ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆರ್​ಸಿಬಿ ತಂಡಕ್ಕೆ ಸತತ 5ನೇ ಸೋಲು; ಗೆಲುವಿನ ಖಾತೆ ತೆರೆಯಲು ವಿಫಲ!

Twitter
Facebook
LinkedIn
WhatsApp
ಆರ್​ಸಿಬಿ ತಂಡಕ್ಕೆ ಸತತ 5ನೇ ಸೋಲು; ಗೆಲುವಿನ ಖಾತೆ ತೆರೆಯಲು ವಿಫಲ!

DC vs RCB, WPL 2023: ಮುಂಬೈನ ಡಿವೈ ಪಾಟೀಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್​ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಎಲ್ಲಿಸ್ ಪೆರ್ರಿ (67) ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 150 ರನ್​ ಕಲೆಹಾಕಿತು. 

ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಅದರಲ್ಲೂ ಅಂತಿಮ ಓವರ್​ನಲ್ಲಿ ಡೆಲ್ಲಿಗೆ ಗೆಲ್ಲಲು 9 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಜೆಸ್ ಜೊನಾಸನ್ ಆರ್​ಸಿಬಿ ಕೈಯಿಂದ ಜಯವನ್ನು ಕಸಿದುಕೊಂಡರು. ಅಲ್ಲದೆ 19.4 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್​ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಇದರೊಂದಿಗೆ ವುಮೆನ್ಸ್ ಪ್ರೀಮಿಯರ್​ ಲೀಗ್​ನಲ್ಲಿ ಆಡಿದ 5 ಪಂದ್ಯಗಳಲ್ಲೂ ಆರ್​ಸಿಬಿ ತಂಡ ಸೋಲನುಭವಿಸಿದೆ. ಅಲ್ಲದೆ ಇದುವರೆಗೆ ಗೆಲುವಿನ ಖಾತೆ ತೆರೆಯಲು ವಿಫಲವಾಗಿ ಭಾರೀ ಮುಖಭಂಗಕ್ಕೆ ಒಳಗಾಗಿದೆ.

ಆರ್​ಸಿಬಿ- 150/4 (20)

ಡೆಲ್ಲಿ ಕ್ಯಾಪಿಟಲ್ಸ್- 154/4 (19.4)

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ