ಭಾನುವಾರ, ಜೂನ್ 16, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮೆರಿಕದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ಸಾವು..!

Twitter
Facebook
LinkedIn
WhatsApp
ಅಮೆರಿಕದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ಸಾವು..!

ವಾಷಿಂಗ್ಟನ್‌: ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳ ಸಾವಿನ ಸರಣಿ ಮುಂದುವರಿದಿದೆ. ಕಳೆದ ವಾರ ಜಾರ್ಜಿಯಾದ ಆಲ್ಫಾರೆಟ್ಟಾ ಬಳಿ ನಡೆದ ಕಾರು ಅಪಘಾತ (Car Crash)ದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇವರೆಲ್ಲರೂ 18 ವರ್ಷದವರು ಎಂದು ಮೂಲಗಳು ತಿಳಿಸಿವೆ.

ಆರ್ಯನ್‌ ಜೋಷಿ, ಶ್ರಿಯಾ ಅವಸರಲ ಮತ್ತು ಅನ್ವಿ ಶರ್ಮಾ ಮೃತ ವಿದ್ಯಾರ್ಥಿಗಳು. ಈ ಪೈಕಿ ಆರ್ಯನ್‌ ಜೋಷಿ, ಶ್ರೀಯಾ ಅವಸರಳ ಸ್ಥಳದಲ್ಲೇ ಅಸುನೀಗಿದ್ದರೆ, ಅನ್ವಿ ಶರ್ಮಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಗಾಯಯೊಂಡವರನ್ನು ಋತ್ವಿಕ್‌ ಸೋಮೆಪಳ್ಳಿ ಹಾಗೂ ಮೊಹಮ್ಮದ್‌ ಲಿಯಾಕತ್‌ ಎಂದು ಗುರುತಿಸಲಾಗಿದ್ದು, ಅವರಿಗೆ ಆಲ್ಫಾರೆಟ್ಟಾದಲ್ಲಿನ ನಾರ್ತ್ ಫುಲ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರಣವೇನು?

ಈ ಐವರು ಆಲ್ಫಾರೆಟ್ಟಾ ಹೈಸ್ಕೂಲ್‌ ಮತ್ತು ಜಾರ್ಜಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು. ಇವರಿದ್ದ ಕಾರು ಅತಿ ವೇಗದಲ್ಲಿ ಸಂಚರಿಸುತ್ತಿದ್ದುದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಚಾಲಕನ ನಿಯಂತ್ರಣಕ್ಕೆ ಸಿಗದೆ ಮೇ 14ರಂದು ಕಾರು ಆಲ್ಫಾರೆಟ್ಟಾ ಬಳಿ ಅಪಘಾತಕ್ಕೀಡಾಗಿತ್ತು. ʼʼಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ತಲೆಕೆಳಗಾಗಿ ನಿಂತಿತ್ತುʼʼ ಎಂದಯ ಪ್ರತ್ಯಕ್ಷದರ್ಶಿಯೊಬ್ಬರು ಘಟನೆಯ ತೀವ್ರತೆಯನ್ನು ವಿವರಿಸಿದ್ದಾರೆ.

ಪ್ರತಿಭಾನ್ವಿತ ವಿದ್ಯಾರ್ಥಿಗಳು

ಇವರೆಲ್ಲ ಪ್ರತಿಭಾನ್ವಿತ ವಿದ್ಯಾರ್ಥಿಗಳು. ಶ್ರೀಯಾ ಅವಸರಳ ಯುಜಿಎ ಶಿಕಾರಿ (UGA Shikaari) ಡ್ಯಾನ್ಸ್‌ ತಂಡದ ಸದಸ್ಯೆಯಾಗಿದ್ದರು. ಇನ್ನು ಅನ್ವಿ ಶರ್ಮಾ ಯುಜಿಎ ಕಲಾಕಾರ್‌ (UGA Kalakaar) ಮತ್ತು ಕ್ಯಾಪೆಲ್ಲ ಗ್ರೂಪ್‌ (Capella Group)ನ ಗಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ನೀವೊಮ್ಮ ಅದ್ಭುತ ಡ್ಯಾನ್ಸರ್‌. ನಿಮ್ಮ ಕಣ್ಮರೆಯ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲʼʼ ಎಂದು ಶಿಕಾರಿ ತಂಡ ಆಘಾತ ಸೂಚಿಸಿದೆ. ಕಲಾಕಾರ್‌ ಗ್ರೂಪ್‌ ಕೂಡ ಅನ್ವಿ ಶರ್ಮಾಗೆ ಶ್ರದ್ಧಾಂಜಲಿ ಸಲ್ಲಿಸಿದೆ.

ಆರ್ಯನ್‌ ಜೋಷಿ ಮುಂದಿನ ವಾರ ಪದವಿ ಪಡೆಯಲು ಸಿದ್ಧತೆ ನಡೆಸಿಕೊಂಡಿದ್ದರು. ಆಲ್ಫಾರೆಟ್ಟಾ ಹೈ ಕ್ರಿಕೆಟ್‌ ಟೀಮ್‌ (Alpharetta High cricket team) ತನ್ನ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಆರ್ಯನ್‌ ಜೋಷಿ ನಿಧನಕ್ಕೆ ನೋವು ತೋಡಿಕೊಂಡಿದೆ. ʼʼಆರ್ಯನ್‌ ಜೋಷಿ ನಮ್ಮ ಬಹು ದೊಡ್ಡ ಬೆಂಬಲಿಗರಾಗಿದ್ದರು ಮತ್ತು ತಮ್ಮ ತಂಡದ ಬೆನ್ನೆಲುಬಾಗಿದ್ದರು. ನಮ್ಮ ತಂಡದ ಗೆಲುವಿನಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದು. ಅವರ ಅಗಲಿಕೆ ನಮ್ಮ ಪಾಲಿಗೆ ತುಂಬಲಾರದ ನಷ್ಟʼʼ ಎಂದು ಬರೆದುಕೊಂಡಿದೆ

ಸರಣಿ ಸಾವು

ಕೆಲವು ದಿನಗಳಿಂದ ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಸರಣಿ ಸಾವು ಗಾಬರಿ ಹುಟ್ಟಿಸುವಂತಿದೆ. 2024ರ ಆರಂಭದಿಂದ, ಅಮೆರಿಕದಲ್ಲಿ ಕನಿಷ್ಠ ಅರ್ಧ ಡಜನ್ ಭಾರತೀಯ ಮತ್ತು ಭಾರತೀಯ ಮೂಲದ ವಿದ್ಯಾರ್ಥಿಗಳ ಸಾವುಗಳು ಸಂಭವಿಸಿವೆ. ಇವರ ಮೇಲಿನ ದಾಳಿಗಳ ಸಂಖ್ಯೆಯಲ್ಲಿ ಹೆಚ್ಚಳ ಆಗಿದ್ದು, ಸಮುದಾಯದಲ್ಲಿ ಆತಂಕಕ್ಕೂ ಕಾರಣವಾಗಿದೆ.

ಮಾರ್ಚ್‌ನಲ್ಲಿ ಮಿಸೌರಿಯ ಸೇಂಟ್ ಲೂಯಿಸ್‌ನಲ್ಲಿ ಭಾರತದ 34 ವರ್ಷದ ಶಾಸ್ತ್ರೀಯ ನೃತ್ಯಗಾರ ಅಮರನಾಥ್ ಘೋಷ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಪರ್ಡ್ಯೂ ವಿಶ್ವವಿದ್ಯಾನಿಲಯದ 23 ವರ್ಷದ ಭಾರತೀಯ-ಅಮೆರಿಕನ್ ವಿದ್ಯಾರ್ಥಿ ಸಮೀರ್ ಕಾಮತ್ ಫೆಬ್ರವರಿ 5ರಂದು ಇಂಡಿಯಾನಾದ ವನ್ಯ ಉದ್ಯಾನದಲ್ಲಿ ಶವವಾಗಿ ಪತ್ತೆಯಾಗಿದ್ದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ