ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ ಮೇಲ್ಛಾವಣಿ ಕುಸಿತ – 8 ಮಂದಿ ದುರ್ಮರಣ

Twitter
Facebook
LinkedIn
WhatsApp
1679026965620

ಲಕ್ನೋ: ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ (Potato Cold Storage) ಮೇಲ್ಛಾವಣಿ (Roof) ಕುಸಿದು ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ (Uttar Pradesh) ಸಂಭಾಲ್ ಚಂದೌಸಿ ಪ್ರದೇಶದಲ್ಲಿ ನಡೆದಿದೆ.

ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ ಮಾಲೀಕರನ್ನು ಅಂಕುರ್ ಅಗರ್ವಾಲ್ ಮತ್ತು ರೋಹಿತ್ ಅಗರ್ವಾಲ್ ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಈ ಹಿಂದೆಯೇ ಕೋಲ್ಡ್ ಸ್ಟೋರೇಜ್‍ ಶಿಥಿಲಾವಸ್ಥೆಯಲ್ಲಿದೆ ಎಂದು ವರದಿಯಾಗಿತ್ತು. ಆದರೆ ಕಟ್ಟಡ ಕುಸಿತಕ್ಕೆ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಮೊರಾಬಾದ್ ಡಿಐಜಿ ಶಲಭ್ ಮಾಥುರ್ ಮಾತನಾಡಿ, ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. 11 ಮಂದಿಯನ್ನು ರಕ್ಷಿಸಲಾಗಿದೆ. ಕಟ್ಟಡದಲ್ಲಿ ನೆಲಮಾಳಿಗೆಯಿದ್ದು, ಅಲ್ಲಿಯೂ ಯಾರಾದರೂ ಸಿಲುಕಿಕೊಂಡಿದ್ದಾರಾ ಎಂದು ಹುಡುಕುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಅವಶೇಷಗಳಡಿ ಸಿಲುಕಿರುವ ಜನರನ್ನು ಹುಡುಕಲು ಅಧಿಕಾರಿಗಳು ಸ್ನಿಫರ್ ಡಾಗ್‍ಗಳನ್ನು ಬಳಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಘಟನೆಗೆ ಸಂಬಂಧಿಸಿ ಕೋಲ್ಡ್ ಸ್ಟೋರೇಜ್‍ನ ಮಾಲೀಕ ಹಾಗೂ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಜೊತೆಗೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಾಪತ್ತೆಯಾದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ