ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನಟಿ ಇಲಿಯಾನಾ ಡಿಕ್ರೂಜ್
Twitter
Facebook
LinkedIn
WhatsApp
ಬಾಲಿವುಡ್ (Bollywood) ನಟಿ ಇಲಿಯಾನಾ ಡಿಕ್ರೂಜ್ (Ileana D’cruz) ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಸ್ವತಃ ನಟಿಯೇ ಸೋಷಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ.
ಕಾಲಿವುಡ್, ಟಾಲಿವುಡ್ ಮತ್ತು ಬಾಲಿವುಡ್ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಇಲಿಯಾನಾ ಸ್ಯಾಂಡಲ್‌ವುಡ್‌ನ ಧ್ಯಾನ್ ನಟನೆಯ `ಹುಡುಗ ಹುಡುಗಿ’ ಸಿನಿಮಾದಲ್ಲಿಯೂ ಇಲಿಯಾನಾ ನಟಿಸಿದ್ದರು.
ನಟಿ ಇಲಿಯಾನಾ ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ. ಈ ಕುರಿತು ನಟಿ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇಲಿಯಾನಾ ಆಸ್ಪತ್ರೆಗೆ ದಾಖಲಾಗಿರುವುದೇಕೆ. ಅವರಿಗೆ ಕಾಡುತ್ತಿರುವ ಅನಾರೋಗ್ಯ ಸಮಸ್ಯೆ ಏನು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಚೆನ್ನಾಗಿದೆ. ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿರೋದಾಗಿ ನಟಿ ತಿಳಿಸಿದ್ದಾರೆ.
ಈ ಹಿಂದೆ ಬಾಡಿ ಡಿಸ್ಮಾರ್ಫಿಕ್ ಡಿಸಾರ್ಡರ್ ಎಂಬ ಕಾಯಿಲೆಯಿಂದ ಬಳಲುತ್ತಿರುವುದಾಗಿ ನಟಿ ಹೇಳಿದ್ದರು. ಇದೀಗ ಈ ಸಮಸ್ಯೆಯಿಂದಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರಾ ಎಂಬುದು ಯಾವುದೇ ಮಾಹಿತಿಯಿಲ್ಲ. ಆದರೆ ನಟಿಯ ಪೋಸ್ಟ್ ನೋಡುತ್ತಿದ್ದಂತೆ ಬೇಗ ಗುಣಮುಖರಾಗಿ ಬನ್ನಿ ಎಂದು ಹಾರೈಸುತ್ತಿದ್ದಾರೆ.