ಬುಧವಾರ, ನವೆಂಬರ್ 20, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಅನುದಾನ ಬಿಡುಗಡೆ

Twitter
Facebook
LinkedIn
WhatsApp
ಸಿಎಂ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಅನುದಾನ ಬಿಡುಗಡೆ

ಬೆಂಗಳೂರು: ಕ್ಷೇತ್ರ ಅಭಿವೃದ್ಧಿಗೆ ಅನುದಾನ  ಬಿಡುಗಡೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ನೇತೃತ್ವದ ಕರ್ನಾಟಕ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ​ ಶಾಸಕರು ಆರೋಪ ಮಾಡಿದ್ದರು. ಆದರೆ, ಇದೀಗ ರಾಜ್ಯ ಸರ್ಕಾರ ಬಿಜೆಪಿ ಮತ್ತು ಜೆಡಿಎಸ್​ ಸೇರಿದಂತೆ 45 ಶಾಸಕರ ಕ್ಷೇತ್ರಗಳಿಗೆ ಕ್ರಿಯಾ ಯೋಜನೆ ಅಡಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 161 ಕೋಟಿ ರೂ. ಬಿಡುಗಡೆ ಮಾಡಿದೆ.

ಕಳೆದ ವರ್ಷ ಡಿಸೆಂಬರ್​ನಲ್ಲಿ ನಡೆದಿದ್ದ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ವಸತಿ ಕಾಲೋನಿಗಳನ್ನು ಅಭಿವೃದ್ಧಿಪಡಿಸಲು 1,000 ಕೋಟಿ ರೂಪಾಯಿಗಳ ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೇ ವೇಳೆ ಮುಂದಿನ ವರ್ಷದಿಂದ ಹೆಚ್ಚಿನ ಅನುದಾನ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದರು. ಅದರಂತೆ ಇದೀಗ ಎರಡು ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣ ಬಿಡುಗಡೆ ಮಾಡಿದ್ದಾರೆ.

ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಇದೇ ವರ್ಷ ಜನವರಿಯಲ್ಲಿ ರಾಜ್ಯ ಸರ್ಕಾರ 176 ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿತ್ತು. ಈ ವೇಳೆ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಬಾಕಿ ಉಳಿದಿತ್ತು. ಇದೀಗ ಶಾಸಕರ ಒತ್ತಡದ ಮೇರೆಗೆ ಅನುದಾನ ನೀಡಲಾಗಿದೆ.

ಡಿ.9-20ರವರೆಗೆ ಚಳಿಗಾಲದ ಅಧಿವೇಶನ, ಅಗತ್ಯ ಸಿದ್ಧತೆಗೆ ಸ್ಪೀಕರ್ ಸೂಚನೆ:

ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 20 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶುಕ್ರವಾರ ಮಾಹಿತಿ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖಾದರ್, ಡಿಸೆಂಬರ್ 9 ರಂದು ಅಧಿವೇಶನ ಪ್ರಾರಂಭವಾಗುವ ಸಾಧ್ಯತೆಗಳಿವೆ. ರಾಜ್ಯ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯಲಿದ್ದು, ಚರ್ಚೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ದಿನಾಂಕಗಳನ್ನು ಪ್ರಕಟಿಸುತ್ತಾರೆಂದು ಹೇಳಿದರು.

ಈಗಾಗಲೇ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಅಧಿವೇಶನವನ್ನು ಪರಿಣಾಮಕಾರಿಯಾಗಿ ಆಯೋಜಿಸಲು ಹಲವು ಸಲಹೆಗಳನ್ನು ನೀಡಲಾಗಿದೆ. ಬೆಳಗಾವಿಯಲ್ಲಿ ಕಳೆದ ವರ್ಷದ ಅಧಿವೇಶನ ಸುಗಮವಾಗಿ ಸಾಗಿದೆ. ಮುಂಬರುವ ಅಧಿವೇಶನವೂ ಇದೇ ಮಾದರಿಯಲ್ಲಿ ನಡೆಯಬೇಕಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.

ಅಧಿವೇಶನಕ್ಕೆ ಶಾಸಕರ ಉತ್ತಮ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಕುರಿತು ಗಂಭೀರ ಚರ್ಚೆಗೆ ಸಾಕಷ್ಟು ಸಮಯ ಮೀಸಲಿಡಲಾಗುವುದು. ಕಳೆದ ಅಧಿವೇಶನದಲ್ಲಿ ಉಭಯ ಸದನಗಳಲ್ಲಿಯೂ ಹಲವು ವಿಷಯಗಳ ಕುರಿತು ಚರ್ಚೆ ನಡೆದಿದ್ದು, ಚರ್ಚೆಯ ವೇಳೆ ಶಾಸಕರ ಭಾಗವಹಿಸುವಿಕೆಯೂ ಉತ್ತಮವಾಗಿತ್ತು ಎಂದರು.

NAYAN BAKERY

ಅಧಿವೇಶನದ ಸಮಯದಲ್ಲಿ ಸುವರ್ಣ ಸೌಧಕ್ಕೆ ಭೇಟಿ ನೀಡುವ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಸರ್ಕಾರವು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರಿಗೆ ಅನನುಕೂಲ ಆಗದಂತೆ ನಿಗಾವಹಿಸಬೇಕು. ಸಚಿವಾಲಯದ ಅಧಿಕಾರಿ, ಸಿಬ್ಬಂದಿ, ಚಾಲಕರಿಗೆ ಹಾಗೂ ಪೊಲೀಸರಿಗೆ ವಸತಿ, ನೀರು, ಊಟ, ಉಪಾಹಾರದ ವ್ಯವಸ್ಥೆ ಸರಿಯಾಗಿ ಮಾಡಬೇಕು. ಪ್ರತಿಭಟನಾ ಸ್ಥಳಗಳಲ್ಲೂ ಸೂಕ್ತ ಸೌಲಭ್ಯ ನೀಡಲು ಸೂಚಿಸಿದ್ದೇವೆ,

ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣ ಚರ್ಚೆ ಆಗಿದೆ‌. ಶಾಸಕರ ಭವನ ನಿರ್ಮಾಣಕ್ಕೆ ಯತ್ನಿಸಲಾಗುವುದು. ಪ್ರತಿ ವರ್ಷ ಅಧಿವೇಶನ ವೇಳೆ ವಸತಿಗಾಗಿ ರೂ.6 ಕೋಟಿ ವೆಚ್ಚ ಮಾಡಲಾಗುತ್ತಿದೆ. ಭವನ ನಿರ್ಮಿಸಿದರೆ ಇದನ್ನು ತಗ್ಗಿಸಬಹುದು. ‘ಈ ಬೇಡಿಕೆ ದಶಕಗಳಿಂದ ಇದೆ. ವರ್ಷದಿಂದ ವರ್ಷಕ್ಕೆ ವಸತಿ ವೆಚ್ಚ ಹೆಚ್ಚುತ್ತಲೇ ಇದೆ. ಈವರೆಗೆ ವ್ಯಯಿಸಿದ ವೆಚ್ಚದಲ್ಲಿ ದೊಡ್ಡ ಕಟ್ಟಡವೇ ನಿರ್ಮಾಣವಾಗುತ್ತಿತ್ತು. ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡಲಾಗುವುದು ಎಂದರು.

ಕಲಬುರಗಿ ಸೆಂಟ್ರಲ್‌ ಜೈಲ್‌ನ ಇಬ್ಬರು ಅಧಿಕಾರಿಗಳು ಅಮಾನತು:

ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ (Kalaburagi Central Jail) ಕೈದಿಗಳ ಬಿಂದಾಸ್ ಲೈಫ್ ಪ್ರಕರಣವನ್ನು ಸಿಸಿಬಿಗೆ (CCB) ವರ್ಗಾಯಿಸಿದ ಬೆನ್ನಲ್ಲೇ ಜೈಲಿನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲರ್‌ಗಳಾದ ಶೆಹನಾಜ್ ಹಾಗೂ ಪಾಂಡುರಂಗ ಇಬ್ಬರನ್ನು ಅಮಾನತುಗೊಳಿಸಿ ಕಾರಾಗೃಹ ಇಲಾಖೆಯ ಡಿಜಿ ಆದೇಶ ಹೊರಡಿಸಿದ್ದಾರೆ.

ಇದರ ಬೆನ್ನಲ್ಲೇ ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿತ್ತು. ಬಳಿಕ ಜೈಲಿನ ಮೇಲೆ ಪೊಲೀಸ್ ಆಯುಕ್ತರು ದಾಳಿ ಮಾಡಿದ್ದರೆ. ದಾಳಿ ವೇಳೆ ಎರಡು ಮೊಬೈಲ್ ಸೇರಿದಂತೆ ಸಿಗರೇಟ್, ಗುಟ್ಕಾ ಪ್ಯಾಕೆಟ್ ಪತ್ತೆಯಾಗಿತ್ತು. ಹೀಗಾಗಿ ಇಬ್ಬರು ಜೈಲರ್‌ಗಳನ್ನ ಅಮಾನತುಗೊಳಿಸಲಾಗಿದೆ.

ಕಲಬುರಗಿ ಸೆಂಟ್ರಲ್‌ ಜೈಲಲ್ಲಿ ಕೈದಿಗಳ ಬಿಂದಾಸ್ ಲೈಫ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು 2ನೇ ದಿನವಾದ ಶನಿವಾರವೂ ಜೈಲಿನಲ್ಲಿ ಶೋಧಕಾರ್ಯ ಮುಂದುವರಿಸಿದ್ದಾರೆ. ಕಾರಾಗೃಹ ಇಲಾಖೆ ಡಿಜಿ ಕಚೇರಿಯ ಎಸ್ಪಿ ಯಶೋಧಾ ನೇತೃತ್ವದಲ್ಲಿ ಶೋಧ ನಡೆಯುತ್ತಿದೆ. ಈಗಾಗಲೇ ಜೈಲಿನ ಅಧಿಕಾರಿಗಳ ತನಿಖೆ ನಡೆಸಿರುವ ಎಸ್ಪಿ ಯಶೋಧಾ ಅವರು, ಶನಿವಾರ ಜೈಲಿನ ವಾರ್ಡನ್ ಸೇರಿ ಹಲವರ ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಜೈಲಿನಲ್ಲಿದ್ದುಕೊಂಡೇ ವೀಡಿಯೋ ಕಾಲ್ ಮಾಡಿದ್ದ ಕೈದಿ ಸಾಗರ್, ಸೋನು, ವಿಶಾಲ್ ಸೇರಿದಂತೆ ಏಳು ಜನರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ತ್ವರಿತ ಹಾಗೂ ಕುಲಂಕಷ ತನಿಖೆಗಾಗಿ ಸಿಸಿಬಿಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ.

ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾಧೀನ ಕೈದಿಗಳಿಬ್ಬರು ಕೆಲ ಕೈದಿಗಳನ್ನು ವೀಡಿಯೋ ಕಾಲ್ ನೆಪದಲ್ಲಿ ಹನಿಟ್ರ್ಯಾಪ್‌ಗೆ ಕೆಡವಿ, ಅವರಿಗೆ ಹಣದ ಬೆದರಿಕೆ ಒಡ್ಡಿದ ಆರೋಪವೂ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಜೈಲಿನ ಕೈದಿಯೊಬ್ಬರ ಫೋನ್ ಕರೆಯ ಸಂಭಾಷಣೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ