ಆಮ್ ಆದ್ಮಿಯಿಂದ ತುರುವೇಕೆರೆಯಲ್ಲಿ ಟೆನ್ನಿಸ್ ಕೃಷ್ಣ ಸ್ಪರ್ಧೆ

ತುಮಕೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ (Election) ತುರುವೇಕೆರೆ (Turuvekere) ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ (Aam Aadmi Party) ಅಭ್ಯರ್ಥಿಯಾಗಿ ಹಾಸ್ಯ ನಟ ಟೆನ್ನಿಸ್ ಕೃಷ್ಣ (Tennis Krishna) ಸ್ಪರ್ಧಿಸಲಿದ್ದಾರೆ.
ತುಮಕೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ (Election) ತುರುವೇಕೆರೆ (Turuvekere) ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ (Aam Aadmi Party) ಅಭ್ಯರ್ಥಿಯಾಗಿ ಹಾಸ್ಯ ನಟ ಟೆನ್ನಿಸ್ ಕೃಷ್ಣ (Tennis Krishna) ಸ್ಪರ್ಧಿಸಲಿದ್ದಾರೆ.
ರಂಗಭೂಮಿ ಕಲಾವಿದರು ಮತ್ತು ಸಿನಿಮಾದಲ್ಲಿನ ಪೋಷಕ ನಟರು ಅಗತ್ಯ ಸೌಲಭ್ಯಗಳು ಇಲ್ಲದೇ ಪರದಾಡುತ್ತಿದ್ದಾರೆ. ವಾಸಕ್ಕೆ ಯೋಗ್ಯವಾದ ನಿವಾಸ, ಶೌಚಾಲಯಗಳ ವ್ಯವಸ್ಥೆಯೂ ಇಲ್ಲ. ಎಎಪಿ ಮೂಲಕ ಅಗತ್ಯ ಸೌಕರ್ಯಗಳನ್ನು ಒದಗಿಸುವ ಉದ್ದೇಶವಿದೆ. ಕಷ್ಟದಲ್ಲಿರುವ ರಂಗಭೂಮಿ ಕಲಾವಿದರ ಮಕ್ಕಳ ವಿದ್ಯಾಭ್ಯಾಸ, ಕಲಾವಿದರ ಆರೋಗ್ಯಕ್ಕೆ ಇಲ್ಲಿಯವರೆಗೆ ನಮ್ಮಿಂದ ಸಾಧ್ಯವಾದಷ್ಟು ಸಹಾಯ ಮಾಡಿದ್ದೇವೆ ಎಂದರು.
ಡಿಎಸ್ (JDS), ಕಾಂಗ್ರೆಸ್, ಬಿಜೆಪಿ ಸರ್ಕಾರಗಳಿಂದ ಕಲಾವಿದರಿಗೆ ಯಾವುದೇ ನೆರವು ದೊರೆಯುತ್ತಿಲ್ಲ. ಎಲ್ಲ ಪಕ್ಷಗಳಲ್ಲಿ ಇರುವ ಸಿನಿಮಾ ನಟರೂ ಕೂಡ ಉಳಿದ ಕಲಾವಿದರಿಗೆ ಅಗತ್ಯ ಸೌಲಭ್ಯ ನೀಡಲು ಆಸಕ್ತಿ ತೋರುತ್ತಿಲ್ಲ. ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುವ ನಿಟ್ಟಿನಲ್ಲಿ ಮುಂದಡಿ ಇಡಲಾಗುವುದು ಎಂದು ತಿಳಿಸಿದರುಎಎಪಿ ಜಿಲ್ಲಾ ಘಟಕದ ಅಧ್ಯಕ್ಷ ಪ್ರೇಮ್‌ಕುಮಾರ್, ನಗರ ಘಟಕದ ಅಧ್ಯಕ್ಷ ಮುನೀರ್‌ಅಹ್ಮದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಜಾಮುದ್ದೀನ್ ಇದ್ದರು