ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇಂದು ಕಿತ್ತೂರು ಕರ್ನಾಟಕ ಬೆಳಗಾವಿಯಲ್ಲಿ ರಾಹುಲ್ ಗಾಂಧಿ ಹವಾ

Twitter
Facebook
LinkedIn
WhatsApp
pic 8

ಬೆಳಗಾವಿ: ಕಿತ್ತೂರು ಕರ್ನಾಟಕದ ಬೆಳಗಾವಿಯಿಂದ ರಾಹುಲ್ ಗಾಂಧಿ‌ ಚುನಾವಣಾ ರಣಕಹಳೆ ಮೊಳಗಿಸಲಿದ್ದು, ಸೋಮವಾರ ಬೆಳಗಾವಿಯಲ್ಲಿ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಭೇಟಿ ನೀಡಲಿದ್ದಾರೆ.

ನಗರದ ಸಿಪಿಎಡ್ ಮೈದಾನದಲ್ಲಿ ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಯುವ ಕ್ರಾಂತಿ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್ ಸೇರಿ ಹಲವರು ಭಾಗಿಯಾಗಲಿದ್ದಾರೆ. ಭಾನುವಾರ ರಾತ್ರಿಯೇ ಬೆಳಗಾವಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಿದ್ದಾರೆ.

Top Congress leader G Parameshwara opens up party strategy for Karnataka  elections, CM's post and issues

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯಲಿರುವ ಯುವಕ್ರಾಂತಿ ಸಮಾವೇಶ ಭಾರತ್ ಜೋಡೋ ಯಾತ್ರೆ ಬಳಿಕ ಮೊದಲ ಸಮಾವೇಶವಾಗಿದ್ದು, ಬೆಳಗಾವಿ (Belagavi) ನಗರದ ಸಿಪಿಎಡ್ ಮೈದಾನದಲ್ಲಿ ಬೃಹತ್ ಪೆಂಡಾಲ್ ಹಾಕಿ 50 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ.‌ ಕಿತ್ತೂರು ಕರ್ನಾಟಕ ಭಾಗದ 10 ಸಂಘಟನಾತ್ಮಕ ಜಿಲ್ಲೆಗಳ ಯುವ ಕಾಂಗ್ರೆಸ್ (Congress) ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ಧಾರವಾಡ ಗ್ರಾಮೀಣ, ಹುಬ್ಬಳ್ಳಿ ನಗರ, ಗದಗ, ಹಾವೇರಿ, ಉತ್ತರ ಕನ್ನಡ ಸಂಘಟನಾತ್ಮಕ ಜಿಲ್ಲೆಗಳ ಕಾರ್ಯಕರ್ತರ ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ.

ಮಧ್ಯಾಹ್ನ 12.30ಕ್ಕೆ ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ಗೆ ಆಗಮಿಸಲಿರುವ ರಾಹುಲ್ ಗಾಂಧಿ, ಮಧ್ಯಾಹ್ನ 1 ಗಂಟೆಗೆ ಸಿಪಿಎಡ್ ಮೈದಾನಕ್ಕೆ ಬರಲಿದ್ದಾರೆ. ಮಧ್ಯಾಹ್ನ 1 ಗಂಟೆಯಿಂದ 2.30ರವರೆಗೆ ಯುವ ಕ್ರಾಂತಿ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಯುವ ಕ್ರಾಂತಿ ಸಮಾವೇಶದಲ್ಲಿ ಯುವಕರಿಗಾಗಿಯೇ ಕಾಂಗ್ರೆಸ್ ಹೊಸ ಗ್ಯಾರಂಟಿ ಕಾರ್ಡ್‌ ಅನ್ನು ರಾಹುಲ್ ಗಾಂಧಿ ಘೋಷಣೆ ಮಾಡಲಿದ್ದಾರೆ.

ರಾಹುಲ್ ಗಾಂಧಿ ಆಗಮ‌ನದಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತುಂಬಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರ ಕರೆತರಲು ನಾಯಕರು, ಟಿಕೆಟ್ ಆಕಾಂಕ್ಷಿಗಳಿಗೆ ಡಿಕೆಶಿ ಟಾಸ್ಕ್ ನೀಡಿದ್ದಾರೆ. ಬೆಳಗಾವಿ ನಗರದಾದ್ಯಂತ ಕಾಂಗ್ರೆಸ್ ನಾಯಕರ ಕಟೌಟ್‌ಗಳು, ಬ್ಯಾನರ್‌, ‌ಕಾಂಗ್ರೆಸ್ ಧ್ವಜಗಳು ರಾರಾಜಿಸುತ್ತಿವೆ. ಇತ್ತೀಚೆಗೆ ಡಿಕೆಶಿ ನೇತೃತ್ವದ ಪ್ರಜಾಧ್ವನಿ ಯಾತ್ರೆಯಲ್ಲಿ ಕಾಂಗ್ರೆಸ್ ಪಕ್ಷದ ಅಭಯ ಹಸ್ತ ಚಿಹ್ನೆಗೆ ಹೊಸ ರೇಖೆ ಸೇರ್ಪಡೆಯಾಗಿದ್ದು ಕಂಡು ಬಂದಿತ್ತು. ಬೆಳಗಾವಿಯಲ್ಲಿ ಕಟ್ಟಿದ ಕಾಂಗ್ರೆಸ್ ಧ್ವಜಗಳಲ್ಲಿ ಇದೇ ಮಾದರಿಯ ಚಿಹ್ನೆ ಬಳಕೆ‌ ಮಾಡಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist