ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇಬ್ಬರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ- ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವರ್ಗಾವಣೆ

Twitter
Facebook
LinkedIn
WhatsApp
photo 1597157639073 69284dc0fdaf 1

ಬೆಂಗಳೂರು: ಐಪಿಎಸ್ ವರ್ಸಸ್ ಐಎಎಸ್ ಜಟಾಪಟಿ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ ಮುಟ್ಟಿಸಿದ್ದು, ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ

ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವರ್ಗಾವಣೆಗೆ ಸಂಬಂಧಿಸಿ ಸ್ಥಳ ನಿಯುಕ್ತಿಗೊಳಿಸದೇ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಮೊದಲು ಡಿ. ರೂಪಾ ಕರಕುಶಲ ಅಭಿವೃದ್ಧಿ ನಿಗಮ ಎಂಡಿಯಾಗಿದ್ದರು ಹಾಗೂ ರೋಹಿಣಿ ಸಿಂಧೂರಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತೆಯಾಗಿದ್ದರು. ರೂಪಾ ಅವರ ಪತಿ ಐಎಎಸ್ ಅಧಿಕಾರಿ ಮನೀಷ್ ಮೌದ್ಗಿಲ್‍ರನ್ನು ರಾಜ್ಯಸರ್ಕಾರ ವರ್ಗಾವಣೆ ಮಾಡಿದೆ.

photo 1597157639073 69284dc0fdaf 2

ಎಚ್.ಬಸವರಾಜೇಂದ್ರ ಅವರನ್ನು ರೋಹಿಣಿ ಅವರ ಸ್ಥಾನಕ್ಕೆ ನಿಯೋಜಿಸಿದ್ದರೆ ಭಾರತಿ ಅವರನ್ನು ರೂಪಾ ಅವರ ಜಾಗಕ್ಕೆ ನಿಯೋಜಿಸಲಾಗಿದೆ. ರೂಪಾ ಪತಿ ಮೌನಿಶ್ ಮೌದ್ಗಿಲ್ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಪರ್ಸನಲ್ ಮತ್ತು ಅಡ್ಮಿನಿಸ್ಟ್ರೇಟಿವ್ ರಿಫಾರ್ಮ್ಸ್ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. 

ನಿನ್ನೆಯಷ್ಟೇ ರಾಜ್ಯ ಸರ್ಕಾರ ಇಬ್ಬರು ಮಹಿಳಾ ಅಧಿಕಾರಿಗಳಿಗೆ ನೋಟಿಸ್ ನೀಡಿ ತರಾಟೆ ತೆಗೆದುಕೊಂಡಿತ್ತು. ಇನ್ನೊಬ್ಬ ಸರ್ಕಾರಿ ಅಧಿಕಾರಿಯ ವಿರುದ್ಧದ ಆರೋಪಕ್ಕೆ ಮಾಧ್ಯಮ ಬಳಕೆ ಮಾಡಬೇಡಿ. ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆಯಿದೆ ಎಂದು ಮಹಿಳಾ ಅಧಿಕಾರಿಗಳಿಗಿಬ್ಬರಿಗೂ ರಾಜ್ಯ ಸರ್ಕಾರ ಸೂಚನೆ ನೀಡಿತ್ತು.

ರೋಹಿಣಿ ಸಿಂಧೂರಿ, ಡಿ.ರೂಪಾ ಬೀದಿ ರಂಪಾಟ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ರಾಜ್ಯ ಸರ್ಕಾರ ಇಬ್ಬರಿಗೂ ನೋಟಿಸ್ ಜಾರಿ ಮಾಡಿದೆ. ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆ ಇದೆ. ಆದರೆ ಅದನ್ನು ಬಿಟ್ಟು ನೀವು ಮಾಧ್ಯಮ ಮುಂದೆ ಹೋಗಿದ್ದೀರಿ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಆಗಿದೆ. ಇದು ಅಖಿಲ ಭಾರತೀಯ ಸೇವಾ ನಿಯಮಗಳ ಉಲ್ಲಂಘನೆ ಎಂದು ಖಡಕ್ಕಾಗಿ ಹೇಳಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ