15 ಕಣ್ಣೂರು ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಆಗಮನ. ಮಧ್ಯಾಹ್ನ 2.45 ಕಣ್ಣೂರಿನಿಂದ ಬಿಎಸ್ಎಫ್‌ ಹೆಲಿಕಾಪ್ಟರ್‌ ಮೂಲಕ ಪುತ್ತೂರಿನ ಈಶ್ವರ ಮಂಗಲಕ್ಕೆ ಆಗಮನ. ಮಧ್ಯಾಹ್ನ 2.50 ಈಶ್ವರಮಂಗಲ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ ಮಧ್ಯಾಹ್ನ 3.35 ಹೆಲಿಕಾಪ್ಟರ್‌ ಮೂಲಕ ಈಶ್ವರ ಮಂಗಲದಿಂದ ಪುತ್ತೂರಿಗೆ ಆಗಮನ. ಮಧ್ಯಾಹ್ನ 3.40: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಮಾರಂಭದಲ್ಲಿ ಭಾಗಿ ಸಂಜೆ 6.00: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಆಗಮನ ಸಂಜೆ 6:15 ರಿಂದ 8:00 : ಏರ್​ಪೋರ್ಟ್ ಸಮೀಪ ಬಿಜೆಪಿ ಪ್ರಮುಖರೊಂದಿಗೆ ಆಂತರಿಕ ಸಭೆ ರಾತ್ರಿ 8:15 : ಮಂಗಳೂರು ಏರ್​ಪೋರ್ಟ್​ನಿಂದ ದೆಹಲಿಗೆ ಪ್ರಯಾಣ.

ಶಾ ಭೇಟಿ ಹಿನ್ನಲೆ ಸಂಚಾರದಲ್ಲಿ ಬದಲಾವಣೆ:

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮಂಗಳೂರು ನಗರಕ್ಕೆ ಆಗಮಿಸಿ ಏರ್ಪೋರ್ಟ್ ರಸ್ತೆಯಲ್ಲಿನ ಕೆಂಜಾರು ಸಮೀಪದ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಆಯೋಜಿಸಿರುವ ಸಭೆಯಲ್ಲಿ ಭಾಗವಹಿಸುವ ಕಾರಣ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಜೆ ಸುಮಾರು 4 ಗಂಟೆಯಿಂದ 9 ಗಂಟೆಯವರೆಗೂ ಕೆಂಜಾರು ಸಮೀಪದ ಏರ್ಪೋರ್ಟ್ ರಸ್ತೆಯಲ್ಲಿ ವಾಹನ ಹಾಗೂ ಜನಸಂದಣಿ ಜಾಸ್ತಿ ಇದ್ದು, ಸಂಚಾರ ವ್ಯತ್ಯಯ ಆಗಬಹುದಾದ ಕಾರಣ ಕೆಂಜಾರು ಸಮೀಪದ ರಸ್ತೆಯನ್ನು ಉಪಯೋಗಿಸಿ ಏರ್ಪೋರ್ಟ್ ಗೆ ಹೋಗುವವರು ಪರ್ಯಾಯ ರಸ್ತೆಯಾಗಿ ಮುಲ್ಕಿ -ಕಟೀಲ್ -ಬಜಪೆ ಮೂಲಕ ಏರ್ ಪೋರ್ಟ್ ಗೆ ಹೋಗಬಹುದು. ಇದಲ್ಲದೆ ಕುದುರೆಮುಖ ಜಂಕ್ಷನ್- ಜೋ ಕಟ್ಟೆ -ಪೊರ್ಕೊಡಿ -ಏರ್ ಪೋರ್ಟ್, ಇಂಡಸ್ಟ್ರಿಯಲ್ ಏರಿಯಾ -ಜೋಕಟ್ಟೆ -ಪೊರ್ಕೋಡಿ -ಏರ್ಪೋರ್ಟ್, ನಂತೂರು , ಬಿಕರ್ನ ಕಟ್ಟೆ- ಕೈಕಂಬ -ಏರ್ಪೋರ್ಟ್ ಈ ಮಾರ್ಗಗಳನ್ನು ಉಪಯೋಗಿಸಬೇಕಾಗಿ ಕೋರಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ