ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದು ಭಾರತ-ನ್ಯೂಜಿಲೆಂಡ್ ಮೊದಲ ಟಿ20: ಟೀಮ್ ಇಂಡಿಯಾ ಆಡುವ ಬಳಗವೇ ರೋಚಕ

Twitter
Facebook
LinkedIn
WhatsApp
ಇಂದು ಭಾರತ-ನ್ಯೂಜಿಲೆಂಡ್ ಮೊದಲ ಟಿ20: ಟೀಮ್ ಇಂಡಿಯಾ ಆಡುವ ಬಳಗವೇ ರೋಚಕ

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ತೋರಿ ಸರಣಿಯನ್ನು ಕ್ಲೀನ್ ಸ್ವೀಪ್ ಸಾಧನೆ ಗೈದ ಭಾರತ (India vs New Zealand) ಇದೀಗ ಹೊಡಿಬಡಿ ಕದನಕ್ಕೆ ಸಜ್ಜಾಗಿದೆ. ಮೂರು ಪಂದ್ಯಗಳ ಟಿ20 ಸರಣಿ ಪೈಕಿ ಇಂದು ರಾಂಚಿಯ ಜೆಸ್​ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ಹಾರ್ದಿಕ್ ಪಾಂಡ್ಯ (Hardik Pandya) ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು ಟೀಮ್ ಇಂಡಿಯಾ (Team India) ಯುವ ಪಡೆ ಯಾವರೀತಿ ಪ್ರದರ್ಶನ ತೋರುತ್ತೆ ಎಂಬುದು ನೋಡಬೇಕಿದೆ. ಜೊತೆಗೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದು ಕುತೂಹಲ ಕೆರಳಸಿದೆ.

team india t20 world cup schedule, India T20 World Cup Matches: టీ20 వరల్డ్  కప్‌లో భారత్ ఆడే మ్యాచ్‌ల పూర్తి షెడ్యూల్ ఇదే..! - team india complete  schedule in t20 world cup 2022 and match

ಭಾರತ ಪರ ಭರ್ಜರಿ ಫಾರ್ಮ್​ನಲ್ಲಿರುವ ಶುಭ್​ಮನ್ ಗಿಲ್ ಮತ್ತು ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ರುತುರಾಜ್ ಗಾಯಕ್ವಾಡ್ ಇಂಜುರಿಯಿಂದ ಹೊರಬಿದ್ದಿದ್ದು ಹೀಗಾಗಿ ಮೂರನೇ ಕ್ರಮಾಂಕ ಕೂಡ ಖಚಿತವಾಗಿದ್ದು ರಾಹುಲ್ ತ್ರಿಪಾಠಿ ಆಡಲಿದ್ದಾರೆ. ನಂತರದ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯಲಿದ್ದಾರೆ. ಹಾರ್ದಿಕ್ ಪಾಂಡ್ಯ, ದೀಪಕ್ ಹೂಡ ಹಾಗೂ ವಾಷಿಂಗ್ಟನ್ ಸುಂದರ್ ಹೀಗೆ ಒಟ್ಟು ಮೂವರು ಆಲ್ರೌಂಡರ್ ಆಡುವ ಸಾಧ್ಯತೆ. ಅರ್ಶ್​ದೀಪ್ ಸಿಂಗ್ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದು ಉಮ್ರಾನ್ ಮಲಿಕ್ ಹಾಗೂ ಶಿವಂ ಮಾವಿ ಸಾಥ್ ನೀಡಲಿದ್ದಾರೆ. ಸ್ಪಿನ್ನರ್​ಗಳ ಪೈಕಿ ಯುಜ್ವೇಂದ್ರ ಚಹಲ್ ಅಥವಾ ಕುಲ್ದೀಪ್ ಯಾದವ್ ಪೈಕಿ ಯಾರಿಗೆ ಸ್ಥಾನ ನೋಡಬೇಕಿದೆ.

ಇತ್ತ ನ್ಯೂಜಿಲೆಂಡ್ ತಂಡ ಏಕದಿನ ಸರಣಿಯಲ್ಲಿ ಮುಖಭಂಗ ಅನುಭವಿಸಿದ್ದರೂ ಟಿ20 ಯಲ್ಲಿ ಬಲಿಷ್ಠವಾಗಿದೆ. ಕಿವೀಸ್ ಪಡೆಯನ್ನು ಮಿಚೆಲ್ ಸ್ಯಾಂಟ್ನರ್ ಮುನ್ನಡೆಸಲಿದ್ದಾರೆ. ಆಲ್‌ರೌಂಡರ್ ಸ್ಯಾಂಟ್ನರ್ ತಂಡವನ್ನು ಸೋಲಿನ ಸುಳಿಯಿಂದ ತಪ್ಪಿಸುವ ಆಲೋಚನೆಯಲ್ಲಿದ್ದಾರೆ. ಬಲಿಷ್ಠ ಬೌಲಿಂಗ್ ಮತ್ತು ಬ್ಯಾಟಿಂಗ್ ಪಡೆಯನ್ನು ಹೊಂದಿರುವ ನ್ಯೂಜಿಲೆಂಡ್ ಭಾರತದ ಯುವ ತಂಡವನ್ನು ಹೇಗೆ ಎದುರಿಸಲಿದೆ ಎಂಬುದು ರೋಚಕತಡ ಸೃಷ್ಟಿಸಿದೆ.

ಇನ್ನು ರಾಂಚಿಯ ಜೆಎಸ್‌ಸಿಎ ಸ್ಟೇಡಿಯಂನಲ್ಲಿ ಭಾರತ ಟಿ20 ಪಂದ್ಯಗಳ ದಾಖಲೆ ಉತ್ತಮವಾಗಿದೆ. ಇಲ್ಲಿಯವರೆಗೂ ಇಲ್ಲಿ ಟೀಮ್ ಇಂಡಿಯಾ ಒಂದೇ ಒಂದು ಟಿ20 ಪಂದ್ಯವನ್ನು ಸೋತಿಲ್ಲ. ಬ್ಲೂ ಬಾಯ್ಸ್​ ಆಡಿದ 3 ಪಂದ್ಯಗಳಲ್ಲಿ ಎಲ್ಲವನ್ನೂ ಗೆದ್ದು ಬೀಗಿದೆ. 2016 ಫೆಬ್ರವರಿಯಲ್ಲಿ ಶ್ರೀಲಂಕಾವನ್ನು 69 ರನ್‌ಗಳಿಂದ, 2017 ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್‌ಗಳಿಂದ ಮತ್ತು 2021ರಲ್ಲಿ ನ್ಯೂಜಿಲೆಂಡ್​ ಅನ್ನು 7 ವಿಕೆಟ್‌ಗಳಿಂದ ಸೋಲಿಸಿದ ದಾಖಲೆ ಹೊಂದಿದೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಏಕದಿನ ಟಿ20 ಪಂದ್ಯ ಸಂಜೆ 7:00 ಗಂಟೆಗೆ ಪ್ರಾರಂಭವಾಗುತ್ತದೆ. 6:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಬಹುತೇಕ ಚಾನೆಲ್‌ಗಳಲ್ಲಿ ಈ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು. ಹಾಗೆಯೆ ಡಿಸ್ನಿ ಹಾಟ್​ಸ್ಟಾರ್ ಆ್ಯಪ್​ನಲ್ಲೂ ಲೈವ್ ಸ್ಟ್ರೀಮ್ ಇರಲಿದೆ.

ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಶದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ , ಪೃಥ್ವಿ ಶಾ, ಮುಖೇಶ್ ಕುಮಾರ್.

ನ್ಯೂಜಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೇನ್ ಕ್ಲೀವರ್ (ವಿಕೆಟ್ ಕೀಪರ್), ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬೆನ್ ಲಿಸ್ಟರ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರಿಪ್ಪನ್, ಹೆನ್ರಿ ಶಿಪ್ಲಿ, ಇಶ್ ಸೋಧಿ , ಬ್ಲೇರ್ ಟಿಕ್ನರ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ