ಗುರುವಾರ, ಏಪ್ರಿಲ್ 18, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಸಾವು

Twitter
Facebook
LinkedIn
WhatsApp
suicide16709127311678050822 16
 

ಮಡಿಕೇರಿ: ಮನೆಯಲ್ಲಿ ಆಟವಾಡುತ್ತಿದ್ದಾಗ 8 ತಿಂಗಳ ಮಗುವೊಂದು (Baby) ಉಂಗುರ (Ring) ನುಂಗಿ ಮೃತಪಟ್ಟ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ನಡೆದಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆ (Virajpete) ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮುನೀರ್ ಎನ್ನುವವರ ಮಗು ಮೃತಪಟ್ಟಿದೆ. 8 ತಿಂಗಳ ಮಗು ಬುಧವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿತ್ತು. ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಗುವನ್ನು ದಾಖಲಿಸಿದರೂ ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ (Madikeri) ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಜಿಲ್ಲಾ ಆಸ್ಪತ್ರೆಯ ವೈದ್ಯರ ತಂಡ ರಾತ್ರಿ 9 ಗಂಟೆಯಿಂದ ಸುಮಾರು 12 ಗಂಟೆಯವರೆಗೆ ನಿರಂತರವಾಗಿ ಶ್ರಮಪಟ್ಟು ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬೆಳಗ್ಗೆ ಮಗು ಮೃತಪಟ್ಟಿದೆ. ಈ ಬಗ್ಗೆ ವೈದ್ಯರು ಮಾತನಾಡಿದ್ದು, ನಿಮ್ಮ ಮಕ್ಕಳ ಬಗ್ಗೆ ಒಂದಷ್ಟು ಎಚ್ಚರಿಕೆ ಇರುವಂತೆ ಹಾಗೂ ಈ ರೀತಿಯಲ್ಲಿ ಉಂಗುರ ನಾಣ್ಯಗಳನ್ನು ಮಕ್ಕಳ ಮುಂದೆ ಇಡುವ ಮುಂಚೆ ಎಚ್ಚರಿಕೆ ಇರುವಂತೆ ಮನವಿ ಮಾಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ