ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆಯ ತೀರ್ಪು ನಾಳೆ ಪ್ರಕಟ; ಲಭಿಸಲಿದೆಯೇ ಬಿಡುಗಡೆ ಭಾಗ್ಯ..!

Twitter
Facebook
LinkedIn
WhatsApp
ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆಯ ತೀರ್ಪು ನಾಳೆ ಪ್ರಕಟ; ಲಭಿಸಲಿದೆಯೇ ಬಿಡುಗಡೆ ಭಾಗ್ಯ..!

ನವದೆಹಲಿ: ದಿಲ್ಲಿ ಅಬಕಾರಿ ನೀತಿ ಹಗರಣ (Delhi Excise Policy Case)ದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರ ಜಾಮೀನು ಅರ್ಜಿಯ ವಿಚಾರಣೆಯ ಕುರಿತಾದ ದೆಹಲಿ ಹೈಕೋರ್ಟ್‌ (Delhi high court)ನ ತೀರ್ಪು ನಾಳೆ (ಏಪ್ರಿಲ್‌ 9) ಹೊರಬೀಳುವ ಸಾಧ್ಯತೆ ಇದೆ. ಸದ್ಯ ದೆಹಲಿಯ ತಿಹಾರ್ ಜೈಲಿನಲ್ಲಿರುವ ಅವರು ತನ್ನ ಬಂಧನ ಮತ್ತು ಇ.ಡಿ ರಿಮ್ಯಾಂಡ್‌ ಅನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರುವ ಹೈಕೋರ್ಟ್‌ನ ನ್ಯಾ. ಸ್ವರಾನಾ ಕಾಂತ ಶರ್ಮಾ ಅವರುಳ್ಳ ಪೀಠ, ನಾಳೆ ಅಪರಾಹ್ನ 2.30ರ ಸುಮಾರಿಗೆ ತೀರ್ಪು ಪ್ರಕಟಿಸಲಿದ್ದಾರೆ ಎನ್ನಲಾಗಿದೆ. ಚುನಾವಣೆಯ ಸಂದರ್ಭದಲ್ಲಿ ತಮ್ಮನ್ನು ಬಂಧಿಸಿರುವ ಕ್ರಮವು ಈ ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾದುದು. ಇದರಿಂದ ರಾಜಕೀಯ ಪ್ರತಿರೋಧಗಳ ವಿರುದ್ಧ ಹೋರಾಡುವ ಅವಕಾಶದಿಂದ ವಂಚಿತವಾದಂತಾಗಿದೆ ಎಂದು ಕೇಜ್ರಿವಾಲ್ ಅರ್ಜಿಯಲ್ಲಿ ವಾದಿಸಿದ್ದಾರೆ.

ಇತ್ತ ಜಾರಿ ನಿರ್ದೇಶನಾಲಯ (ಇ.ಡಿ) ಈ ವಾದವನ್ನು ತಳ್ಳಿ ಹಾಕಿದ್ದು, ಮುಂಬರುವ ಚುನಾವಣೆಗಳ ಆಧಾರದ ಮೇಲೆ ಕೇಜ್ರಿವಾಲ್ ಅವರಿಗೆ ಬಂಧನದಿಂದ ವಿನಾಯಿತಿ ನೀಡಲು ಸಾಧ್ಯವಿಲ್ಲ. ಯಾಕೆಂದರೆ ಕಾನೂನು ಅವರಿಗೆ ಮತ್ತು ಜನ ಸಾಮಾನ್ಯರಿಗೆ ಒಂದೇ ರೀತಿಯಲ್ಲಿ ಅನ್ವಯವಾಗುತ್ತದೆ ಎಂದು ಹೇಳಿದೆ.

ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಇ.ಡಿ ಬಂಧಿಸಿತ್ತು. ನ್ಯಾಯಾಲಯದ ಆದೇಶದ ಪ್ರಕಾರ 10 ದಿನಗಳ ಕಾಲ ಇ.ಡಿ ವಶದಲ್ಲಿದ್ದರು.ಬಳಿಕ ಅವರನ್ನು ತಿಹಾರ್‌ ಜೈಲಿಗೆ ಕಳುಹಿಸಲಾಗಿತ್ತು. ಈ ಹಿಂದೆ, ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಕೇಜ್ರಿವಾಲ್ ನೇರ ಭಾಗಿಯಾಗಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿತ್ತು.

ಏನಿದು ಪ್ರಕರಣ?

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಕೆ. ಕವಿತಾ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಕೂಡ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಜಾರಿ ನಿರ್ದೇಶನಾಲಯವು ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ. ಮತ್ತೊಂದೆಡೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಸಲ್ಲಿಸಿದ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ನಾಳೆ ಯುಗಾದಿಯಾಗಿದ್ದು, ಹಬ್ಬ ಅವರ ಪಾಲಿಗೆ ಶಿಹಿ ತಂಡುಕೊಡುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ