ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಘಾತಕಾರಿ ಘಟನೆ-ಹೋಮ್‌ವರ್ಕ್‌ ಮಾಡದ ಕಾರಣಕ್ಕೆ 6 ವರ್ಷದ ವಿದ್ಯಾರ್ಥಿಯನ್ನು ಬಡಿದು ಸಾಯಿಸಿದ ಶಿಕ್ಷಕ!

Twitter
Facebook
LinkedIn
WhatsApp
ಆಘಾತಕಾರಿ ಘಟನೆ-ಹೋಮ್‌ವರ್ಕ್‌ ಮಾಡದ ಕಾರಣಕ್ಕೆ 6 ವರ್ಷದ ವಿದ್ಯಾರ್ಥಿಯನ್ನು ಬಡಿದು ಸಾಯಿಸಿದ ಶಿಕ್ಷಕ!

ಪಾಟ್ನಾ (ಸೆ. 29): ಹೋಮ್‌ವರ್ಕ್‌ ಮಾಡಿಲ್ಲ ಎನ್ನುವ ಕಾರಣಕ್ಕೆ ಶಿಕ್ಷಕನೊಬ್ಬ, ಪುಟ್ಟ ವಿದ್ಯಾರ್ಥಿಗೆ ಭೀಕರವಾಗಿ ಥಳಿಸಿ, ಸಾಯಿಸಿದ ಘಟನೆ ನಡೆದಿದೆ. ಬಿಹಾರದ ಗಯಾದಲ್ಲಿ ಈ ಘಟನೆ ನಡೆದಿದೆ. ಶಾಲೆಯ ಹಾಸ್ಟೆಲ್‌ನಲ್ಲಿಯೇ ತಂಗಿದ್ದ 6 ವರ್ಷದ ಹುಡುಗ ಮೂರನೇ ತರಗತಿಯಲ್ಲಿ ಓದುತ್ತಿದ್ದ. ಪೊಲೀಸರ ಮಾಹಿತಿಯ ಪ್ರಕಾರ, ಬುಧವಾರ ಶಾಲೆಯ ಘೇಟ್‌ನ ಹೊರಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಗು ಪತ್ತೆಯಾಗಿತ್ತು ಎಂದು ಹೇಳಿದ್ದಾರೆ. ಪೊಲೀಸರು ಮಗುವನ್ನು ನೋಡಿದ ವೇಳೆ, ಆತನ ಮುಖ ಸಂಪೂರ್ಣವಾಗಿ ಊದಿಕೊಂಡಿತ್ತು. ಆತನ ಮೂಗಿನಿಂದ ರಕ್ತ ಸುರಿಯುತ್ತಿತ್ತು. ಅಲ್ಲದೆ, ಶಾಲೆಯ ಸಮವಸ್ತ್ರ ಕೂಡ ಸಂಪೂರ್ಣವಾಗಿ ಹರಿದುಹೋಗಿತ್ತು. ತಕ್ಷಣವೇ ಪೊಲೀಸರು ಆಸ್ಪತ್ರೆಗೆ ಸಾಗಿಸಿದರೂ, ಮಾರ್ಗಮಧ್ಯದಲ್ಲಿಯೇ ಹುಡುಗ ಸಾವು ಕಂಡಿದ್ದಾರೆ. 6 ವರ್ಷದ ಹುಡುಗ, ವಜೀರ್‌ಗಂಜ್-ಫತೇಪುರ್ ರಸ್ತೆಯಲ್ಲಿರುವ ಬಧಿ ಬಿಘಾ ಗ್ರಾಮದ ಬಳಿ ಇರುವ ಲಿಟಲ್ ಲೀಡರ್ಸ್ ಪಬ್ಲಿಕ್ ಸ್ಕೂಲ್‌ನಲ್ಲಿ ಓದುತ್ತಿದ್ದ. ಹುಡುಗನ ಮನೆ ಶಾಲೆಯಿಂದ ಮೂರು ಕಿಲೋಮೀಟರ್‌ ದೂರದಲ್ಲಿದ್ದ ಕಾರಣಕ್ಕೆ ಹುಡುಗನನ್ನು ಶಾಲೆಯ ಹಾಸ್ಟೆಲ್‌ನಲ್ಲಿಯೇ ಇರಿಸಿದ್ದರು. ಮಗು ಸಾವು ಕಂಡಿದ್ದು ತಿಳಿದ ಕೂಡಲೇ, ಹುಡುಗನ ಕುಟುಂಬದವರು ಶಾಲೆಯ ಎದುರು ಪ್ರತಿಭಟನೆಗೆ ಇಳಿದಿದ್ದಾರೆ.

ಪ್ರತಿಭಟನೆ ತೀವ್ರವಾದ ಬಳಿಕ ಪೊಲೀಸರು ಶಾಲಾ ನಿರ್ದೇಶಕ ವಿಕಾಸ್ ಸಿಂಗ್ ಅವರನ್ನು ಬುಧವಾರ ಸಂಜೆ ಬಂಧಿಸಿದ್ದಾರೆ. 302ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಮಗುವಿನ ಸಾವಿನ ನಂತರ ಶಾಲೆಯನ್ನೂ ಮುಚ್ಚಲಾಗಿದೆ. ಹಾಸ್ಟೆಲ್‌ನಲ್ಲಿರುವ ಎಲ್ಲಾ ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ.

ನನ್ನ ಮೊಮ್ಮಗನನ್ನು ಶಾಲೆ ಹಾಗೂ ಆಡಳಿತ ಮಂಡಳಿಯೇ ಕೊಲೆ ಮಾಡಿದೆ ಎಂದು ಮಗುವಿನ ಅಜ್ಜ ರಾಮಬಾಲಕ್ ಪ್ರಸಾದ್ ಆರೋಪಿಸಿದ್ದಾರೆ. ಹಲ್ಲೆಯ ಬಗ್ಗೆ ಈ ಹಿಂದೆಯೂ ದೂರು ನೀಡಲಾಗಿತ್ತು, ಆದರೆ ಈಗ ಹಾಗಾಗುವುದಿಲ್ಲ ಎಂದು ಶಾಲೆಯವರು ಹೇಳಿದ್ದರು. ಅದರ ನಂತರ ಎಲ್ಲವೂ ಸರಿಯಾಗಿತ್ತು. ಅಜ್ಜ, ತನ್ನ ಮೊಮ್ಮಗ ವಿವೇಕ್ ಕುಮಾರ್‌ನನ್ನು ಶಿಕ್ಷಕ ವಿಕಾಸ್ ಕುಮಾರ್ ಸಿಂಗ್ ಹೊಡೆದು ಶಾಲೆಯಿಂದ ಹೊರಹಾಕಿದ್ದ. ನಂತರ ಅವನು ಶಾಲೆಯ ಹೊರಗೆ ಸ್ವಲ್ಪ ದೂರದಲ್ಲಿ ಗಂಟೆಗಳ ಕಾಲ ಪ್ರಜ್ಞಾಹೀನನಾಗಿ ಬಿದ್ದಿದ್ದ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ