ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇದು ಆರ್.ಎಸ್.ಎಸ್ ಮತ್ತು ಯಡಿಯೂರಪ್ಪ ಅವರ ಸರ್ಕಾರದ ಕೂಸು. ನಮ್ಮದಲ್ಲ ಎಂದು ಸಿದ್ದರಾಮಯ್ಯ ಆರೋಪ

Twitter
Facebook
LinkedIn
WhatsApp
ಇದು ಆರ್.ಎಸ್.ಎಸ್ ಮತ್ತು ಯಡಿಯೂರಪ್ಪ ಅವರ ಸರ್ಕಾರದ ಕೂಸು. ನಮ್ಮದಲ್ಲ ಎಂದು ಸಿದ್ದರಾಮಯ್ಯ ಆರೋಪ

ಬೆಂಗಳೂರು: ವಿಧಾನಸಭೆಯಲ್ಲಿ ತೀವ್ರ ಜಟಾಪಟಿಗೆ ಕಾರಣವಾದ ಮತಾಂತರ ನಿಷೇಧ ಕಾಯ್ದೆಯ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಲವು ಸ್ಪಷ್ಟನೆ ನೀಡಿದದ್ದು, ಈ ಕಾಯ್ದೆ ತಮ್ಮ ಅಧಿಕಾರಾವಧಿಯಲ್ಲಿ ರಚನೆಯಾಗಿದ್ದು ಎಂಬುದನ್ನು ಅಲ್ಲಗಳೆದಿದ್ದಾರೆ. 5/11/2009 ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್.ಎಸ್.ಎಸ್ ಮೂಲದ ಚಿದಾನಂದ ಮೂರ್ತಿ, ನರಹರಿ, ಬಿ.ಎನ್ ಮೂರ್ತಿ, ಜಯದೇವ, ಆರ್.ಲೀಲಾ, ಮುತ್ತೂರು ಕೃಷ್ಣಮೂರ್ತಿ ಎಂಬುವವರು ಕಾನೂನು ಆಯೋಗಕ್ಕೆ ಮತಾಂತರ ನಿಷೇಧ ಕಾಯ್ದೆ ರೂಪಿಸಿ, ಜಾರಿಗೊಳಿಸುವಂತೆ ಮನವಿ ಮಾಡಿದ್ದರು. ಕಾನೂನು ಆಯೋಗದವರು 21/9/2013 ರಲ್ಲಿ ಕಾನೂನು ಇಲಾಖೆಗೆ ಕರಡು ನೀಡುತ್ತಾರೆ. ನಂತರ ಈ ಕರಡು ಕಾನೂನು ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಲ್ಲಿ ಚರ್ಚೆಯಾಗಿ ನಮ್ಮ ಕೈಸೇರಿದ್ದು 2015 ರಲ್ಲಿ. ಇದನ್ನು ನಾವು ಸಚಿವ ಸಂಪುಟದ ಮುಂದಿಟ್ಟು ಚರ್ಚೆ ಮಾಡಿಲ್ಲ, ಅನುಮೋದನೆಯನ್ನೂ ನೀಡಿಲ್ಲ. ಮುಖ್ಯಮಂತ್ರಿ ಈ ರೀತಿ ಸಂಪುಟ ಚರ್ಚೆಗೆ ತನ್ನಿ ಎಂದ ಅನೇಕ ವಿಷಯಗಳು, ಕಡತಗಳು ತಿರಸ್ಕರಿಸಲ್ಪಟ್ಟಿವೆ, ಕೆಲವು ಮುಂದೂಡಲ್ಪಟ್ಟಿವೆ, ಇನ್ನು ಕೆಲವು ಸಂಪುಟ ಉಪ ಸಮಿತಿಗೆ ಹೋಗಿವೆ. ಈ ಎಲ್ಲಾ ಕಡೆ ಸಚಿವರಿಗೆ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಹಿಂದಿನ ಕರಡು ಪ್ರತಿಗೂ, ಈಗಿನ ಕರಡು ಮಸೂದೆಗೂ ಬಹಳಷ್ಟು ವ್ಯತ್ಯಾಸಗಳಿವೆ. ಮದುವೆ ಎಂಬ ಪದ ಹೊಸದಾಗಿ ಸೇರಿಸಲಾಗಿದೆ, ಸಾಕ್ಷಾಧಾರ ಕೊರತೆ ಎದುರಾದಾಗ ದೂರುದಾರರಿಗೆ ಅನುಕೂಲವಾಗುವಂತೆ ನಿಯಮವಿದೆ, ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ, ಅಪ್ರಾಪ್ತರಿಗೆ, ಬುದ್ದಿಭ್ರಮಣೆಯಾದವರನ್ನು ಮತಾಂತರ ಮಾಡಿದಾಗ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ. ಆದರೆ ಇವುಗಳಿಗೆ ಕಾನೂನಿನಲ್ಲಿ ಅವಕಾಶ ಇಲ್ಲ. ಕಾನೂನಿನ ಎದುರು ಸರ್ವರೂ ಸಮಾನರು. ನಮ್ಮ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಹೆಚ್.ಆಂಜನೇಯ ಅವರು ಕರಡು ಪ್ರತಿಯನ್ನು ನೋಡಿ, ಇದನ್ನು ಸಂಪುಟದ ಮುಂದೆ ತರುವ ಅಗತ್ಯವಿಲ್ಲ ಎಂದು ಬರೆದು, ಅದನ್ನು ಬದಿಗೆ ಹಾಕಿದ್ದರು.ನಮಗೆ ಇಂಥದ್ದೊಂದು ಕಾಯ್ದೆ ತರುವ ಬಗ್ಗೆ ಕಾಳಜಿ ಇದ್ದಿದ್ದರೆ 2015 ರ ನವೆಂಬರ್ ನಲ್ಲಿ ಸಹಿ ಹಾಕಿ ಸಂಪುಟ ಚರ್ಚೆಗೆ ಕಳುಹಿಸಿದ್ದ ಕಡತ, ತಿರಸ್ಕಾರಗೊಂಡ ನಂತರ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದರ ಕಡೆ ಗಮನ ನೀಡಿಲ್ಲ. ನಮಗೆ ಅದರ ಅಗತ್ಯವೂ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.
ಮತಾಂತರ ನಿಷೇಧ ಕಾಯ್ದೆ ಅತ್ಯಂತ ಅಮಾನವೀಯ, ಸಂವಿಧಾನ ಬಾಹಿರ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾದುದ್ದು. ಇದು ಆರ್.ಎಸ್.ಎಸ್. ನ ಕೈವಾಡ. ಗುಜರಾತ್, ಉತ್ತರ ಪ್ರದೇಶ ಮತ್ತು ಕರ್ನಾಟಕ ಎಲ್ಲಾ ರಾಜ್ಯಗಳ ಕಾನೂನು ಒಂದೇ ರೀತಿಯ ಪದಬಳಕೆಯಿಂದ ಕೂಡಿದೆ. ಒಬ್ಬರೇ ಮೂರರ ಕರಡು ತಯಾರು ಮಾಡಿದಂತಿದೆ. ನಾವು ಸಂವಿಧಾನರೀತ್ಯ ಕಾಯ್ದೆಯನ್ನು ವಿರೋಧ ಮಾಡಿದ್ದೇವೆ. ಯಾರನ್ನೋ ಖುಷಿಪಡಿಸೋಕಲ್ಲ. ಯಾವುದೋ ಒಂದು ಧರ್ಮವನ್ನು ಗುರಿಯಾಗಿರಿಸಿ ಕಾನೂನು ರೂಪಿಸಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ರಾಜ್ಯದಲ್ಲಿ ಹಲವು ಜ್ವಲಂತ ಸಮಸ್ಯೆಗಳಿದ್ದಾವೆ, ಇವುಗಳಿಂದ ಜನರನ್ನು ವಿಮುಖಗೊಳಿಸಲು ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಹೊರಟಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮನವಿ ಮಾಡಿದ್ದರಿಂದ ಕಾನೂನು ಆಯೋಗದವರು ಕರಡು ರಚನೆ ಮಾಡಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ. ಇದು ಆರ್.ಎಸ್.ಎಸ್ ಮತ್ತು ಯಡಿಯೂರಪ್ಪ ಅವರ ಸರ್ಕಾರದ ಕೂಸು. ನಮ್ಮದಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು