ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

'ಆರ್ ಆರ್ ಆರ್' ಸಿನಿಮಾದ ವಿಲನ್ ಸ್ಟೀವನ್ ಸನ್ ನಿಧನ!

Twitter
Facebook
LinkedIn
WhatsApp
Untitled 16

‘ಆರ್​ಆರ್​ಆರ್​’ ಚಿತ್ರದಲ್ಲಿ ಬ್ರಿಟಿಷ್​ ಗವರ್ನರ್ ಪಾತ್ರ ಮಾಡಿ ಎಲ್ಲರ ಗಮನ ಸೆಳೆದಿದ್ದ ಐರಿಷ್ ನಟ ರೇ ಸ್ಟೀವನ್​ಸನ್ (Ray Stevenson) ಭಾನುವಾರ (ಮೇ 21) ರಾತ್ರಿ ನಿಧನ ಹೊಂದಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಈ ವಿಚಾರವನ್ನು ಅವರ ಆಪ್ತರು ಖಚಿತಪಡಿಸಿದ್ದಾರೆ. ಮೇ 15ರಂದು ಅವರು 59ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುವವರಿದ್ದರು. ಅವರ ಸಾವಿಗೆ ಕಾರಣ ಏನು ಎಂಬ ವಿಚಾರ ಇನ್ನೂ ಖಚಿತವಾಗಿಲ್ಲ. ರೇ ಸ್ಟೀವನ್​​ಸನ್ ಸಾವಿಗೆ ಅನೇಕರು ಕಂಬನಿ ಮಿಡಿದಿದ್ದಾರೆ. ‘ಆರ್​ಆರ್​ಆರ್’ (RRR Movie) ಚಿತ್ರತಂಡ ಕೂಡ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಕಂಬನಿ ಮಿಡಿದಿದೆ.

ಕಳೆದ ವರ್ಷ ಮಾರ್ಚ್​ ತಿಂಗಳಲ್ಲಿ ‘ಆರ್​ಆರ್​ಆರ್​’ ಸಿನಿಮಾ ರಿಲೀಸ್ ಆಗಿ ಯಶಸ್ಸು ಕಂಡಿತು. ಭಾರತೀಯರು ಹಾಗೂ ಬ್ರಿಟಿಷರ ನಡುವಿನ ಸಂಘರ್ಷವನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ರಾಜಮೌಳಿ ನಿರ್ದೇಶನದ ಈ ಸಿನಿಮಾ ಯಶಸ್ಸು ಕಾಣಲು ರೇ ಸ್ಟೀವನ್​ಸನ್ ಅವರ ಕೊಡುಗೆಯೂ ಇದೆ. ಖಡಕ್ ವಿಲನ್ ಆಗಿ ಅವರು ಎಲ್ಲರ ಗಮನ ಸೆಳೆದಿದ್ದರು. ಚಿತ್ರರಂಗದಲ್ಲಿ ಇನ್ನೂ ಶ್ರಮಿಸಬೇಕಿದ್ದ ಅವರು ನಿಧನ ಹೊಂದಿದ್ದು ಅನೇಕರಿಗೆ ಬೇಸರ ಮೂಡಿಸಿದೆ.

ರೇ ಸ್ಟೀವನ್​ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್​ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು. 90ನೇ ದಶಕದಲ್ಲಿ ಅವರು ಟಿವಿ ಹಾಗೂ ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲು ಶುರು ಮಾಡಿದರು. 1998ರಲ್ಲಿ ರಿಲೀಸ್ ಆದ ‘ದಿ ಥಿಯರಿ ಆಫ್​ ಫ್ಲೈಟ್​’ ಸಿನಿಮಾ ಯಶಸ್ಸು ಕಂಡಿತು. ಈ ಚಿತ್ರದಿಂದ ರೇ ಸ್ಟೀವನ್​ಸನ್ ಅವರ ಯಶಸ್ಸು ಹೆಚ್ಚಿತು. ಅವರ ಪಾತ್ರ ಅನೇಕರಿಗೆ ಇಷ್ಟ ಆಯಿತು. ‘ಪನಿಶರ್​: ವಾರ್ ಜೋನ್​’ ಮೊದಲಾದ ಚಿತ್ರಗಳ ಮೂಲಕ ಅವರು ಗಮನ ಸೆಳೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ