ಫ್ಲೈಟ್ನಲ್ಲಿ ಕೇಕ್ ಕತ್ತರಿಸಿ ತಾಯಿಯ ಹುಟ್ಟುಹಬ್ಬ ಆಚರಿಸಿದ ಪೊಲೀಸ್ ಕಾನ್ಸ್ಟೇಬಲ್
ಹಾವೇರಿ: ಸಾಮಾನ್ಯವಾಗಿ ಸ್ನೇಹಿತರೊಂದಿಗೆ ಬರ್ತ್ಡೇ ಆಚರಣೆ ಮಾಡುವುದು ಕಾಮನ್. ಆದರೆ ಪೊಲೀಸ್ ಕಾನ್ಸ್ಟೇಬಲ್ವೊಬ್ಬರು (Police Constable) ತಮ್ಮ ತಾಯಿಯ (Mother) 63ನೇ ಜನ್ಮದಿನವನ್ನು ವಿಮಾನದಲ್ಲಿ (Flight) ಆಚರಿಸಿ ಅಪರೂಪದ ಪ್ರಸಂಗಕ್ಕೆ ಸಾಕ್ಷಿಯಾಗಿದ್ದಾರೆ.
ಬ್ಯಾಡಗಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಹನುಮಂತಪ್ಪ ಸುಂಕದ ತಮ್ಮ ತಾಯಿ ಪಾರ್ವತವ್ವರ 63ನೇ ಹುಟ್ಟುಹಬ್ಬವನ್ನು (Birth Day) ಅದ್ಧೂರಿಯಾಗಿ ಆಚರಿಸಿದ್ದಾರೆ. ತಾಯಿಯ ಬರ್ತ್ಡೇ ಪ್ರಯುಕ್ತ ಇದೇ ಮೊದಲ ಬಾರಿ ತಂದೆ, ತಾಯಿ ಮತ್ತು ಮಗಳೊಂದಿಗೆ ಕಾನ್ಸ್ಟೇಬಲ್ ಹನುಮಂತಪ್ಪ, ವಿಮಾನದಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡಿಸಿದ್ದಾರೆ.
ಸದಾ ಕೃಷಿ ಕೆಲಸದಲ್ಲೇ ನಿರತರಾಗಿರುತ್ತಿದ್ದ ತಾಯಿ, ತಂದೆಯನ್ನು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ 2 ಕೆ.ಜಿ ಕೇಕ್ ಅನ್ನು ಖರೀದಿಸಿ, ತನ್ನ ತಾಯಿ ಪಾರ್ವತವ್ವ, ತಂದೆ ಲಕ್ಷ್ಮಣ ಮತ್ತು ಮಗಳು ಚಂದನಾಳೊಂದಿಗೆ ವಿಮಾನವನ್ನು ಏರಿದ್ದಾರೆ. ಆ ಬಳಿಕ ಕಾನ್ಸ್ಟೇಬಲ್ ಹನುಮಂತಪ್ಪ ವಿಮಾನದಲ್ಲೇ ಕೇಕ್ ಕತ್ತರಿಸಿ ತನ್ನ ತಾಯಿಯ ಹುಟ್ಟುಹಬ್ಬ ಆಚರಿಸುವ ಮೂಲಕ ಸಂಭ್ರಮ ಆಚರಿಸಿದರು.