ಬುಧವಾರ, ಮೇ 1, 2024
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮೆಜಾನ್ ಹೆಸರಲ್ಲಿ ಕೆಲಸದ ಆಮಿಷ : ಇಬ್ಬರಿಗೆ 17.50 ಲಕ್ಷ ವಂಚನೆ.

Twitter
Facebook
LinkedIn
WhatsApp
ಅಮೆಜಾನ್ ಹೆಸರಲ್ಲಿ ಕೆಲಸದ ಆಮಿಷ : ಇಬ್ಬರಿಗೆ 17.50 ಲಕ್ಷ ವಂಚನೆ.

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ವಂಚಿಸುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಅಂತೆಯೇ ಇದೀಗ ಅಮೆಜಾನ್‌ (Amazon ) ಕಂಪೆನಿಯಲ್ಲಿ ಹೂಡಿಕೆ ಮಾಡಿದ್ರೆ ಉದ್ಯೋಗದ ಜೊತೆಗೆ ಕಮಿಷನ್‌ ನೀಡುವುದಾಗಿ ಇಬ್ಬರು ಯುವಕರಿಗೆ ವಂಚಿಸಿದ ಘಟನೆ ಬೆಂಗಳೂರಲ್ಲಿ ನಡೆದಿದೆ. ಇಬ್ಬರಿಂದ ಒಟ್ಟು 17.50 ಲಕ್ಷ ರೂಪಾಯಿ ವಂಚನೆ ನಡೆಸಲಾಗಿದೆ.

ಬೆಂಗಳೂರು ನಗರದ ಕೂಡ್ಲು ರಸ್ತೆಯ ನಿವಾಸಿಯಾಗಿರುವ ಶ್ರೀನಿವಾಸ್‌ ಎಂಬವರಿಗೆ ವ್ಯಕ್ತಿಯೋರ್ವ ಕರೆ ಮಾಡಿ ಅಮೆಜಾನ್‌ ಕಂಪೆನಿಯಲ್ಲಿ ಹಣ ಹೂಡಿಕೆ ಮಾಡುವಂತೆ ಸೂಚಿಸಿ ದ್ದಾನೆ. ಹಣ ಹೂಡಿಕೆ ಮಾಡಿದ್ರೆ ನಿಮಗೆ ಕಂಪನಿಯಲ್ಲಿ ಉನ್ನತ ಹುದ್ದೆಯನ್ನು ನೀಡುವುದರ ಜೊತೆಗೆ ಒಳ್ಳೆಯ ಕಮಿಷನ್‌ ಸಿಗುತ್ತೆ ಅಂತಾ ಆಸೆಯನ್ನು ಹುಟ್ಟಿಸಿದ್ದ. ಇದನ್ನು ನಂಬಿದ ಶ್ರೀನಿವಾಸ್‌ ಅವರು ಬರೋಬ್ಬರಿ ೧೨.೧೨ ಲಕ್ಷ ರೂಪಾಯಿ ಹೂಡಿಕೆಯನ್ನು ಮಾಡಿದ್ದರು. ಆದರೆ ಹೂಡಿಕೆ ಮಾಡಿದ ಹಣಕ್ಕೆ ಕಮಿಷನ್‌ ಆಗಲಿ, ಮಾಡಿದ ಕೆಲಸಕ್ಕೆ ವೇತನವಾಗಲಿ ಬಂದಿರಲಿಲ್ಲ. ಅಲ್ಲದೇ ಹೂಡಿಕೆ ಮಾಡುವಂತೆ ಆಮಿಷವೊಡ್ಡಿದ್ದ ವ್ಯಕ್ತಿಯೂ ಮೊಬೈಲ್‌ ಕರೆ ಸ್ವೀಕಾರ ಮಾಡುವುದನ್ನೇ ನಿಲ್ಲಿಸಿದ್ದಾನೆ. ಇದರಿಂದಾಗಿ ತಾನು ವಂಚನೆಗೆ ಒಳಗಾಗಿ ದ್ದೇನೆ ಎನ್ನುವುದು ಅರಿವಿಗೆ ಬರುತ್ತಿದ್ದಂತೆಯೇ ಶ್ರೀನಿವಾಸ ಅವರು ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ಇಷ್ಟೇ ಅಲ್ಲಾ ಹೊಸಕೆರೆ ಹಳ್ಳಿಯಲ್ಲಿಯೂ ಇಂತಹದ್ದೇ ಘಟನೆ ನಡೆದಿದೆ. ಇಲ್ಲಿನ ಹರ್ಷವರ್ಧನ್‌ ಎಂಬ ಯುವಕನಿಗೆ ಉದ್ಯೋಗ ಕೊಡಿಸುವುದಾಗಿ ವಂಚಿಸಿ ಬರೋಬ್ಬರಿ ೫.೪೧ ಲಕ್ಷ ರೂಪಾಯಿ ಹಣವನ್ನು ಪಡೆಯಲಾಗಿತ್ತು. ಹಣವನ್ನು ವರ್ಗಾವಣೆ ಮಾಡಿದ್ದ ಹರ್ಷವರ್ಧನ್‌ ಸುಮಾರು ೨೨ ಪರೀಕ್ಷೆಗಳನ್ನೂ ಎದುರಿಸಿದ್ದ. ನಂತರದಲ್ಲಿ ತಾನು ವಂಚನೆಗೆ ಒಳಗಾಗಿದ್ದೇನೆ ಅನ್ನೋ ತಿಳಿಯುತ್ತಲೇ ಹರ್ಷವರ್ಧನ್‌ ಸೈಬಲ್‌ ಪೊಲೀಸರಿಗೆ ದೂರು ನೀಡಿದ್ದಾರೆ.
ಸಿಲಿಕಾನ್‌ ಸಿಟಿಯಲ್ಲಿ ಇಂತಹ ವಂಚನೆ ಪ್ರಕರಣಗಳು ನಡೆಯುತ್ತಿದ್ದರೂ ಕೂಡ ಜನರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಪೊಲೀಸರು ಈ ಕುರಿತು ಜಾಗೃತಿಯನ್ನು ಮೂಡಿಸುತ್ತಿದ್ದರೂ ಕೂಡ ಜನರು ವಂಚನೆಗೆ ಒಳಗಾಗುತ್ತಲೇ ಇದ್ದಾರೆ. ಇನ್ಮುಂದೆ ಆದ್ರೂ ಇಂತಹ ಕರೆಗಳು ಬಂದಾಗ ಅದನ್ನು ಖಚಿತ ಪಡಿಸಿಕೊಂಡೇ ವ್ಯವಹಾರ ಮಾಡುವುದು ಒಳಿತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು