ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆರ್​ಸಿಬಿ ಸೋಲುತ್ತಿದ್ದಂತೆ ಮೈದಾನದಲ್ಲಿ ಕಣ್ಣೀರಿಟ್ಟ ಸಿರಾಜ್!

Twitter
Facebook
LinkedIn
WhatsApp
j

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲುವ ಕನಸು ಕನಸಾಗಿಯೇ ಉಳಿದಿದೆ. 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲೂ ಆರ್​ಸಿಬಿ ಪ್ಲೇ ಆಫ್ ಪ್ರವೇಶಿಸದೆ ಟೂರ್ನಿಯಿಂದ ಹೊರಬಿದ್ದಿದೆ. ಭಾನುವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಡುಪ್ಲೆಸಿಸ್ (RCB vs GT) ಪಡೆ ಪುನಃ ಬೌಲಿಂಗ್​ನಲ್ಲಿ ಕಳಪೆ ಪ್ರದರ್ಶನ ತೋರಿ, ಸೋತು ಐಪಿಎಲ್ 2023 ರಿಂದ ನಿರ್ಗಮಿಸಿತು. ಆರ್​ಸಿಬಿ ಸೋಲುತ್ತಿದ್ದಂತೆ ಕೇವಲ ಅಭಿಮಾನಿಗಳು ಮಾತ್ರವಲ್ಲದೆ ಆಟಗಾರರು ಕೂಡ ಬೇಸರಗೊಂಡರು. ಆರ್​ಸಿಬಿ ಪ್ಲೇಯರ್ಸ್ ಮೈದಾನದಲ್ಲೇ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರು. ಅದರಲ್ಲೂ ಮೊಹಮ್ಮದ್ ಸಿರಾಜ್ (Mohammed Siraj) ಹಾಗೂ ವಿರಾಟ್ ಕೊಹ್ಲಿಯ (Virat Kohli) ಅವರ ವಿಡಿಯೋ ವೈರಲ್ ಆಗುತ್ತಿದೆ.

20ನೇ ಓವರ್​ನ ಮೊದಲ ಎಸೆತದಲ್ಲಿ ಶುಭ್​ಮನ್ ಗಿಲ್ ಸಿಕ್ಸ್ ಸಿಡಿಸುತ್ತಿದ್ದಂತೆ ಆರ್​ಸಿಬಿ ಸೋಲು ಕಂಡಿತು. ಈ ಸಂದರ್ಭ ಕೋಪಗೊಂಡ ವಿರಾಟ್ ಕೊಹ್ಲಿ ತಮ್ಮ ಕೈಯಲ್ಲಿದ್ದ ನೀರಿನ ಬಾಟಲ್ ಅನ್ನು ಮೈದಾನದಕ್ಕೆ ಎಸೆದಿದ್ದಾರೆ. ಅತ್ತ ಮೊಹಮ್ಮದ್ ಸಿರಾಜ್ ಬೇಸರದಿಂದ ಮೈದಾನದಲ್ಲಿ ಮಲಗಿದರು. ಬಳಿಕ ಕಣ್ಣೀರಿಡುತ್ತಿರುವುದು ಕಂಡುಬಂತು. ನಂತರ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ಮುಗಿದ ಬಳಿಕ ಆರ್​ಸಿಬಿಯ ಎಲ್ಲ ಪ್ಲೇಯರ್ಸ್ ಪಂದ್ಯ ವೀಕ್ಷಿಸಲು ಬಂದಿದ್ದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದರು.

ಇನ್ನು ಪಂದ್ಯ ಮುಗಿದ ಬಳಿಕ ಮಾತನಾಡಿದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೇಸರ ಹೊರಹಾಕಿದ್ದಾರೆ. ಈ ಸೋಲಿನಿಂದ ತುಂಬಾ ನಿರಾಸೆ ಆಗಿದೆ ಎಂದು ನೋವು ತೋಡಿಕೊಂಡಿದ್ದಾರೆ. ”ನಿಜ ಹೇಳಬೇಕೆಂದರೆ ಈ ಸೋಲು ತುಂಬಾ ನಿರಾಸೆ ತಂದಿದೆ. ಇಂದು ನಾವು ನಮ್ಮ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ್ದೆವು. ಆದರೆ, ಶುಭ್​ಮನ್ ಗಿಲ್ ಕಡೆಯಿಂದ ಅದ್ಭುತವಾದ ಶತಕ ಮೂಡಿಬಂತು. ಎರಡನೇ ಇನ್ನಿಂಗ್ಸ್ ವೇಳೆ ತುಂಬಾ ಒದ್ದೆ ಇತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಕೂಡ ಇತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಸಾಕಷ್ಟು ಹಿಡಿತ ಇರಲಿಲ್ಲ ಮತ್ತು ನಾವು ಕೆಲವು ಬಾರಿ ಚೆಂಡನ್ನು ಬದಲಾಯಿಸಬೇಕಾಗಿತ್ತು,” ಎಂದು ಹೇಳಿದ್ದಾರೆ.

”ವಿರಾಟ್ ಕೊಹ್ಲಿ ಕಡೆಯಿಂದ ಊಹಿಸಲಾಗದ ಶತಕ ಬಂತು. ಅವರು ಸೆಂಚುರಿ ಬಾರಿಸಿ ಕಠಿಣ ಟಾರ್ಗೆಟ್ ನೀಡಿದರು. ಆದರೆ, ಗಿಲ್ ಅದ್ಭುತ ಆಟ ಪ್ರದರ್ಶಿಸಿ ಗೆಲುವನ್ನು ನಮ್ಮಿಂದ ಕಸಿದುಕೊಂಡರು. ಈ ಸೀಸನ್​ನಲ್ಲಿ ನಮ್ಮ ಮಧ್ಯಮ ಕ್ರಮಾಂಕದಿಂದ ರನ್ ಬರಲಿಲ್ಲ. ಮುಖ್ಯವಾಗಿ ಇನ್ನಿಂಗ್ಸ್ ಅಂತಿಮ ಹಂತದಲ್ಲಿ ನಿರೀಕ್ಷೆಗೆ ತಕ್ಕಂತೆ ಬ್ಯಾಟಿಂಗ್ ಪ್ರದರ್ಶಿಸಿಲ್ಲ. ಇನ್ನಿಂಗ್ಸ್​ನ ಕೊನೆಯ ಹಂತದಲ್ಲಿ ಪಂದ್ಯವನ್ನು ಫಿನಿಶ್ ಮಾಡುವ ವಿಚಾರದಲ್ಲಿ ನಾವಿನ್ನೂ ಬಲಿಷ್ಠವಾಗಬೇಕು. ಕಳೆದ ವರ್ಷ ದಿನೇಶ್ ಕಾರ್ತಿಕ್ ಪಂದ್ಯವನ್ನು ಫಿನಿಶ್ ಮಾಡುತ್ತಿದ್ದರು. ಆದರೆ ಈ ಋತುವಿನಲ್ಲಿ ಅದು ಸಾಧ್ಯವಾಗಿಲ್ಲ. ನೀವು ಯಶಸ್ವಿಯಾದ ತಂಡಗಳನ್ನು ನೋಡಿದರೆ ಅವರು ಐದು, ಆರು ಮತ್ತು ಏಳನೇ ಕ್ರಮಾಂಕದಲ್ಲಿ ಉತ್ತಮ ಹಿಟ್ಟರ್​ಗಳನ್ನು ಹೊಂದಿದ್ದಾರೆ. ನಮ್ಮಲ್ಲಿ ಆರೀತಿಯ ಬ್ಯಾಟರ್ ಬೇಕು,” ಎಂಬುದು ಫಾಫ್ ಮಾತಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist