ಬುಧವಾರ, ಏಪ್ರಿಲ್ 24, 2024
ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಂಧ್ರಪ್ರದೇಶದ ರಾಜ್ಯಪಾಲರಾಗಿ ಬಿಎಸ್ ಯಡಿಯೂರಪ್ಪ?

Twitter
Facebook
LinkedIn
WhatsApp
ದಕ್ಷಿಣ ಕನ್ನಡ  ತಗ್ಗುತ್ತಿಲ್ಲ ಕೊರೊನಾ ಅಬ್ಬರ : ಮುಂದುವರಿಯುತ್ತಾ ಲಾಕ್ ಡೌನ್?


ಬೆಂಗಳೂರು: ಕರ್ನಾಟಕದ ರಾಜ್ಯ ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ನಾಯಕತ್ವ ಬದಲಾವಣೆ ವಿಚಾರ ಸದ್ಯ ಇನ್ನೂ ಅಡ್ಡಗೋಡೆಯ ಮೇಲೆ ಇದ್ದಂತೆಯೇ ಸಿಂಗ್‌ ದೆಹಲಿಗೆ ಮರಳಿದ್ದಾರೆ. ಈ ನಡುವೆ ಸಿಎಂ ಯಡಿಯೂರಪ್ಪ ಅವರಿಗೆ ದೆಹಲಿಗೆ ಬರುವಂತೆ ಬಿಜೆಪಿ ಹೈಕಮಾಂಡ್‌ ಸೂಚನೆ ನೀಡಿದ್ದು, ಬಿಎಸ್‌ವೈ ಅವರನ್ನು ಸಿಎಂ ಸ್ಥಾನದಿಂದ ಇಳಿಸಿ, ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕ ಮಾಡಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಆಂಧ್ರ ಪ್ರದೇಶದ ಹಾಲಿ ರಾಜ್ಯಪಾಲರ ಅಧಿಕಾರಾವಧಿ ಜುಲೈಗೆ ಅಂತ್ಯವಾಗಲಿದೆ. ಆ ಸ್ಥಾನಕ್ಕೆ ಯಡಿಯೂರಪ್ಪರನ್ನು ನೇಮಿಸುವ ಸಾಧ್ಯತೆಗಳು ಕಾಣುತ್ತಿವೆ. ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ದೆಹಲಿಗೆ ಮರಳುತ್ತಿದ್ದಂತೆಯೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡ ಹಾಗೂ ಗೃಹ ಸಚಿವ ಅಮಿತ್ ಷಾ ಅವರು ದೆಹಲಿಗೆ ಬರುವಂತೆ ಯಡಿಯೂರಪ್ಪರಿಗೆ ಬುಲಾವ್‌ ನೀಡಿರುವುದಾಗಿ ತಿಳಿದು ಬಂದಿದೆ.

ಆಂಧ್ರಪ್ರದೇಶದ ರಾಜ್ಯಪಾಲರಾಗಿ ಬಿಎಸ್ ಯಡಿಯೂರಪ್ಪ?

ಮೂರು ದಿನಗಳ ಕಾಲ ರಾಜ್ಯದಲ್ಲಿ ಬೀಡು ಬಿಟ್ಟಿದ್ದ ಅರುಣ್‌ ಸಿಂಗ್‌ ರಾಜ್ಯದ ಬಿಜೆಪಿ ಮುಖಂಡರು ಮತ್ತು ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿದ್ದಾರೆ. ಎಂಎಲ್‌ಸಿ ಹೆಚ್‌ ವಿಶ್ವನಾಥ್‌ ಸೇರಿದಂತೆ ಹಲವು ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಹೇಳಿದ್ದಾರೆ. ಮತ್ತೂ ಕೆಲವರು ಬಿಎಸ್‌ವೈ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎಂದು ಹೇಳಿದರೆ, ಆರ್‌ಎಸ್‌ಎಸ್‌ ಹಿನ್ನೆಲೆಯಿಂದ ಬಂದ ಶಾಸಕರು ಹೈಕಮಾಂಡ್‌ ತೀರ್ಮಾನಕ್ಕೆ ಬದ್ದರಾಗಿರುತ್ತೇವೆ ಎಂದು ಹೇಳಿದ್ದಾರೆ.

 

ಈ ಹಿನ್ನೆಲೆಯಲ್ಲಿ, ನಾಯಕತ್ವ ಬದಲಿಸಿದರೆ ಮುಂದೆ ಅದು ಯಾವ ರೀತಿಯ ಪರಿಣಾಮಗಳನ್ನು ಬೀರಬಹುದು? ನಾಯಕತ್ವ ಬದಲಾವಣೆಯ ಅಗತ್ಯ ಇದೆಯೇ? ನಾಯಕತ್ವ ಬದಲಿಸುವುದಾದರೆ ಯಾರಿಗೆ ನಾಯಕತ್ವ ನೀಡಬಹುದು? ಆ ಸಾರ್ಮಥ್ಯ ಯಾರಿಗಿದೆ? ಎಂಬುದರ ಬಗ್ಗೆ ಅರುಣ್‌ ಸಿಂಗ್‌ ಮೇಲ್ವಿಚಾರಣೆ ನಡೆಸಿದ್ದಾರೆ.
ಅಲ್ಲದೆ, ಈಗ ನಾಯಕತ್ವ ಬದಲಾದರೆ, ಮುಂದಿನ 2023ರ ರಾಜ್ಯ ಚುನಾವಣೆ ಮತ್ತು 2024ರ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ನಾಯಕತ್ವ ನೀಡುವವರು ಯಾರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಸಾಮರ್ಥ್ಯ ಯಾರಿಗಿದೆ. ಈಗಿನ ನಾಯಕತ್ವ ಬದಲಾವಣೆ ಮುಂದಿನ ಚುನಾವಣೆಗಳ ಮೇಲೆ ಪರಿಣಾಮ ಬೀರುತ್ತದೆಯೇ ಎಂಬುದರ ಬಗ್ಗೆಯೂ ಬಿಜೆಪಿ ಹೈಕಮಾಂಡ್‌ ಚಿಂತಿಸಿದೆ.

ಹೀಗಾಗಿ, ಯಡಿಯೂರಪ್ಪರಿಗೆ ರಾಜ್ಯಪಾಲ ಹುದ್ದೆ ನೀಡಿದರೆ ಅವರು ತಣ್ಣಗಾಗಬಹುದು ಎಂಬ ಯೋಚನೆಯೂ ಬಿಜೆಪಿ ಹೈಕಮಾಂಡ್‌ನಲ್ಲಿದೆ. ಹೀಗಾಗಿ ಅವರನ್ನು ಆಂಧ್ರಕ್ಕೆ ರಾಜ್ಯಪಾಲರಾಗಿ ನೇಮಿಸುವ ತಯಾರಿಯಲ್ಲಿದೆ ಎಂದು ತಿಳಿದು ಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು