ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಮೃತವರ್ಷಿಣಿ ಖ್ಯಾತಿಯ ಜನಪ್ರಿಯ ನಟ ಶರತ್ ಬಾಬು ಇನ್ನಿಲ್ಲ

Twitter
Facebook
LinkedIn
WhatsApp
Untitled 14

ಕನ್ನಡದ ಅಮೃತವರ್ಷಿಣಿ (Amruthavarshini) ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು (Sharath Babu) ಇಂದು (ಮೇ 22) ರಂದು ಹೈದರಾಬಾದ್​ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ.

ಶರತ್ ಬಾಬು ಅವರನ್ನು ಏಪ್ರಿಲ್​ನ ಮೊದಲ ವಾರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ತುಸು ಚೇತರಿಸಿಕೊಂಡ ಬಳಿಕ ಅವರನ್ನು ಹೈದರಾಬಾದ್​ಗೆ ಕರೆದೊಯ್ಯಲಾಗಿತ್ತು. ಅದಾದ ಬಳಿಕ ಅಲ್ಲಿ ಮತ್ತೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಏಪ್ರಿಲ್ 20 ರ ಸುಮಾರಿಗೆ ಹೈದರಾಬಾದ್​ನ ಗಚ್ಚಿಬೌಲಿಯ ಎಐಜಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಐಸಿಯು ವಾರ್ಡ್​ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ವೈದ್ಯರ ಸತತ ಪ್ರಯತ್ನಗಳು ಫಲನೀಡದೆ ಶರತ್ ಬಾಬು ಇಹಲೋಕ ತ್ಯಜಿಸಿದ್ದಾರೆ

1973 ರಲ್ಲಿ ಚಿತ್ರರಂಗ ಪ್ರವೇಶಿಸಿದ ಶರತ್ ಬಾಬು ತೆಲುಗು, ತಮಿಳು ಚಿತ್ರರಂಗದಲ್ಲಿ ಬಹು ಜನಪ್ರಿಯ ನಟರಾಗಿದ್ದವರು. ಸಿನಿಮಾ ನಾಯಕನಾಗಿ, ಎರಡನೇ ನಾಯಕನಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದು ಸಮಯದಲ್ಲಿ ಸ್ಟಾರ್ ಆಗಿ ಸಹ ಮೆರೆದಿದ್ದಾರೆ. ರಜನೀಕಾಂತ್​ ಜೊತೆಗೆ ಮುತ್ತು, ಅರುಣಾಚಲಂ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ಶರತ್ ಬಾಬು ನಟಿಸಿದ್ದಾರೆ. ತಮ್ಮ 40 ವರ್ಷದ ಸಿನಿ ಬದುಕಿನಲ್ಲಿ ಸುಮಾರು 200 ಕ್ಕೂ ಹೆಚ್ಚು ಪಾತ್ರಗಳಲ್ಲಿ ಶರತ್ ಬಾಬು ನಟಿಸಿದ್ದಾರೆ.ಕನ್ನಡದ ಹಲವು ಸಿನಿಮಾಗಳಲ್ಲಿ ಶರತ್ ಬಾಬು ನಟಿಸಿದ್ದಾರೆ. ತುಳಸಿದಳ, ರಣಚಂಡಿ, ಶಕ್ತಿ, ಕಂಪನ, ಗಾಯ, ಹೃದಯ-ಹೃದಯ, ನೀಲ, ನಮ್ಮೆಜಮಾನ್ರು, ಅಮೃತವರ್ಷಿಣಿ ಸಿನಿಮಾದಲ್ಲಿ ಪಾತ್ರವನ್ನು ಕನ್ನಡ ಸಿನಿಮಾ ಪ್ರೇಮಿಗಳು ಮರೆಯುವಂತಿಲ್ಲ. ಕನ್ನಡದ ಪ್ರೀತಿಗಾಗಿ ಧಾರಾವಾಹಿಯಲ್ಲಿಯೂ ಶರತ್ ಬಾಬು ನಟಿಸಿದ್ದಾರೆ. ತೆಲುಗು, ತಮಿಳಿನಲ್ಲಿ ಚಿರಂಜೀವಿ, ಕಮಲ್ ಹಾಸನ್ ಇನ್ನೂ ಹಲವು ಮೇರು ಕಲಾವಿದರೊಟ್ಟಿಗೆ ಶರತ್ ಬಾಬು ನಟಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist