ಶನಿವಾರ, ಮೇ 18, 2024
ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!

Twitter
Facebook
LinkedIn
WhatsApp
ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!

ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣರನ್ನು (HD Revanna) ವಿಶೇಷ ತನಿಖಾ ದಳದ (SIT) ಅಧಿಕಾರಿಗಳು ಶನಿವಾರ ಸಂಜೆ ವಶಕ್ಕೆ ಪಡೆದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸದಿಂದ ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್​ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಮೈಸೂರಿನ ಕೆಆರ್​ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ರೇವಣ್ಣರ ಬಂಧನಕ್ಕೆ ಎಸ್ಐಟಿ ಅಧಿಕಾರಿಗಳು ತಲಾಶ್ ನಡೆಸಿದರು. ಇದೇ ವೇಳೆ ಅವರು, ದೇವೇಗೌಡರ ನಿವಾಸದಲ್ಲಿರುವುದು ತಿಳಿದು ಎರಡು ಕಾರುಗಳಲ್ಲಿ ಅಲ್ಲಿಗೆ ದೌಡಾಯಿಸಿದರು. ಸುಮಾರು ಐದಕ್ಕೂ ಹೆಚ್ಚು ಮಂದಿ ಅಧಿಕಾರಿಗಳು ರೇವಣ್ಣ ಬಂಧನಕ್ಕೆ ತೆರಳಿದ್ದರು. ಅಧಿಕಾರಿಗಳು ಬಂದು 15 ನಿಮಿಷವಾದ್ರೂ ಮನೆ ಬಾಗಿಲು ಓಪನ್ ಮಾಡಲಾಗಿರಲಿಲ್ಲ. ನಂತರ ರೇವಣ್ಣರೇ ಬಾಗಿಲು ತೆರೆದು ಹೊರಬಂದರು. ತಕ್ಷಣವೇ ಅವರನ್ನು ವಶಕ್ಕೆ ಪಡೆದು ಎಸ್​ಐಟಿ ಅಧಿಕಾರಿಗಳು ಕಚೇರಿಯತ್ತ ತೆರಳಿದರು.

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರೆ ಬಣ್ಣ, ಬಂಧಿಸುವಂತಹ ಪ್ರಕರಣ ಯಾವುದು ದಾಖಲಾಗಿಲ್ಲ ಎಂದು ವಿಶೇಷ ತನಿಖಾ ತಂಡದ ವಕೀಲರು ಖಚಿತಪಡಿಸಿದ್ದರಿಂದ ಶುಕ್ರವಾರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್ ಪಡೆದಿದ್ದರು. ಆದರೆ ನಂತರ, ಮೈಸೂರಿನ ಕೆಆರ್ ನಗರದಲ್ಲಿ ದಾಖಲಾದ ಅಪಹರಣ ಪ್ರಕರಣದಲ್ಲಿ ರೇವಣ್ಣಗೆ ಬಂಧನ ಭೀತಿ ಎದುರಾಗಿತ್ತು. ಹೀಗಾಗಿ ಅವರು ಮತ್ತೆ ಮಧ್ಯಂತರ ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಅಲ್ಲಿ ಅವರಿಗೆ ಹಿನ್ನಡೆಯಾಗಿತ್ತು.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ