ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಮ್ ಆದ್ಮಿ ಪಕ್ಷವನ್ನು ರಾಷ್ಟ್ರೀಯ ಪಕ್ಷವನ್ನಾಗಿ ಘೋಷಿಸಲು ಇನ್ನೊಂದು ಹೆಜ್ಜೆ ದೂರವಿದೆ: ಅರವಿಂದ ಕೇಜ್ರಿವಾಲ್

Twitter
Facebook
LinkedIn
WhatsApp
ಆಮ್ ಆದ್ಮಿ ಪಕ್ಷವನ್ನು ರಾಷ್ಟ್ರೀಯ ಪಕ್ಷವನ್ನಾಗಿ ಘೋಷಿಸಲು ಇನ್ನೊಂದು ಹೆಜ್ಜೆ ದೂರವಿದೆ: ಅರವಿಂದ ಕೇಜ್ರಿವಾಲ್

ಭಾರತೀಯ ಚುನಾವಣಾ ಆಯೋಗವು ಎಎಪಿಯನ್ನು ಗೋವಾದಲ್ಲಿ ರಾಜ್ಯ ಪಕ್ಷ ಎಂದು ಗುರುತಿಸಿದ ಬಳಿಕ ಕೇಜ್ರಿವಾಲ್ ಈ ಹೇಳಿಕೆ ನೀಡಿದ್ದಾರೆ. ‘ದೆಹಲಿ ಮತ್ತು ಪಂಜಾಬ್ ನಂತರ, ಎಎಪಿ ಈಗ ಗೋವಾದಲ್ಲಿ ರಾಜ್ಯದ ಮಾನ್ಯತೆ ಪಡೆದ ಪಕ್ಷವಾಗಿದೆ. ನಾವು ಇನ್ನೂಂದು ರಾಜ್ಯದಲ್ಲಿ ರಾಜ್ಯ ಪಕ್ಷವಾಗಿ ಗುರುತಿಸಿಕೊಂಡರೆ, ಅಧಿಕೃತವಾಗಿ ‘ರಾಷ್ಟ್ರೀಯ ಪಕ್ಷ’ ಎಂದು ಘೋಷಿಸಲಾಗುವುದು.

ತಮ್ಮ ಕಠಿಣ ಪರಿಶ್ರಮಕ್ಕಾಗಿ ಪ್ರತಿಯೊಬ್ಬ ಕಾರ್ಯಕರ್ತರನ್ನು ನಾನು ಅಭಿನಂದಿಸುತ್ತೇನೆ. ಎಎಪಿ ಮತ್ತು ಅದರ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ನಾನು ಜನರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದು ಕೇಜ್ರಿವಾಲ್ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರೀಯ ಪಕ್ಷವಾಗಿ ಸ್ಥಾನಮಾನ ಪಡೆಯಬೇಕೆಂದರೆ, ದೇಶದ ಯಾವುದೇ ರಾಜಕೀಯ ಪಕ್ಷವು ಕನಿಷ್ಠ ಮೂರು ವಿಭಿನ್ನ ರಾಜ್ಯಗಳಿಂದ ಲೋಕಸಭೆಯಲ್ಲಿ ಶೇ 2 ರಷ್ಟು ಸ್ಥಾನಗಳನ್ನು ಗೆಲ್ಲಬೇಕು. ಲೋಕಸಭೆ ಅಥವಾ ವಿಧಾನಸಭೆಗೆ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವು ಯಾವುದೇ ನಾಲ್ಕು ಅಥವಾ ಹೆಚ್ಚಿನ ರಾಜ್ಯಗಳಲ್ಲಿ ಶೇ 6 ರಷ್ಟು ಮತಗಳನ್ನು ಪಡೆಯಬೇಕಿರುತ್ತದೆ ಅಥವಾ ಹೆಚ್ಚುವರಿಯಾಗಿ ನಾಲ್ಕು ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕಾಗುತ್ತದೆ.

ಜನಲೋಕಪಾಲ್ ಚಳುವಳಿಯ ನಂತರ 2012 ರಲ್ಲಿ ಸ್ಥಾಪನೆಯಾದ ಆಮ್ ಆದ್ಮಿ ಪಕ್ಷವು 2013ರಲ್ಲಿ ನಡೆದ ದೆಹಲಿ ಚುನಾವಣೆಯಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರವನ್ನು ರಚಿಸಿತು. ಕಾಂಗ್ರೆಸ್ ಬೆಂಬಲವಿಲ್ಲದೆ, ಭ್ರಷ್ಟಾಚಾರ ವಿರೋಧಿ ಜನಲೋಕಪಾಲ್ ಮಸೂದೆಯನ್ನು ಅಂಗೀಕರಿಸುವಲ್ಲಿ ವಿಫಲವಾದ ನಂತರ ಸರ್ಕಾರ 49 ದಿನಗಳಲ್ಲಿ ರಾಜೀನಾಮೆ ನೀಡಿತು.

ಅದಾದ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಯಿತು. 2015ರ ದೆಹಲಿ ಚುನಾವಣೆಯಲ್ಲಿ ಭರ್ಜರಿ ಗೆಲುವಿನೊಂದಿಗೆ ಎಎಪಿ ಮತ್ತೆ ಅಧಿಕಾರಕ್ಕೆ ಮರಳಿತು. ಇದರೊಂದಿಗೆ 2020 ರ ಚುನಾವಣೆಯಲ್ಲಿ ಪಕ್ಷ ಎರಡನೇ ಬಾರಿಗೆ ದೆಹಲಿ ಗದ್ದುಗೆಗೆ ಏರಿತು.

ಎಎಪಿ ಈಗ ಪಂಜಾಬ್‌ನಲ್ಲಿಯೂ ಸರ್ಕಾರವನ್ನು ಹೊಂದಿದೆ. ಅಲ್ಲಿನ ಅಕಾಲಿದಳ ಮತ್ತು ಕಾಂಗ್ರೆಸ್‌ನ ಸಾಂಪ್ರದಾಯಿಕ ಶಕ್ತಿಗಳನ್ನು ಸೋಲಿಸಿತು. ಪಕ್ಷವು ಇದೀಗ ತನ್ನ ರಾಷ್ಟ್ರೀಯ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಯತ್ನಿಸುತ್ತಿದ್ದು, ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳ ಮೇಲೂ ಕಣ್ಣಿಟ್ಟಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist