ಶನಿವಾರ, ಏಪ್ರಿಲ್ 20, 2024
Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಲೋಕ್ ಕುಮಾರ್​ ಸೇರಿದಂತೆ ನಾಲ್ವರು IPS ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

Twitter
Facebook
LinkedIn
WhatsApp
Untitled 15

ಬೆಂಗಳೂರು: ಅಲೋಕ್ ಕುಮಾರ್​ ಸೇರಿದಂತೆ ನಾಲ್ವರು IPS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್​ ಅವರನ್ನು ADGP ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಉಮೇಶ್ ಕುಮಾರ್, ADGP ಕ್ರೈಂ & ಟೆಕ್ನಿಕಲ್ ಸರ್ವಿಸ್​, ಆರ್ ಹಿತೇಂದ್ರ, ADGP ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸೌಮೇಂದು ಮುಖರ್ಜಿ, ADGP ಪೊಲೀಸ್ ಆಡಳಿತ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ಎರಡು ದಿನಗಳ ಹಿಂದೆಯಷ್ಟೇ ಆರು ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಕರ್ನಾಟಕ ಸರ್ಕಾರ ಮತ್ತು 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿತ್ತು. ಕಪಿಲ್ ಮೋಹನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಈವರೆಗೆ ಈ ಹುದ್ದೆಯನ್ನು ಹೆಚ್ಚುವರಿಯಾಗಿ ಪಂಕಜ್ ಕುಮಾರ್ ಪಾಂಡೆ ಅವರು ನಿಭಾಯಿಸುತ್ತಿದ್ದರು. ಸದ್ಯ ಈ ಸೇವೆಯಿಂದ ಪಂಕಜ್ ಅವರನ್ನು ಮುಕ್ತಿಗೊಳಿಸಲಾಗಿದೆ. ಸಹಕಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಎಸ್.ಆರ್. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

ಉಮಾಶಂಕರ್ ಎಸ್.ಆರ್. ಅವರ ವರ್ಗಾವಣೆಯಿಂದ ತೆರವಾಗಿದ್ದ ಸಹಕಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಮಂಜುನಾಥ ಪ್ರಸಾದ್ ಎನ್, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್​ಟಿಸಿ) ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕ್ಕುಮಾರ್ ಅವರನ್ನು ಬೆಂಗಳೂರಿನ ಕೃಷಿ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ. ಈ ಹುದ್ದೆಯನ್ನು ರವಿಶಂಕರ್ ಜೆ ಅವರು ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದರು. ಸದ್ಯ ಈ ಸೇವೆಯಿಂದ ರವಿಶಂಕರ್ ಅವರನ್ನು ಮುಕ್ತಿಗೊಳಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ