ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರಾಗಿದ್ದ ರಾಷ್ಟ್ರ ಪ್ರಶಸ್ತಿ ವಿಜೇತೆ ಸುಮಂಗಳಾ ಮುಮ್ಮಿಗಟ್ಟಿ ನಿಧನ

Twitter
Facebook
LinkedIn
WhatsApp
ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರಾಗಿದ್ದ ರಾಷ್ಟ್ರ ಪ್ರಶಸ್ತಿ ವಿಜೇತೆ ಸುಮಂಗಳಾ ಮುಮ್ಮಿಗಟ್ಟಿ ನಿಧನ

ಬೆಂಗಳೂರು: ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರಾಗಿದ್ದ, ರಾಷ್ಟ್ರ ಪ್ರಶಸ್ತಿ ವಿಜೇತೆ ಸುಮಂಗಳಾ.ಎಸ್ ಮುಮ್ಮಿಗಟ್ಟಿ (Sumangala S Mummigatti) (59) ಇಂದು ಮುಂಜಾನೆ (ಮಾ.12) ನಿಧನರಾಗಿದ್ದಾರೆ. ಸುಮಂಗಳಾ ಅವರು ಪತಿ ಮತ್ತು ಪುತ್ರನನ್ನು ಅಗಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಚಾಮರಾಜ ಪೇಟೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ವಿಜ್ಞಾನ ಸಂವಹನಕ್ಕಾಗಿ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದ ಸುಮಂಗಳಾ ಅವರು 40ಕ್ಕೂ ಹೆಚ್ಚು ವಿಜ್ಞಾನದ ಕೃತಿಗಳು, ಸಾವಿರಾರು ಲೇಖನಗಳನ್ನು, ನೂರಾರು ವಿಜ್ಞಾನ ಕಾರ್ಯಕ್ರಮಗಳನ್ನು ರೂಪಿಸಿದ್ದರು. ವಿಜ್ಞಾನ ಸಂವಹನಕ್ಕಾಗಿ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದ ಸುಮಂಗಳಾ 40ಕ್ಕೂ ಹೆಚ್ಚು ವಿಜ್ಞಾನದ ಕೃತಿಗಳು, ಸಾವಿರಾರು ಲೇಖನಗಳನ್ನು, ನೂರಾರು ವಿಜ್ಞಾನ ಕಾರ್ಯಕ್ರಮಗಳನ್ನು ರೂಪಿಸಿದ್ದರು.

ಇವರಿಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ದೊರೆತಿವೆ. ಅವುಗಳಲ್ಲಿ, ಪರಿಸರ ಪ್ರಶಸ್ತಿ ರೇಡಿಯೋ ಅಸ್ಕರ್ ಅಂತರಾಷ್ಟ್ರೀಯ ಪ್ರಶಸ್ತಿ ಪ್ರಮುಖವಾಗಿದೆ. ಇತ್ತಿಚೆಗೆ ಪ್ರಕಟವಾದ ವಿಜ್ಞಾನ ತಂತ್ರಜ್ಞಾನ ದರ್ಶನ ಅವರ ಪ್ರಮುಖ ಕೃತಿಗಳಲ್ಲಿ ಒಂದಾಗಿದೆ. ಅದ್ಭುತ ಆವಾಸ ಅಂಡಮಾನ್, ಅಲ್ಲಮ ಪ್ರಭು, ಮತ್ತಿತರ ಕೃತಿಗಳು ಅವರ ಬರವಣಿಗೆಯ ವಿಷಯ ವಿಸ್ತಾರಕ್ಕೆ ಉದಾಹರಣೆಯಾಗಿವೆ. ಹಲವಾರು ವಿಜ್ಞಾನ ಸಂವಹನಕಾರರನ್ನು ಹುರಿದುಂಬಿಸಿ ವಿಜ್ಞಾನ ಸಂವಹನಕಾರರ ಒಂದು ಪಡೆಯನ್ನು ಕಟ್ಟಿ ಬೆಳಸಿದ ಕೀರ್ತಿ ಸುಮಂಗಳಾ ಅವರದ್ದಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ