ಮಂಗಳವಾರ, ಏಪ್ರಿಲ್ 16, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಸ್ಟ್ರೇಲಿಯಾ ವಿರುದ್ಧದ ಗೆಲುವಿಗೆ ಇವರೇ ಕಾರಣ- ಹಾರ್ದಿಕ್ ಪಾಂಡ್ಯ

Twitter
Facebook
LinkedIn
WhatsApp
0maqurgg hardik pandya in presentation ceremony 625x300 04 January 23

ಬಾರ್ಡರ್- ಗವಾಸ್ಕರ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ವಶಪಡಿಸಿಕೊಂಡ ನಂತರ ಇದೀಗ ಏಕದಿನ ಸರಣಿಯ ಮೊದಲ ಪಂದ್ಯದಲ್ಲೇ ಭಾರತ ಭರ್ಜರಿ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಇಂಡೋ- ಆಸೀಸ್ ಪ್ರಥಮ ಏಕದಿನದಲ್ಲಿ ಟೀಮ್ ಇಂಡಿಯ 5 ವಿಕೆಟ್​ಗಳಿಂದ ಗೆದ್ದು ಬೀಗಿತು.

ಈ ಗೆಲುವಿನ ಮೂಲಕ ಹಾರ್ದಿಕ್ ಪಡೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ನಾಯಕ ಹಾರ್ದಿಕ್ ಪಾಂಡ್ಯ ಗೆಲುವಿಗೆ ಕಾರಣರಾದವರನ್ನು ಹಾಡಿಹೊಗಳಿದ್ದಾರೆ.

ಈ ಪಂದ್ಯದಲ್ಲಿ ನಾವು ಎರಡು ಬಾರಿ ಒತ್ತಡಕ್ಕೆ ಸಿಲುಕಿದೆವು. ಈ ಸಂದರ್ಭದಲ್ಲಿ ನಾವು ಮುನ್ನುಗ್ಗದೆ ಸಮಯಕ್ಕಾಗಿ ಕಾದು ಪರಿಸ್ಥಿತಿಯನ್ನು ಉತ್ತಮವಾಗಿ ಅರ್ಥಹಿಸಿದೆವು. ಒಂದು ಸಲ ಲಯಕಂಡುಕೊಂಡರೆ ನಾವು ಟಾಪ್​ನಲ್ಲಿ ಇರುತ್ತೇವೆ. ನಮ್ಮ ತಂಡ ಅದನ್ನು ಮಾಡಿತು ಎಂದು ಹೇಳಿದ್ದಾರೆ.

ನಮ್ಮ ತಂಡದ ಫೀಲ್ಡಿಂಗ್ ಇಂದು ಅದ್ಭುತವಾಗಿತ್ತು. ಇದರ ಬಗ್ಗೆ ನನಗೆ ಹೆಮ್ಮೆ ಇದೆ. ಅನೇಕ ಅವಕಾಶಗಳನ್ನು ನಾವು ಮಾಡಿಕೊಟ್ಟೆವು ಅದನ್ನು ಫೀಲ್ಡರ್​ಗಳು ಚೆನ್ನಾಗಿ ಉಪಯೋಗಿಸಿಕೊಂಡಿದ್ದಾರೆ. ಅದರಲ್ಲೂ ರವೀಂದ್ರ ಜಡೇಜಾ ಮತ್ತು ಶುಭ್​ಮನ್ ಗಿಲ್ ಹಿಡಿದ ಕ್ಯಾಚ್ ಅತ್ಯುತ್ತಮವಾಗಿತ್ತು – ಹಾರ್ದಿಕ್ ಪಾಂಡ್ಯ.

ಜಡೇಜಾ ಬಗ್ಗೆ ಮಾತನಾಡುವುದಾದರೆ, ಅವರು ತಮ್ಮ ಘನತೆಗೆ ತಕ್ಕಂತೆ ಆಡಿದ್ದಾರೆ. ಏಕದಿನ ಕ್ರಿಕೆಟ್​ನಿಂದ ವಿರಾಮ ಪಡೆದುಕೊಂಡು ಬಂದು ಅವರು ಪಂದ್ಯವನ್ನು ಉತ್ತಮವಾಗಿ ಫಿನಿಶ್ ಮಾಡಿದರು. ಮುಖ್ಯವಾಗಿ ಕೆಎಲ್ ರಾಹುಲ್​ಗೆ ಅತ್ಯುತ್ತಮ ಸಾಥ್​ ನೀಡಿದರು. ಇವರಿಬ್ಬರ ಜೊತೆಯಾಟ ಭರ್ಜರಿ ಆಗಿತ್ತು. ಇವರಿಬ್ಬರ ಬ್ಯಾಟಿಂಗ್ ನಮಗೆ ಆತ್ಮವಿಶ್ವಾಸ ತುಂಬಿದೆ – ಹಾರ್ದಿಕ್ ಪಾಂಡ್ಯ.

ಇಲ್ಲಿ ತುಂಬಾ ಬಿಸಿಲಿತ್ತು. ಆದರೂ ನಾನು ಬೌಲಿಂಗ್ ಮಾಡುವಾಗ ಎಂಜಾಯ್ ಮಾಡಿದೆ. ಬ್ಯಾಟಿಂಗ್ ಮಾಡುವಾಗ ಕೂಡ ಖುಷಿ ಆಯಿತು. ಇದೊಂದು ನಮಗೆ ಸಿಕ್ಕ ಅತ್ಯುತ್ತಮ ಗೆಲುವು. ತಂಡ ನೀಡಿದ ಪ್ರದರ್ಶನದ ಬಗ್ಗೆ ಹೆಮ್ಮೆ ಇದೆ ಎಂಬುದು ಹಾರ್ದಿಕ್ ಪಾಂಡ್ಯ ಮಾತು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 35.4 ಓವರ್​​ಗಳಲ್ಲಿ ಕೇವಲ 188 ರನ್​ಗೆ ಆಲೌಟ್ ಆಯಿತು. ಮಿಚೆಲ್ ಮಾರ್ಶ್ 65 ಎಸೆತಗಳಲ್ಲಿ 81 ರನ್ ಸಿಡಿಸಿದ್ದು ಬಿಟ್ಟರೆ ಉಳಿದವರು ವೈಫಲ್ಯ ಅನುಭವಿಸಿದರು. ಭಾರತ ಪರ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ತಲಾ 3 ವಿಕೆಟ್ ಪಡೆದರೆ ಜಡೇಜಾ 2 ವಿಕೆಟ್ ಕಿತ್ತರು.

ಸುಲಭ ಟಾರ್ಗೆಟ್ ಬೆನ್ನಟ್ಟಿದ ಟೀಮ್ ಇಂಡಿಯಾ ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ನಂತರ ಕೆಎಲ್ ರಾಹುಲ್ (ಅಜೇಯ 75) ಹಾಗೂ ರವೀಂದ್ರ ಜಡೇಜಾ (ಅಜೇಯ 45) ಅವರ ಶತಕದ ಜೊತೆಯಾಟದ ನೆರವಿನಿಂದ 39.5 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಬಾರಿಸಿ 5 ವಿಕೆಟ್​ಗಳ ಜಯ ಸಾಧಿಸಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ