ಭಾನುವಾರ, ಜನವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಮುದಾಯ ಉಳಿಯಬೇಕಾದ್ರೆ ಕನಿಷ್ಠ ಮೂರು ಮಕ್ಕಳು ಅವಶ್ಯಕ : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

Twitter
Facebook
LinkedIn
WhatsApp
mohan bhagwat ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಮುಂಬೈ: ಸಮುದಾಯದ ಉಳಿವಿಗಾಗಿ ಕನಿಷ್ಠ 3 ಮಕ್ಕಳನ್ನಾದರೂ ಪಡೆಯಬೇಕು ಎಂದು ಆರ್‌ಎಸ್‌ಎಸ್‌ (RSS) ಮುಖ್ಯಸ್ಥ ಮೋಹನ್‌ ಭಾಗವತ್‌ (Mohan Bhagwat) ಹೇಳಿದ್ದಾರೆ.

ಒಂದು ಸಮುದಾಯದ ಜನಸಂಖ್ಯೆಯು ಶೇ 2.1 ಕ್ಕಿಂತ ಕಡಿಮೆಯಾದರೆ ಅಂತಹ ಸಮಾಜವು ಅಳಿವಿನಂಚಿಗೆ ಹೋಗುತ್ತದೆ. ಹಾಗಾಗಿ ನಾವು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಪಡೆಯಬೇಕು. ಸಮಾಜದ ಉಳಿವಿಗೆ ಇದು ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಮೋಹನ್​ ಭಾಗವತ್​ ಅವರು ಈ ಹೇಳಿಕೆ ಸದ್ಯ ವೈರಲ್​ ಆಗಿದ್ದು, ಸಾಕಷ್ಟು ಪರ-ವಿರೋಧ ವ್ಯಕ್ತವಾಗುತ್ತಿದೆ.

ಭಾನುವಾರ ನಾಗ್ಪುರದಲ್ಲಿ ನಡೆದ ‘ಕಥಲೆ ಕುಲ್ ಸಮ್ಮೇಳನ’ದಲ್ಲಿ ಮಾತನಾಡಿದ ಅವರು, ಸಮಾಜದ ಜನಸಂಖ್ಯೆಯು (ಫಲವತ್ತತೆ ದರ) 2.1 ಕ್ಕಿಂತ ಕಡಿಮೆಯಾದರೆ, ಆ ಸಮಾಜವು ಭೂಮಿಯಿಂದ ಕಣ್ಮರೆಯಾಗುತ್ತದೆ ಎಂದು ಆಧುನಿಕ ಜನಸಂಖ್ಯಾ ವಿಜ್ಞಾನವೇ ಹೇಳುತ್ತದೆ. ಈಗಾಗಲೇ ಈ ರೀತಿಯಲ್ಲಿ ಅನೇಕ ಭಾಷೆಗಳು ಮತ್ತು ಸಮಾಜಗಳು ಅಸ್ತಿತ್ವವನ್ನು ಕಳೆದುಕೊಂಡಿವೆ. ಹಾಗಾಗಿ ಜನಸಂಖ್ಯೆಯು 2.1 ಕ್ಕಿಂತ ಕಡಿಮೆ ಇರಬಾರದು ಎಂದು ಹೇಳಿದ್ದಾರೆ.

ಜನಸಂಖ್ಯೆಯು 2.1 ಜನನ ಪ್ರಮಾಣಕ್ಕಿಂತ ಕಡಿಮೆ ಇರಬಾರದು. ಭಾರತದ ಜನಸಂಖ್ಯಾ ನೀತಿಯನ್ನು 1998 ಅಥವಾ 2002 ರಲ್ಲಿ ನಿರ್ಧರಿಸಲಾಯಿತು. ಯಾವುದೇ ಸಮಾಜದ ಜನಸಂಖ್ಯೆಯು 2.1 ಕ್ಕಿಂತ ಕಡಿಮೆಯಾಗಬಾರದು ಎಂದು ಅದರಲ್ಲಿ ಹೇಳಲಾಗಿದೆ. ಹಾಗಾಗಿ ಸಮಾಜವು ಉಳಿಯಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನು ಅನೇಕ ಬಿಜೆಪಿ ನಾಯಕರು ಜನಸಂಖ್ಯಾ ನಿಯಂತ್ರಣದ ಬಗ್ಗೆ ಧ್ವನಿ ಎತ್ತಿರುವ ಸಮಯದಲ್ಲೇ ಮೋಹನ್ ಭಾಗವತ್ ಅವರು ಈ ಹೇಳಿಕೆ ನೀಡಿದ್ದು, ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಲವು ತಿಂಗಳ ಹಿಂದೆ ರಾಜಸ್ಥಾನದ ಬಿಜೆಪಿ ಶಾಸಕ ಬಾಲ್ಮುಕುಂಡಾಚಾರ್ಯ ಜನಸಂಖ್ಯಾ ನಿಯಂತ್ರಣ ಮಸೂದೆ ತರುವ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಇದೀಗ ಮೋಹನ್ ಭಾಗವತ್​ ಅವರು ಜನನ ಪ್ರಮಾಣ ಕುಸಿಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಸ್ವಾತಂತ್ರ್ಯದ ನಂತರ, 1950 ರಲ್ಲಿ ಭಾರತದಲ್ಲಿ ಜನನ ಪ್ರಮಾಣ ಶೇ 6.2 ಆಗಿತ್ತು. ಇದೀಗ ಅದು ಶೇ 2.0ಕ್ಕೆ ಇಳಿದಿದೆ. ಇದೇ ಪರಿಸ್ಥಿತಿ ಮುಂದುವರಿದರೆ 2050ರ ವೇಳೆಗೆ ಭಾರತದಲ್ಲಿ ಜನನ ಪ್ರಮಾಣ ದರ 1.3 ಕ್ಕೆ ಇಳಿಯಲಿದೆ.

ಇನ್ನು ಭಾಗವತ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು, ಮುಸ್ಲಿಂ ಮಹಿಳೆಯರು ಹೆಚ್ಚು ಮಕ್ಕಳನ್ನು ಪಡೆಯುತ್ತಾರೆ ಎಂದು ಪ್ರಧಾನಿ ಮೋದಿ ಈ ಹಿಂದೆ ಹೇಳಿದ್ದರು. ಅಲ್ಲದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ತಾಯಂದಿರ ಮತ್ತು ಹೆಣ್ಣುಮಕ್ಕಳ ಮಂಗಳಸೂತ್ರ ಸೇರಿದಂತೆ ಜನರ ಚಿನ್ನವನ್ನು ಕಸಿದುಕೊಂಡು ಮುಸ್ಲಿಮರಿಗೆ ಹಂಚುತ್ತಾರೆ ಎಂದು ಹೇಳಿದ್ದರು ಎಂದರು.

ಈಗ ಹೆಚ್ಚು ಮಕ್ಕಳನ್ನು ಹುಟ್ಟುಹಾಕಿ ಎನ್ನುತ್ತಾರೆ ಭಾಗವತ್. ಈಗ ಆರ್‌ಎಸ್‌ಎಸ್‌ನಲ್ಲಿರುವವರು ಮದುವೆಯಾಗಲು ಆರಂಭಿಸಬೇಕು ಎಂದು ಓವೈಸಿ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist