ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮೂಲ್ ಜೊತೆ ನಂದಿನಿ ವಿಲೀನ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

Twitter
Facebook
LinkedIn
WhatsApp
cm bommai new year 710x400xt

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳದ ಉತ್ಪನ್ನ ನಂದಿನಿಯನ್ನು ಗುಜರಾತ್ ನ ಅಮೂಲ್ ಜೊತೆಗೆ ವಿಲೀನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ‘ನಂದಿನಿ ವಿಲೀನವಾಗಲಿದೆ ಎಂದು ಯಾರೂ ಊಹೆ ಮಾಡಿ ಟೀಕೆ ಮಾಡಬಾರದು. ನಂದಿನಿ ತನ್ನ ಸ್ವಂತ ಅಸ್ಥಿತ್ವ ಉಳಿಸಿಕೊಳ್ಳಲಿದೆ. ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ.  ನಂದಿನಿ ಮತ್ತು ಅಮುಲ್ ತಾಂತ್ರಿಕ ವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ ಎಂದರು.

ಯಾವುದೂ ಸಮಸ್ಯೆಯಿಲ್ಲ. ಕೆಲವು ವಲಯಗಳಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮುಲ್ ತಾಂತ್ರಿಕವಾಗಿ ಮುಂದಿದ್ದರೆ ವಿನಿಯಮ ಮಾಡಿಕೊಳ್ಳಬಹುದು. ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ ಎಂದು ಅವರು ಹೇಳಿರುವುದು. ಅದರ ತಪ್ಪು ಅರ್ಥ ಕಲ್ಪಿಸುವ ಅಥವಾ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ನಾನು ಮುಖ್ಯಮಂತ್ರಿಯಾಗಿ ಹೇಳುವುದು, ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದರು.

ಇದೇ ವೇಳೆ ಮೀಸಲಾತಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರಿಗೆ ಕಷ್ಟವಾಗುತ್ತಿದೆ. ಅದಕ್ಕೆ ವ್ಯಾಖ್ಯಾನ ಮಾಡಲು ಬರುವುದಿಲ್ಲ. ಅಂತಿಮ ವರದಿ ಬಂದಾಗ ಅದಕ್ಕೆ ಸ್ಪಷ್ಟ ರೂಪ ದೊರಕಲಿದೆ. ಸಂವಿಧಾನದ ಚೌಕಟ್ಟಿನಲ್ಲಿ ಸರಿಯಾಗಿರಲಿದೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ