ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆನ್ಲೈನ್ನಲ್ಲಿ 2 ಸಾವಿರ ರೂ ಸಾಲ ಪಡೆದು ₹15 ಲಕ್ಷ ಕಟ್ಟಿದ ವ್ಯಕ್ತಿ

Twitter
Facebook
LinkedIn
WhatsApp
ಆನ್ಲೈನ್ನಲ್ಲಿ 2 ಸಾವಿರ ರೂ ಸಾಲ ಪಡೆದು ₹15 ಲಕ್ಷ ಕಟ್ಟಿದ ವ್ಯಕ್ತಿ

ಚಿಕ್ಕಬಳ್ಳಾಪುರ: ಆನ್ಲೈನ್ನಲ್ಲಿ 2 ಸಾವಿರ ರೂ ಸಾಲ ಪಡೆದ ವ್ಯಕ್ತಿಯೋರ್ವ ವಂಚಕರ ನಗ್ನ ಸಂದೇಶ ಬೆದರಿಕೆಗೆ ಭಯಪಟ್ಟು 15 ಲಕ್ಷ ರೂ.ಗೂ ಅಧಿಕ ಹಣ ಕಳೆದುಕೊಂಡಿದ್ದಾನೆ.

ಈ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.

ಅಜ್ಮತ್ ಉಲ್ಲಾ (37) ವಂಚನೆಗೊಳಗಾದ ವ್ಯಕ್ತಿ. ಈತ ತಾಲೂಕಿನ ಬೆಳಗಾನಹಳ್ಳಿ ಬಳಿ ಇರುವ ನಂದಿನಿ ಡೈರಿಯಲ್ಲಿ ಸೂಪರ್ ವೈಸರ್ ಕೆಲಸ ಮಾಡಿಕೊಂಡು ಚಿಂತಾಮಣಿ ನಗರದ ಟಿಪ್ಪುನಗರದಲ್ಲಿ ಜೀವನ ನಡೆಸುತ್ತಿದ್ದಾನೆ. ಹಣದ ಅವಶ್ಯಕತೆಯಿಂದ ಕೆಲ ತಿಂಗಳ ಹಿಂದೆ ಸ್ನೇಹಿತನ‌ ಮಾಹಿತಿಯಂತೆ ಆನ್ ಲೈನ್ MAJIC LOAN APPನಲ್ಲಿ 2,000 ರೂ ಲೋನ್ ಪಡೆದಿದ್ದಾನೆ. ಬಳಿಕ ಈತ ಎರಡು ಸಾವಿರಕ್ಕೆ ಈಗ 15 ಲಕ್ಷಕ್ಕೂ ಅಧಿಕ ಹಣವನ್ನು ಬಡ್ಡಿ ರೂಪದಲ್ಲಿ ಕಟ್ಟುವಂತಾಗಿದೆ.

ಘಟನೆಯ ವಿವರ: ಆಯಪ್‌ ಮುಖಾಂತರ 2,000 ರೂ. ಸಾಲ ಪಡೆದು ಬಡ್ಡಿಯ ರೂಪವಾಗಿ 3,500 ಕಟ್ಟಿದ್ದರು. ಇವರು ಲೋನ್ ಪಡೆಯುವಾಗ ಆಯಪ್‌ನ ಆನ್‌ಲೈನ್ ವಂಚಕರು ಅಜ್ಮತ್ ಉಲ್ಲಾ ಆಧಾರ್ ಕಾರ್ಡ್​ ಮತ್ತು ಪಾನ್ ಕಾರ್ಡ್​ಗಳನ್ನು ಪಡೆದುಕೊಂಡಿದ್ದರು. ಅದನ್ನೇ ದುರುಪಯೋಗಪಡಿಸಿಕೊಂಡು ಬೇರೆ ಬೇರೆ 20ಕ್ಕೂ ಅಧಿಕ ಲೋನ್ ಆಯಪ್​ಗಳ ಮೂಲಕ ಲಕ್ಷಾಂತರ ರೂಪಾಯಿಗಳನ್ನು ಆ ದಾಖಲಾತಿ ನೀಡಿ ಪಡೆದುಕೊಂಡಿದ್ದಾರೆ.

ಯಾವುದೇ ಲೋನ್ ಪಡೆಯದಿದ್ದರೂ ಲಕ್ಷಾಂತರ ರೂ. ಹಣ ಕಟ್ಟುವಂತೆ ಲೋನ್​ ಆಯಪ್​ಗಳು ಪೀಡಿಸಿದ್ದು ಹಣ ಕಟ್ಟದ ಹಿನ್ನಲೆಯಲ್ಲಿ ಅಜ್ಮತ್‌ ಫೋಟೋ ಬಳಸಿ ಮಹಿಳೆಯರ ಜೊತೆ ನಗ್ನವಾಗಿರುವ ದೃಶ್ಯ ಸಂದೇಶಗಳನ್ನು ಸ್ನೇಹಿತರು ಕುಟುಂಬಸ್ಥರಿಗೆ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಭಯಗೊಂಡ ಅಜ್ಮದ್ ತನ್ನ ಎಸ್‌ಬಿಐ ಬ್ಯಾಂಕ್ ಖಾತೆಯಿಂದ 14,43,799 ರೂ ಸೇರಿದಂತೆ ಸ್ನೇಹಿತರ ಬಳಿ ಲಕ್ಷಾಂತರ ಸಾಲ ಮಾಡಿ ಸರಿಸುಮಾರು 15,56,731 ಲಕ್ಷ ರೂಗಳನ್ನು ವಂಚಕರ ಖಾತೆಗೆ ವರ್ಗಾವಣೆ ಮಾಡಿದ್ದಾರೆ.

ಆನ್ ಲೈನ್ ವಂಚಕರ ಸಹವಾಸ ಸಾಕಪ್ಪ ಎನ್ನುವಷ್ಟರಲ್ಲಿ ಮತ್ತೆ ಬೆದರಿಕೆ ಹಾಕಿ ನಗ್ನ ದೃಶ್ಯಗಳನ್ನು ಸ್ನೇಹಿತರಿಗೆ ಕಳುಹಿಸಿದ್ದು, ಮತ್ತ ಹಣವನ್ನು ಹಾಕುವಂತೆ ಪೀಡಿಸಿದ್ದಾರೆ. ಇದರಿಂದ ಬೇಸತ್ತ ಅಜ್ಮದ್, ನಗರ ಠಾಣೆಗೆ ದೂರು ದಾಖಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist