ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅರ್ಹರನ್ನು ಗುರುತಿಸಿದ ಪರಮೇಶ್ವರ್! ಹಿಂಬಾಲಕರನ್ನು ಗುರುತಿಸಿದ ಸಿದ್ದು, ಡಿಕೆಶಿ 2023ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬಲ್ಲರೆ?

Twitter
Facebook
LinkedIn
WhatsApp
ಅರ್ಹರನ್ನು ಗುರುತಿಸಿದ ಪರಮೇಶ್ವರ್! ಹಿಂಬಾಲಕರನ್ನು ಗುರುತಿಸಿದ ಸಿದ್ದು, ಡಿಕೆಶಿ 2023ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬಲ್ಲರೆ?

2013ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪರಮೇಶ್ವರ್ ಉತ್ತಮವಾಗಿ ಪಕ್ಷವನ್ನು ಸಂಘಟಿಸಿದ್ದರು. ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಏರಿತ್ತು. ಸಿದ್ದರಾಮಯ್ಯನವರು ಕಾಂಗ್ರೆಸ್ನ ಮುಖವಾಗಿ ಕಾರ್ಯನಿರ್ವಹಿಸಿದ್ದರು.

ಪರಮೇಶ್ವರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ತನ್ನ ಹಿಂಬಾಲಕರ ಪಡೆಯನ್ನು ಸೃಷ್ಟಿಸದೆ, ಅರ್ಹರನ್ನು ಪಕ್ಷದ ಹುದ್ದೆಗಳಿಗೆ ತಂದು ಕೂರಿಸಿದ್ದರು ಎಂಬ ಮಾತಿದೆ. ಓರ್ವ ವ್ಯಕ್ತಿ ಯಾರ ಬೆಂಬಲಿಗನು ಆಗಿರಲಿ, ಆದರೆ ಅರ್ಹತೆ ಇದ್ದರೆ ಸಾಕು ಎಂಬ ತೀರ್ಮಾನಕ್ಕೆ ಪರಮೇಶ್ವರ್ ಬಂದಿದ್ದರು ಹಾಗೂ
ಅದರ ಆಧಾರದ ಮೇಲೆ ಕಾರ್ಯನಿರ್ವಹಿಸಿದ್ದರು ಎಂಬುದನ್ನು ರಾಜಕೀಯ ವಿಶ್ಲೇಷರು ಅಭಿಪ್ರಾಯ ಪಡುತ್ತಾರೆ. ಅಲ್ಲದೆ ಸದಾ ತನ್ನ ವೈಯಕ್ತಿಕ ರಾಜಕಾರಣದ ಬಗ್ಗೆ ಹಾಗೂ ತಾನೇನು ಆಗುತ್ತೇನೆ ಎಂಬುದರ ಬಗ್ಗೆ ಚಿಂತೆ ಮಾಡದ ಪರಮೇಶ್ವರ್, ಪಕ್ಷದ ಏಳಿಗೆಗಾಗಿ ಶ್ರಮಿಸಿದರು.
ಎಲ್ಲಿಯೂ ಗುಂಪುಗಾರಿಕೆಗೆ ಅವಕಾಶ ನೀಡದೆ, ತನ್ನ ಹಿಂಬಾಲಿಕರ ಪಡೆಯನ್ನು ಸೃಷ್ಟಿ ಮಾಡದೆ ಕಾರ್ಯನಿರ್ವಹಿಸಿದ್ದರು ಎಂಬುದನ್ನು ಕಾಂಗ್ರೆಸ್ ಕಾರ್ಯಕರ್ತರು ಒಪ್ಪುತ್ತಾರೆ. ತನ್ನ ವೈಯಕ್ತಿಕ ರಾಜಕೀಯಕ್ಕೆ ಪ್ರಾಮುಖ್ಯತೆ ನೀಡದ ಕಾರಣದಿಂದಾಗಿ ಅವರು ತನ್ನ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಸೋಲನ್ನು ಅನುಭವಿಸಬೇಕಾಯಿತು.


ಆದರೆ ಕರ್ನಾಟಕದ ಕಾಂಗ್ರೆಸ್ಸಿನ ಈಗಿನ ಪರಿಸ್ಥಿತಿ ಬೇರೆಯದೇ ರೀತಿಯಲ್ಲಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ
ಹಠದಲ್ಲಿ ಬಿದ್ದಿದ್ದಾರೆ. ಈ ಕಾರಣದಿಂದ ತನ್ನ ಬೆಂಬಲಿಗರ ಪಡೆಯನ್ನು ಕಾಂಗ್ರೆಸ್ಸಿನಲ್ಲಿ ಸೃಷ್ಟಿಸಿದ್ದಾರೆ ಹೊರತು ಬೇರೇನು ಮಾಡಿಲ್ಲ ಎಂದು ಅಭಿಪ್ರಾಯ ಪಡುತ್ತಾರೆ ರಾಜಕೀಯ ವಿಶ್ಲೇಷಕರು.

ಎರಡು ನಾಯಕರುಗಳು ಪ್ರತೀ ಜಿಲ್ಲೆಯಲ್ಲೂ ತಮ್ಮ ಬೆಂಬಲಿಗರ ಪಡೆಯನ್ನು ಹೊಂದಿದ್ದಾರೆ. ಪರಮೇಶ್ವರವರನ್ನು ನೋಡಿದರೆ, ಇವರ ಈ ಕಾರ್ಯ ಕರ್ನಾಟಕದ ಕಾಂಗ್ರೆಸ್ಸಿನಲ್ಲಿ ಎರಡು ಬಣಗಳನ್ನು ಸೃಷ್ಟಿ ಮಾಡಿದೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ರಾಜಕೀಯ ವಿಶ್ಲೇಷಕರ ಸ್ಪಷ್ಟ ಅಭಿಪ್ರಾಯ. ಇನ್ನೊಂದು ಕಡೆಯಲ್ಲಿ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ಅವರು ನಾನು ಕಾಂಗ್ರೆಸ್ ಕಟ್ಟಾಳು ಎಂದುಕೊಂಡೆ, ಅವರದೇ ಆದ ಬಣವನ್ನು ಪ್ರತಿ ಜಿಲ್ಲೆಯಲ್ಲಿ ಹೊಂದಿದ್ದಾರೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು. ಆದರೆ ಹರಿಪ್ರಸಾದ್ ಬಣ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣದಷ್ಟು ಪ್ರಬಲವಾಗಿಲ್ಲ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು. ಸಿದ್ದರಾಮಯ್ಯ ಬಣ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗುವುದನ್ನು ಬಿಟ್ಟು ಬೇರೆ ಯೋಚನೆ ಮಾಡಲು ಸಾಧ್ಯವಿಲ್ಲದ ಸ್ಥಿತಿಗೆ ತಲುಪಿದ್ದಾರೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು. ಇದರಿಂದಾಗಿ ಪ್ರತೀ ಹುದ್ದೆಯಲ್ಲೂ ಅರ್ಹರು ಕಾಂಗ್ರೆಸ್ನ ಮುಖ್ಯ ವಾಹಿನಿಯಿಂದ ದೂರ ಇದ್ದಾರೆ ಎನ್ನುತ್ತಾರೆ ಸಾಮಾನ್ಯ ಕಾರ್ಯಕರ್ತರು.

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣ ರಾಜಕೀಯ ಈ ಬಾರಿಯ ಕಾಂಗ್ರೆಸ್ ನ ಹೈಲೈಟ್ಸ್. ಪರಮೇಶ್ವರ ತುಳಿದ ದಾರಿಯಿಂದ ಭಿನ್ನವಾಗಿ ತುಳಿದಿರುವ,ಈ ನಾಯಕರುಗಳು ಕಾಂಗ್ರೆಸ್ಸನ್ನು ಮರಳಿ ಕರ್ನಾಟಕದಲ್ಲಿ ಅಧಿಕಾರಕ್ಕೆ ತರುತ್ತಾರೆಯೆ ಎಂಬುದು ನಮ್ಮ ಮುಂದಿರುವ ಯಕ್ಷಪ್ರಶ್ನೆ?

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ