ಗುರುವಾರ, ಮಾರ್ಚ್ 28, 2024
ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!-ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ; ಚುನಾವಣೆಯ ರಣಕಹಳೆ ಶುರು.!-ಉಡುಪಿ: ನೇಜಾರಿನ ನಾಲ್ವರ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಕೊಲೆ ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ.!-ಜಿಲ್ಲೆಯಲ್ಲಿ ಸದ್ಯಕ್ಕೆ ರೇಶನಿಂಗ್ ಇಲ್ಲ; ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮೆಜಾನ್‌ನಲ್ಲಿ 2ನೇ ಸುತ್ತಿನ ವಜಾ ಪ್ರಕ್ರಿಯೆ ಆರಂಭ – 3 ತಿಂಗಳೊಳಗೆ 27 ಸಾವಿರ ಮಂದಿ ಮನೆಗೆ

Twitter
Facebook
LinkedIn
WhatsApp
amazon
 

ವಾಷಿಂಗ್ಟನ್: ಇ-ಕಾಮರ್ಸ್ ದೈತ್ಯ ಅಮೆಜಾನ್ (Amazon) ಈ ವರ್ಷದ 2ನೇ ಸುತ್ತಿನ ಉದ್ಯೋಗಿಗಳ ಕಡಿತವನ್ನು ಘೋಷಿಸಿದೆ. ಕಳೆದ ಬಾರಿ 18,000 ಉದ್ಯೋಗಿಗಳನ್ನು ಕಡಿತಗೊಳಿಸುವುದಾಗಿ ತಿಳಿಸಿದ್ದ ಅಮೆಜಾನ್ ಈ ಬಾರಿ 9,000 ಉದ್ಯೋಗಿಗಳನ್ನು (Employees) ವಜಾಗೊಳಿಸುವುದಾಗಿ (Layoffs) ಹೇಳಿದೆ.

IBM Job Cuts to Impact More than 240 Workers in California

ಅಮೆಜಾನ್ ಸಿಇಒ ಆಂಡಿ ಜಾಸ್ಸಿ ತನ್ನ ಉದ್ಯೋಗಿಗಳಿಗೆ ಪತ್ರ ಬರೆದು, ವಜಾಗೊಳಿಸುತ್ತಿರುವ ಬಗ್ಗೆ ತಿಳಿಸಿದ್ದಾರೆ. ಈ ಮೂಲಕ ಕಳೆದ 3 ತಿಂಗಳುಗಳಿಂದ ಕಂಪನಿ 27,000ಕ್ಕೂ ಅಧಿಕ ಉದ್ಯೋಗಿಗಳನ್ನು ಕಡಿತಗೊಳಿಸುತ್ತಿದೆ. ಇದು ಕಂಪನಿಯ ಇತಿಹಾಸದಲ್ಲೇ ಅತಿ ದೊಡ್ಡ ವಜಾ ಆಗಿದೆ.

ಅನಿಶ್ಚಿತ ಆರ್ಥಿಕತೆ ಹಾಗೂ ಭವಿಷ್ಯದ ಕಾರಣದಿಂದ ಕಂಪನಿ ತನ್ನ ವೆಚ್ಚಗಳನ್ನು ಹೆಚ್ಚು ಸುವ್ಯವಸ್ಥಿತವಾಗಿಡಲು ಯೋಜಿಸುತ್ತಿದೆ. ಇದರ ಪರಿಣಾಮವಾಗಿ ಕಂಪನಿಯ ಕೆಲ ಸ್ಥಾನಗಳನ್ನು ತೆಗೆದುಹಾಕಲಾಗುತ್ತಿದೆ. ಈ ಹಿಂದೆ ಘೋಷಿಸಲಾಗಿದ್ದ 18,000 ಉದ್ಯೋಗಿಗಳ ವಜಾದೊಂದಿಗೆ 9,000 ಉದ್ಯೋಗಿಗಳ ಕಡಿತವನ್ನೂ ಮಾಡಲಾಗುತ್ತಿದೆ ಎಂದು ಆಂಡಿ ಜಾಸ್ಸಿ ತಮ್ಮ ಉದ್ಯೋಗಿಗಳಿಗೆ ತಿಳಿಸಿದ್ದಾರೆ.

Amazon plans to lay off 10,000 corporate and technology employees: Report

ವಜಾಗೊಳ್ಳುತ್ತಿರುವ ಉದ್ಯೋಗಿಗಳಿಗಾಗಿ ಕಂಪನಿ ಪಾವತಿ, ಆರೋಗ್ಯ ವಿಮೆಯ ಪ್ರಯೋಜನ ಹಾಗೂ ಬಾಹ್ಯ ಉದ್ಯೋಗ ನಿಯೋಜನೆಗೆ ಬೆಂಬಲ ಸೇರಿದಂತೆ ಹಲವು ಭರವಸೆಗಳನ್ನೂ ನೀಡಲಾಗಿದೆ. ಆದರೆ ಇತ್ತೀಚೆಗೆ ವಿಶ್ವದ ಜನಪ್ರಿಯ ಬೃಹತ್ ಕಂಪನಿಗಳು ಈ ರೀತಿ ಉದ್ಯೋಗ ಕಡಿತಗಳನ್ನು ನಡೆಸುತ್ತಿರುವುದು ಭಾರೀ ಆತಂಕ ಮೂಡಿಸುತ್ತಿದೆ.

amazon india: Inside Amazon's systematic campaign to boost its private  brands in India - The Economic Times

2022ರಲ್ಲಿ 11,000 ಉದ್ಯೋಗಿಗಳನ್ನು ವಜಾಗೊಳಿಸಿದ್ದ ಫೇಸ್‌ಬುಕ್ ಕಳೆದ ವಾರವಷ್ಟೇ ಮತ್ತೆ 10,000 ಸಿಬ್ಬಂದಿಯನ್ನು ತೆಗೆದುಹಾಕುವುದಾಗಿ ಹೇಳಿದೆ. ಈ ಮೂಲಕ ಫೇಸ್‌ಬುಕ್ 2ನೇ ಸುತ್ತಿನ ವಜಾಗೆ ಕೈ ಹಾಕಿದ್ದು, ಅಮೆಜಾನ್ ಕೂಡಾ ಇಂತಹದ್ದೇ ತೀರ್ಮಾನಕ್ಕೆ ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ