ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇನ್ನೂ ಜಾರಿಯಾಗಿಲ್ಲ ಹಲವೆಡೆ ಜಲಜೀವನ್‌ ಯೋಜನೆ

Twitter
Facebook
LinkedIn
WhatsApp
mcms 1 1

ತುರುವೇಕೆರೆ: ತಾಲೂಕಿನ ಹಡವನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇನ್ನೂ ಜಲಜೀವನ್‌ ಯೋಜನೆಯನ್ನು ಜಾರಿಗೊಳಿಸಿಲ್ಲ ಎಂದು ಹಡವನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಧಾ ರಂಗಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು ತಮ್ಮ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಹಲವಾರು ಗ್ರಾಮಗಳಿಗೆ ಜಲಜೀವನ್‌ ಯೋಜನೆಯಡಿ ಮನೆಮನೆಗೆ ಕೊಳಾಯಿ ಸಂಪರ್ಕ ಕೊಡುವ ಯೋಜನೆ ಮಂಜೂರಾಗಿದೆ. ಟೆಂಡರ್‌ ಪ್ರಕ್ರಿಯೆಯೂ ಮುಗಿದಿದೆ. ಆದರೆ ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಪ್ರಕ್ರಿಯೆ ಮುಂದುವರೆದಿಲ್ಲ. ಪಂಚಾಯ್ತಿ ವ್ಯಾಪ್ತಿಗೆ ಬರುವ ಅಪ್ಪಸಂದ್ರ ಸೇರಿದಂತೆ ಹಲವಾರು ಗ್ರಾಮಗಳಿಗೆ ನೀರು ನೀಡಲು ಓವರ್‌ ಹೆಡ್‌ ಟ್ಯಾಂಕ್‌ನ ಅವಶ್ಯಕತೆ ಇದೆ. ಇದನ್ನು ನಿರ್ಮಿಸುವ ಸಲವಾಗಿ ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ ಎಂದು ಸುಧಾರಂಗಸ್ವಾಮಿ ಹೇಳಿದರು.

ಹಡವನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಅಪ್ಪಸಂದ್ರ ಸೇರಿದಂತೆ ಯಾವ ಗ್ರಾಮದಲ್ಲಿಯೂ ಜಲಜೀವನ್‌ ಯೋಜನೆ ಜಾರಿಗೊಂಡಿಲ್ಲ. ಆದರೆ ಕೆಲವರು ತಮ್ಮ ಮನೆಗೆ ಅಗತ್ಯವಿರುವ ಕೊಳಾಯಿ ಸಂಪರ್ಕಕ್ಕೆ ಪಂಚಾಯ್ತಿ ವತಿಯಿಂದ ಅನುಮತಿ ಪಡೆದು ಸಂಬಂಧಿಸಿದ ಶುಲ್ಕವನ್ನು ಪಾವತಿ ಮಾಡಿದ್ದಾರೆ. ಅವರೇ ಸ್ವಂತ ಖರ್ಚಿನಲ್ಲಿ ಕೊಳಾಯಿಗೆ ತಗುಲುವ ವಸ್ತುಗಳ ವೆಚ್ಚವನ್ನು ಭರಿಸಬೇಕೆಂಬ ನಿಯಮವಿದೆ. ಆದರೆ ಕೆಲವರು ಮನೆಗೆ ನಲ್ಲಿ ಹಾಕಿಸಿಕೊಳ್ಳಲು ಶುಲ್ಕ ಕಟ್ಟಿರುವುದನ್ನು ಜಲಜೀವನ್‌ ಯೋಜನೆಯಡಿ ಕೊಳಾಯಿ ನಿರ್ಮಿಸಲು ಹಣ ಪಡೆದಿದ್ದಾರೆಂದು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು

ಸುಧಾ ರಂಗಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಜಲಜೀವನ್‌ ಯೋಜನೆ ಅಪ್ಪಸಂದ್ರ ಗ್ರಾಮ ಸೇರಿದಂತೆ ಯಾವ ಗ್ರಾಮಗಳಿಗೂ ಜಾರಿಯಾಗದ ಹಿನ್ನೆಲೆಯಲ್ಲಿ ಗ್ರಾಮಪಂಚಾಯ್ತಿ ವತಿಯಿಂದ ನೀಡಲಾಗುತ್ತಿರುವ ಕುಡಿಯುವ ನೀರಿನ ಯೋಜನೆಗೆ ಮಾತ್ರ ಹಣ ಕಟ್ಟಿಸಿಕೊಳ್ಳಲಾಗುತ್ತಿದೆ. ಶೀಘ್ರದಲ್ಲೇ ಜಲಜೀವನ್‌ ಯೋಜನೆಯಿಂದಲೇ ಮನೆಮನೆಗೆ ಕೊಳಾಯಿ ಸಂಪರ್ಕ ನೀಡಲಾಗುವುದು ಎಂದು ಸುಧಾರಂಗಸ್ವಾಮಿ ಹೇಳಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ನರಸಪ್ಪ, ರಂಗಸ್ವಾಮಿ ಮತ್ತು ಧನಂಜಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ