ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇನ್ಮುಂದೆ ಆಧಾರ್‌ ಕಾರ್ಡ್‌ಗಾಗಿ ಗ್ರಾಪಂನಲ್ಲೇ ವ್ಯವಸ್ಥೆ.

Twitter
Facebook
LinkedIn
WhatsApp
ಇನ್ಮುಂದೆ ಆಧಾರ್‌ ಕಾರ್ಡ್‌ಗಾಗಿ  ಗ್ರಾಪಂನಲ್ಲೇ ವ್ಯವಸ್ಥೆ.

ಬೆಂಗಳೂರು: ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಅವಶ್ಯವಾಗಿರುವ ಆಧಾರ್ ಕಾರ್ಡ್‌ನಲ್ಲಿ ಏನಾದರೂ ಲೋಪದೋಷವಿದ್ದಲ್ಲಿ ಸರಿಪಡಿಸಲು ಆಧಾರ್ ಕೇಂದ್ರಗಳಿಗೆ ಅಲೆಯಬೇಕಾಗಿದ್ದ ಗ್ರಾಮೀಣರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಈಗ ತಮ್ಮ ತಮ್ಮ ಗ್ರಾಪಂ ಕಚೇರಿಗಳಲ್ಲೇ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿಸಲು ಹಾಗೂ ಹೊಸದಾಗಿ ನೋಂದಣಿ ಮಾಡಿಸಲು ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಸದ್ಯ ರಾಜ್ಯದ 630 ಗ್ರಾಪಂಗಳಲ್ಲಿ ಮೊದಲ ಹಂತದಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ. ಅದಕ್ಕಾಗಿ ಗ್ರಾಪಂಗಳಿಗೆ ೨೦೦೦ ಟ್ಯಾಬ್ಲೆಟ್ ಮತ್ತು ಸಿಂಗಲ್ ಪ್ರಿಂಟ್ ದೃಢೀಕರಣ ಉಪಕರಣಗಳನ್ನು ನೀಡಲು ಸರ್ಕಾರ ಒಪ್ಪಿದೆ. 630 ಟ್ಯಾಬ್ಲೆಟ್‌ಗಳನ್ನು ರಾಜ್ಯದ 28 ಜಿಲ್ಲೆಗಳ ತಲಾ 22 ಗ್ರಾಪಂಗಳಿಗೆ ವಿತರಿಸಲು ಸಿದ್ಧತೆ ನಡೆಸಲಾಗಿದೆ.
ಗ್ರಾಪಂಗಳಲ್ಲಿ ಏನೇನು ಸೌಲಭ್ಯ?

ಗ್ರಾಮೀಣರು ಆಧಾರ್‌ನಲ್ಲಿ ಮೊಬೈಲ್ ಸಂಖ್ಯೆಯನ್ನು ಅಪ್‌ಡೇಟ್ ಮಾಡಿಸಬಹುದು. ೫ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಆಧಾರ್ ನೋಂದಣಿ ಮಾಡಿಸಬಹುದು. ಆಧಾರ್ ತಿದ್ದುಪಡಿ ಅಥವಾ ಹೊಸದಾಗಿ ನೋಂದಣಿ ಮಾಡಿಸಲು 50 ರು. ಶುಲ್ಕ ನಿಗದಿಪಡಿಸಲಾಗಿದೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಶುಲ್ಕ ವಿನಾಯ್ತಿ ನೀಡಲಾಗಿದೆ. ಒಂದು ವೇಳೆ ಹೆಚ್ಚುವರಿ ಶುಲ್ಕ ಅಥವಾ ಶುಲ್ಕ ವಿನಾಯ್ತಿಯಿದ್ದವರಿಂದ ಶುಲ್ಕ ಪಡೆದಲ್ಲಿ ಪಿಡಿಒ, ಡಾಟಾ ಎಂಟ್ರಿಯವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ.
ಸದ್ಯದಲ್ಲಿ ಆರಂಭ ಪಿಡಿಒ ಅನುಮೋದಿಸಲು ಅಧಿಕಾರ ನೀಡಲಾಗಿದೆ. ಜು.13 ಅಥವಾ 14 ರಂದು ಜಿಪಂ ವತಿಯಿಂದ ಅಧಿಕಾರಿಯನ್ನು ನೇಮಿಸಲಾಗುತ್ತದೆ. ಜು.19ರಂದು ಜಿಪಂನಲ್ಲಿ ಪಿಡಿಒಗಳಿಗೆ ತರಬೇತಿ ನೀಡಲಾಗುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು