ಗುರುವಾರ, ಏಪ್ರಿಲ್ 25, 2024
ಮಂಗಳೂರು: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮೆರಿಕದ ಶಾಲೆಯಲ್ಲಿ ಗುಂಡಿನ ದಾಳಿ – ಮೂವರು ಮಕ್ಕಳು ಸೇರಿ 6 ಜನ ಸಾವು

Twitter
Facebook
LinkedIn
WhatsApp
Rain Report1583178931 6

ವಾಷಿಂಗ್ಟನ್: ಅಮೆರಿಕದಲ್ಲಿ (America) ಗುಂಡಿನ ದಾಳಿ (Shooting) ಪ್ರಕರಣಗಳು ಒಂದಾದಮೇಲೊಂದರಂತೆ ವರದಿಯಾಗುತ್ತಲೇ ಇದೆ. ಸೋಮವಾರ ಶಾಲೆಯೊಂದರಲ್ಲಿ (School) ನಡೆದ ಗುಂಡಿನ ದಾಳಿ ಇಡೀ ರಾಷ್ಟ್ರವನ್ನು ಭಯಭೀತಗೊಳಿಸಿದೆ. ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು 6 ಜನರು ಸಾವನ್ನಪ್ಪಿದ್ದಾರೆ.

ಅಮೆರಿಕದ ನ್ಯಾಶ್ವಿಲ್ಲೆಯಲ್ಲಿರುವ (Nashville) ಪ್ರಾಥಮಿಕ ಶಾಲೆಯಲ್ಲಿ ಗುಂಡಿನ ದಾಳಿ ನಡೆದಿದ್ದು, ಒಟ್ಟು 6 ಜನರು ಮೃತಪಟ್ಟಿದ್ದಾರೆ. ಹಲವರಿಗೆ ಗಾಯಗಳಾಗಿವೆ. ಇದು 2023ರಲ್ಲಿ ಅಮೆರಿಕದ ಶಾಲೆಗಳಲ್ಲಿ ನಡೆದಿರುವ 13ನೇ ಗುಂಡಿನ ದಾಳಿಯಾಗಿದೆ. ಮಾತ್ರವಲ್ಲದೇ ಅತ್ಯಂತ ಭಯಾನಕ ಎನಿಸಿಕೊಂಡಿದೆ.

ಶೂಟರ್ ಅನ್ನು ಆಡ್ರೆ ಹೇಲ್ (28) ಎಂದು ಗುರುತಿಸಲಾಗಿದೆ. ಆಕೆ ನ್ಯಾಶ್ವಿಲ್ಲೆಯಲ್ಲಿರುವ ಕವೆನೆಂಟ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದಳು ಎನ್ನಲಾಗಿದೆ. ಆಕೆ ಶಾಲೆಯಲ್ಲಿ 3 ಮಕ್ಕಳ ಮೇಲೆ ದಾಳಿ ಮಾಡಿ ಕೊಂದಿದ್ದಾಳೆ. ಮಾತ್ರವಲ್ಲದೇ ಇಡೀ ದುಷ್ಕೃತ್ಯವನ್ನು ಆಕೆ ಮೊದಲೇ ಯೋಜಿಸಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಘಟನೆ ಬಗ್ಗೆ ತಿಳಿಯುತ್ತಲೇ ಸ್ಥಳಕ್ಕೆ ಬಂದ ಪೊಲೀಸರು ಸ್ಥಿತಿಯನ್ನು ನಿಯಂತ್ರಿಸಲು ಹೇಲ್ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಆಕೆಯೂ ಸಾವನ್ನಪ್ಪಿದ್ದಾಳೆ.

ನ್ಯಾಶ್ವಿಲ್ಲೆ ಪ್ರಾಥಮಿಕ ಶಾಲೆಯಲ್ಲಿ ಗುಂಡಿನ ದಾಳಿ ನಡೆಸುವುದು ಆರೋಪಿಯ ಒಂದೇ ಗುರಿಯಾಗಿರಲಿಲ್ಲ. ಬದಲಿಗೆ ಆಕೆ ಇನ್ನೂ ಅನೇಕ ಶಾಲೆಗಳನ್ನು ಗುರಿಯಾಗಿಸಿಕೊಂಡಿದ್ದಳು. ಆಕೆ ದಿ ಕವೆನಂಟ್ ಶಾಲೆಯ ಮುಖ್ಯಸ್ಥನನ್ನೂ ಗುಂಡಿಕ್ಕಿ ಕೊಂದಿದ್ದು, ಆಕೆಯ ದಾಳಿಯ ಮುಖ್ಯ ಗುರಿ ಇದೇ ಆಗಿತ್ತು ಎಂಬುದು ತಿಳಿದುಬಂದಿದೆ. 

ವರದಿಗಳ ಪ್ರಕಾರ ಆಡ್ರೆ ತೃತೀಯ ಲಿಂಗಿಯಾಗಿದ್ದು, ಆಕೆ ಕಲಿತಿದ್ದ ಪ್ರಾಥಮಿಕ ಶಾಲೆಯ ವಿರುದ್ಧ ಅಸಮಾಧಾನಗೊಂಡಿದ್ದಳು ಎನ್ನಲಾಗಿದೆ. ಈ ಹಿನ್ನೆಲೆ ಸೇಡು ತೀರಿಸಿಕೊಳ್ಳಲು ಆಕೆ ಶಾಲೆಗಳ ಮೇಲೆ ದಾಳಿ ನಡೆಸಲು ಮುಂದಾಗಿದ್ದಳು. ಇದೀಗ ನ್ಯಾಶ್ವಿಲ್ಲೆ ಶಾಲೆಯಲ್ಲಿ ಗುಂಡಿನ ದಾಳಿಗೆ 6 ಜನ ಸಾವನ್ನಪ್ಪಿದ್ದು, ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ