ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?

Twitter
Facebook
LinkedIn
WhatsApp
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?

ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜುನ್ಯ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಎಸ್​ಐಟಿ ನೋಟಿಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಆದ್ರೆ, ಪ್ರಜ್ವಲ್​ ರೇವಣ್ಣ(Prajwal Revanna) ಅವರು ವಿದೇಶಕ್ಕೆ ಹಾರಿದ್ದಾರೆ. ಇನ್ನು ಎ1 ಆರೋಪಿ ಎಚ್​ಡಿ ರೇವಣ್ಣ ಅವರು ನಾಳೆ(ಮೇ 02) ವಿಚಾರಣೆಗೆ ಹಾಜರಾಗಲಿದ್ದಾರೆ. ಇದರ ಮಧ್ಯೆ ಪ್ರಕರಣದ ಎ2 ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ದಿಢೀರ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರತ್ಯಕ್ಷರಾಗಿದ್ದು,ಎಸ್​ಐಟಿ ನೋಟಿಸ್​ಗೆ ಮೊದಲ ಪ್ರತಿಕ್ರಿಯಿಸಿದ್ದಾರೆ. ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಆದ ಕಾರಣ ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಈ ಬಗ್ಗೆ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಪ್ರಜ್ವಲ್ ರೇವಣ್ಣ, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಆದ ಕಾರಣ ನನ್ನ ವಕೀಲರ ಮೂಲಕ ಸಿ.ಐ.ಡಿ ಬೆಂಗಳೂರು ಅವರಿಗೆ ತಿಳಿಸಿದ್ದೇನೆ. ಸತ್ಯ ಶೀಘ್ರದಲ್ಲೇ ಮೇಲುಗೈ ಸಾಧಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ವಿಡಿಯೋ ವೈರಲ್ ಹಾಗೂ ಪ್ರಕರಣ ದಾಖಲಾದ ಬಳಿಕ ಪ್ರಜ್ವಲ್ ರೇವಣ್ಣ ಆವರದ್ದು ಇದು ಮೊದಲ ಪ್ರತಿಕ್ರಿಯೆಯಾಗಿದೆ.

ಪ್ರಜ್ವಲ್​ ರೇವಣ್ಣ ಪರ ವಕೀಲ ಹೇಳಿದ್ದೇನು?

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಪರ ವಕೀಲ ಜಿ.ಅರುಣ್ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಹೊಳೆನರಸೀಪುರದ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿದ್ದಾರೆ. ಪ್ರಜ್ವಲ್​ ವಿದೇಶದಲ್ಲಿರುವುದರಿಂದ ಕಾಲಾವಕಾಶ ಕೇಳಿದ್ದಾರೆ. ಪ್ರಜ್ವಲ್ ಪರವಾಗಿ ನಾನು ಎಸ್​ಐಟಿಗೆ ಕಾಲಾವಕಾಶ ಕೇಳಿದ್ದೇನೆ. ಇಂದು (ಮೇ 01) ಮಧ್ಯಾಹ್ನ ಸಿಐಡಿ ಕಚೇರಿಗೆ ತೆರಳಿ 7 ದಿನ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದೇನೆ. ಆದ್ರೆ, ತನಿಖಾಧಿಕಾರಿಗಳಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಎಸ್​ಐಟಿ ಅಧಿಕಾರಿಗಳು 7 ದಿನ ಸಮಯ ನೀಡುವ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿರುವುದರಿಂದ ಹಾಸನ ಲೋಕಸಭಾ ಕ್ಷೇತ್ರದ ಮತದಾನ ಮುಗಿಯುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ರಾತ್ರೋರಾತ್ರಿ ಜರ್ಮಿನಿಗೆ ಹಾರಿದ್ದು, ನಾಡಿದ್ದು ಅಂದರೆ ಮೇ 3ಕ್ಕೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಬಳಿಕ ವಕೀಲರ ಜೊತೆ ಚರ್ಚಿಸಿ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.

ಲುಪ್ತಾನ್ಸಾ ಏರ್​ಲೈನ್ಸ್​ ಮೂಲಕ ಬೆಂಗಳೂರಿಗೆ

ವಿಡಿಯೋ ವೈರಲ್ ಬೆನ್ನಲ್ಲೇ ಜರ್ಮನಿಗೆ ಹಾರಿರುವ ಪ್ರಜ್ವಲ್, ಶುಕ್ರವಾರ (ಮೇ 03)ರ ಮಧ್ಯರಾತ್ರಿ ರಾಜ್ಯಕ್ಕೆ ಮರಳಲಿದ್ದಾರೆ. ಪ್ರಜ್ವಲ್​ ರೇವಣ್ಣ ಅವರು ಜರ್ಮನಿಯ ಫ್ರಾಂಕ್​ಫರ್ಟ್ (Germany) ತೆರಳಿದ್ದು, ಬೆಂಗಳೂರಿಗೆ ರಿಟರ್ನ್​ ಟಿಕೆಟ್ ಬುಕ್​ ಮಾಡಿದ್ದಾರೆ. ಮೇ3 ರಂದು ಮಧ್ಯಾಹ್ನ 1.30ಕ್ಕೆ ವಿಮಾನ ಫ್ರಾಂಕ್​ಫರ್ಟ್​ನಿಂದ ಹೊರಡಲಿದ್ದು,​​ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಲುಪ್ತಾನ್ಸಾ ಏರ್​ಲೈನ್ಸ್​ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ಆಗಮಿಸಲಿದ್ದಾರೆ ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist