ಭಾನುವಾರ, ಮೇ 19, 2024
ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಲಿಕಲ್ಲು ಮಳೆಗೆ ರೈತರ ಬೆಳೆಗಳು ಮಣ್ಣುಪಾಲು; ಅನ್ನದಾತರು ಕಂಗಾಲು!

Twitter
Facebook
LinkedIn
WhatsApp
1 1

ಬೆಂಗಳೂರು ಗ್ರಾಮಾಂತರ: ಬಿರುಗಾಳಿಗೆ ನೆಲಕ್ಕಚ್ಚಿರುವ ಸಂಪಾಗಿ ಬೆಳೆದಿದ್ದ ಹೀರೆಗೀಡಗಳು. ಆಲಿಕಲ್ಲು ಮಳೆಗೆ ತೂತು ಬಿದ್ದಿರುವ ಹೂ ಕೋಸು ಹಾಗೂ ಹುರುಳಿಗಿಡಗಳು. ಭಾರಿ ಮಳೆಗೆ ಜೋಳ ಸೇರಿದಂತೆ ಹಲವು ಹೂ ಬೆಳೆಗಳು ನಾಶ. ಹೌದು ಮಳೆಯ ಅವಾಂತರಗಳಿಂದ ಬೆಳೆ ಹಾನಿಯಾಗಿರೋದು ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲೂಕಿನ ಕಸವನಹಳ್ಳಿ ಗ್ರಾಮದಲ್ಲಿ. ಅಂದಹಾಗೆ ಇಲ್ಲಿನ ಕಸವನಹಳ್ಳಿ, ಬಿಸವನಹಳ್ಳಿ ಗ್ರಾಮದಲ್ಲಿ ಹಲವು ರೈತರು ಮಿಶ್ರ ಬೆಳೆಗಳನ್ನ ಬೆಳೆಯುತ್ತಾರೆ. ಹತ್ತಾರು ಎಕರೆ ಪ್ರದೇಶದಲ್ಲಿ ಹೀರೆಗಿಡ, ಹುರುಳಿಗಿಡ, ಜೋಳ, ಹೂ ಕೋಸು, ಹೂ ಗಿಡಗಳನ್ನ ರೈತರು ಬೆಳೆದಿದ್ದಾರೆ. ಆದ್ರೆ, ಕಳೆದ ರಾತ್ರಿ ಬಿರುಗಾಳಿ ಸಹಿತ ಆಲಿ ಕಲ್ಲು ಮಳೆಗೆ, ಜೋಳ, ಕೋಸು, ಹುರುಳಿಕಾಯಿ, ಈರೆಕಾಯಿ, ಚೆಂಡು ಹೂ ಸೇರಿ ಹತ್ತಾರು ಎಕರೆ ಬೆಳೆ ಮಣ್ಣು ಪಾಲಾಗಿದೆ. ಕೈಗೆ ಬಂದ ಬೆಳೆ ಇನ್ನೇನು ಕೆಲವೇ ದಿನಗಳಲ್ಲಿ ಫಲ ನೀಡುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ರೈತರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅಂದಹಾಗೆ ನಿನ್ನೆ(ಮೇ.21) ರಾತ್ರಿ ಒಂದು ಗಂಟೆಗಳ ಕಾಲ ಸುರಿದ ಆಲಿಕಲ್ಲು ಮಳೆಯಿಂದಾಗಿ ಇನ್ನೆನು ಮಾರಾಟ ಮಾಡಬೇಕಿದ್ದ ಬೆಳೆಗಳು ಆಲಿಕಲ್ಲಿನಿಂದ ತೂತು ಬಿದ್ದು, ಬೆಳೆ ಸಂಪೂರ್ಣ ನಾಶವಾಗಿದೆ. ಜೊತೆಗೆ ಬಿರುಗಾಳಿಗೆ ಮಹಾಘನಿ ಮರಗಳು ಕೂಡ ನೆಲಕಚ್ಚಿದ್ದು, ರೈತರಿಗೆ ದಿಕ್ಕು ತೋಚದಂತಾಗಿದೆ. ಇಷ್ಟೆಲ್ಲಾ ಬೆಳೆ ಹಾನಿಯಾಗಿದ್ದರೂ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುವ ಕೆಲಸ ಮಾಡಿಲ್ಲ. ಜೊತೆಗೆ ಬೆಳೆ ನಾಶವಾಗಿರುವ ರೈತರ ತೋಟಗಳಿಗೆ ಭೇಟಿ ನೀಡಿ ಸಮಗ್ರ ಮಾಹಿತಿ ಪಡೆದು ರೈತರ ನೆರವಿಗೆ ತೋಟಗಾರಿಕೆ ಅಧಿಕಾರಿಗಳು ಕೂಡ ಮುಂದಾಗದೇ ಇರುವುದು ಇಲ್ಲಿನ ರೈತರನ್ನ ಕೆರಳಿಸಿದೆ. ಕೈಗೆ ಬರಬೇಕಿದ್ದ ತುತ್ತು, ಬಾಯಿಗೆ ಬರಲಿಲ್ಲ ಎಂದು ರೈತರು ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ. ಜೊತೆಗೆ ಬೆಳೆಹಾನಿಯಾಗಿರೋ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.

ಒಟ್ಟಾರೆ ಕಳೆದ ರಾತ್ರಿ ಬಿದ್ದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ದೊಡ್ಡಬಳ್ಳಾಪುರದ ಹಲವು ಹಳ್ಳಿಗಳ ರೈತರು ಬೆಳೆದ ಬೆಳೆಗಳು ನಾಶವಾಗಿ ಅನ್ನದಾತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಬೆಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ಬೆಳೆ ಕಳೆದುಕೊಂಡಿರೋ ರೈತರಿಗೆ ಸೂಕ್ತ ಪರಿಹಾರ ಒದಗಿಸುವ ಕೆಲಸ ಮಾಡಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ