ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದಿನಿಂದ ಬಿಜೆಪಿ ಜೋಡೆತ್ತು ಜನ ಸಂಕಲ್ಪ ಯಾತ್ರೆ ಪ್ರಾರಂಭ

Twitter
Facebook
LinkedIn
WhatsApp
ಇಂದಿನಿಂದ ಬಿಜೆಪಿ ಜೋಡೆತ್ತು ಜನ ಸಂಕಲ್ಪ ಯಾತ್ರೆ ಪ್ರಾರಂಭ

ಬೆಂಗಳೂರು:  ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ರಾಜಕೀಯ ಪಕ್ಷಗಳು ಭರದಿಂದ ಸಿದ್ಧತೆ ಆರಂಭಿಸಿದ್ದು, ಕಾಂಗ್ರೆಸ್‌ನ ಭಾರತ್‌ ಜೋಡೋ ಯಾತ್ರೆ ವೇಳೆಯಲ್ಲಿಯೇ ಬಿಜೆಪಿಯ ಜನಸಂಕಲ್ಪ ಯಾತ್ರೆ ಕೂಡ ಮಂಗಳವಾರ ಆರಂಭವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಜಂಟಿಯಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ಯಾತ್ರೆ ಸಂಚರಿಸಲಿದೆ. ಮಂಗಳವಾರ ರಾಯಚೂರು ಜಿಲ್ಲೆಯಿಂದ ಆರಂಭಗೊಳ್ಳುವ ಯಾತ್ರೆಯು ಡಿ.25ಕ್ಕೆ ರಾಮನಗರ ಜಿಲ್ಲೆಯಲ್ಲಿ ಅಂತ್ಯವಾಗಲಿದೆ.

ಮುಂದಿನ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡೇ ಕಾಂಗ್ರೆಸ್‌ ಭಾರತ್‌ ಜೋಡೋ ಯಾತ್ರೆ ನಡೆಸಿದೆ. ರಾಜ್ಯದಲ್ಲಿಯೂ ರಾಹುಲ್‌ ಗಾಂಧಿ ಯಾತ್ರೆ ಭರ್ಜರಿಯಾಗಿ ಸಾಗಿದ್ದು, ಅಭೂತಪೂರ್ವ ಜನಬೆಂಬಲವೂ ವ್ಯಕ್ತವಾಗುತ್ತಿದೆ. ಅದಕ್ಕೆ ಸ್ಪರ್ಧೆಯೊಡ್ಡಲು ಹಾಗೂ ಚುನಾವಣೆಯಲ್ಲಿ ಬಹುಮತ ಪಡೆದು ಮತ್ತೊಮ್ಮೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ರಾಜ್ಯ ಪ್ರವಾಸ ಹಮ್ಮಿಕೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ನಿರಂತರ ಸಭೆ, ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆಯುವ ಯಾತ್ರೆಯು ಆಡಳಿತಾರೂಢ ಬಿಜೆಪಿ ಶಾಸಕರ ಕ್ಷೇತ್ರದಲ್ಲಿ ಮಾತ್ರವಲ್ಲದೆ, ಪ್ರತಿಪಕ್ಷ ಕಾಂಗ್ರೆಸ್‌, ಜೆಡಿಎಸ್‌ ಶಾಸಕರ ಕ್ಷೇತ್ರದಲ್ಲಿಯೂ ಸಂಚರಿಸಲಿದ್ದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಗಳನ್ನು ನಡೆಸಲಾಗುವುದು. ಅಲ್ಲದೆ, ಬೃಹತ್‌ ಸಮಾವೇಶಗಳನ್ನು ಸಹ ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಎರಡು ಕ್ಷೇತ್ರಗಳಂತೆ 50ಕ್ಕಿಂತ ಹೆಚ್ಚು ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆ ಸಂಚರಿಸಲಿದೆ. ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಆರಂಭವಾಗುವ ಸಂಕಲ್ಪ ಯಾತ್ರೆಯು ದಿನಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಂತೆ ಸಂಚರಿಸಲಿದೆ. ಅಲ್ಲದೆ, ಎಸ್‌ಸಿ ಮೋರ್ಚಾ, ಎಸ್‌ಟಿ ಮೋರ್ಚಾ, ಮಹಿಳಾ ಮೋರ್ಚಾ ಸೇರಿದಂತೆ ಇತರೆ ಮೋರ್ಚಾಗಳ ಬೃಹತ್‌ ಸಮಾವೇಶಗಳನ್ನು ಆಯೋಜಿಸಲಾಗಿದೆ.

ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಮುಂದಿಟ್ಟುಕೊಂಡು ಆ ಸಮುದಾಯಗಳ ಮತಗಳನ್ನು ಸೆಳೆಯಲು ಬಿಜೆಪಿ ಮುಂದಾಗಿದೆ. ಜತೆಗೆ ಇತರೆ ಸಮುದಾಯಗಳ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳುತ್ತಿರುವ ಬಗ್ಗೆ ಜನರ ಮನ ಗೆಲ್ಲಲು ಮುಂದಾಗಿದೆ. ನೀರಾವರಿ ಯೋಜನೆಗಳ ಜಾರಿ ಸೇರಿದಂತೆ ಇತರೆ ಅಭಿವೃದ್ಧಿ ಜನಪರ ಕಾರ್ಯಕ್ರಮಗಳನ್ನು ಮತ್ತು ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನಡೆದಿರುವ ಅಕ್ರಮಗಳನ್ನು ಮುಂದಿಟ್ಟುಕೊಂಡು ಯಾತ್ರೆಯ ವೇಳೆ ತಿರುಗೇಟು ನೀಡಲು ಬಿಜೆಪಿ ರಾಜಕೀಯ ರಣತಂತ್ರ ರೂಪಿಸಿದೆ. ಪಕ್ಷದ ಸಂಘಟನೆ ದೃಷ್ಟಿಯಿಂದ ಕಾರ್ಯಕರ್ತದ ಸರಣಿ ಸಭೆಗಳನ್ನು ನಡೆಸಲಿದೆ.

ಒಂದೆಡೆ ಕಾಂಗ್ರೆಸ್‌ ಜೋಡೋ ಯಾತ್ರೆ, ಮತ್ತೊಂದೆಡೆ ಬಿಜೆಪಿಯ ಸಂಕಲ್ಪ ಯಾತ್ರೆ ನಡೆಯಲಿದೆ. ಇದರ ನಡುವೆ, ನವೆಂಬರ್‌ ತಿಂಗಳಿನಿಂದ ಜೆಡಿಎಸ್‌ನ ರಥಯಾತ್ರೆ ಆರಂಭವಾಗಲಿದೆ. ಈ ವೇಳೆ ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಆರೋಪ-ಪ್ರತ್ಯಾರೋಪ ಮತ್ತಷ್ಟು ತೀವ್ರವಾಗಲಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ