ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಹೆಸರು ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಫ್ಘನ್‌ನಲ್ಲಿ ಭೂಕಂಪನ: ಸಾವಿನ ಸಂಖ್ಯೆ 1,150ಕ್ಕೆ ಏರಿಕೆ, 3 ಸಾವಿರ ಮನೆಗಳು ನಾಶ

Twitter
Facebook
LinkedIn
WhatsApp
ಆಫ್ಘನ್‌ನಲ್ಲಿ ಭೂಕಂಪನ: ಸಾವಿನ ಸಂಖ್ಯೆ 1,150ಕ್ಕೆ ಏರಿಕೆ, 3 ಸಾವಿರ ಮನೆಗಳು ನಾಶ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಈಚೆಗಷ್ಟೇ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 1,150ಕ್ಕೆ ಏರಿಕೆಯಾಗಿದೆ. 6.1 ತೀವ್ರತೆಯ ಭೂಕಂಪದಿಂದಾಗಿ ಸಾವಿರಾರು ಮಂದಿ ಆಶ್ರಯ ಕಳೆದುಕೊಂಡಿದ್ದು ಸುಮಾರು 3,000 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ. 1.18 ಲಕ್ಷ ಮಂದಿ ಮಕ್ಕಳು ಅಪಾಯಕ್ಕೆ ಸಿಲುಕಿದ್ದಾರೆ.

ಮಾನವೀಯ ವ್ಯವಹಾರಗಳ ಸಮನ್ವಯಕ್ಕಾಗಿ ವಿಶ್ವಸಂಸ್ಥೆಯ ಕಚೇರಿಯು 770 ಸಾವುಗಳನ್ನು ಅಂದಾಜಿಸಿದೆ. ಆದರೆ ಯುನಿಸೆಫ್ ಅಫ್ಘಾನಿಸ್ತಾನ ಪ್ರತಿನಿಧಿಯು ಸಾವಿನ ಸಂಖ್ಯೆ 1,036 ಎಂದು ಅಂದಾಜಿಸಿದ್ದಾರೆ. ವಿಪತ್ತು ಸಚಿವಾಲಯದ ವಕ್ತಾರ ಮೊಹಮ್ಮದ್ ನಾಸಿಮ್ ಹಕ್ಕಾನಿ 2,000 ಮಂದಿ ಗಾಯಗೊಂಡಿದ್ದು ಸಾವಿರಾರು ಮನೆಗಳು ನಾಶವಾಗಿವೆ ಎಂದು ಆಫ್ಘನ್‌ನ ಸರ್ಕಾರಿ ಮಾಧ್ಯಮಗಳು ತಿಳಿಸಿವೆ.

ಕಟ್ಟಡಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗ್ರಾಮಸ್ಥರು ಕೈಯಿಂದಲೇ ಅವಶೇಷಗಳನ್ನು ಹೊರತೆಗೆಯುತ್ತಿದ್ದಾರೆ. ಪೂರ್ವ ಅಫ್ಘಾನಿಸ್ತಾನದ ಗಯಾನ್ ಜಿಲ್ಲೆಯಲ್ಲಿ ಕನಿಷ್ಠ 1,000 ಮನೆಗಳಿಗೆ ಹಾನಿಯಾಗಿದ್ದು, ಖೋಸ್ಟ್ ಪ್ರಾಂತ್ಯದ ಸ್ಪೆರೆ ಜಿಲ್ಲೆಯಲ್ಲಿ 800 ಮನೆಗಳು ನೆಲಸಮಗೊಂಡಿವೆ.

ಜರ್ಮನಿ, ನಾರ್ವೆ ಸೇರಿದಂತೆ ಇತರ ದೇಶಗಳು ವಿಶ್ವಸಂಸ್ಥೆಯ ಮೂಲಕ ಅಫ್ಘಾನಿಸ್ತಾನಕ್ಕೆ ಸಹಾಯಹಸ್ತ ಚಾಚುವುದಾಗಿ ಘೋಷಿಸಿವೆ. ಈಗಾಗಲೇ ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವ ಅಫ್ಫಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪವು ಲಕ್ಷಾಂತರ ಮಕ್ಕಳನ್ನು ಅಪೌಷ್ಟಿಕತೆಯ ಅಪಾಯಕ್ಕೆ ದೂಡಲಿದೆ ಎಂದು ಹೇಳಲಾಗುತ್ತಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ