ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಬ್ಬರು ಮಹಿಳಾ ಅಧಿಕಾರಿಗಳಿಗೆ ಸರ್ಕಾರದಿಂದ ಖಡಕ್ ಸೂಚನೆ

Twitter
Facebook
LinkedIn
WhatsApp
rani abbakka 96225570 4

ಬೆಂಗಳೂರು: ಇನ್ನೊಬ್ಬ ಸರ್ಕಾರಿ ಅಧಿಕಾರಿಯ ವಿರುದ್ಧದ ಆರೋಪಕ್ಕೆ ಮಾಧ್ಯಮ ಬಳಕೆ ಮಾಡಬೇಡಿ. ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆಯಿದೆ ಎಂದು ಮಹಿಳಾ ಅಧಿಕಾರಿಗಳಿಗಿಬ್ಬರಿಗೂ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ.

ರೋಹಿಣಿ ಸಿಂಧೂರಿ (Rohini Sindhuri), ಡಿ. ರೂಪಾ (D Roopa) ಬೀದಿ ರಂಪಾಟ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ರಾಜ್ಯ ಸರ್ಕಾರ ಇಬ್ಬರಿಗೂ ನೋಟಿಸ್ ಜಾರಿ ಮಾಡಿದೆ. ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆ ಇದೆ. ಆದರೆ ಅದನ್ನು ಬಿಟ್ಟು ನೀವು ಮಾಧ್ಯಮ ಮುಂದೆ ಹೋಗಿದ್ದೀರಿ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಆಗಿದೆ. ಇದು ಅಖಿಲ ಭಾರತೀಯ ಸೇವಾ ನಿಯಮಗಳ ಉಲ್ಲಂಘನೆ ಎಂದು ತಿಳಿಸಿದೆ.

ನಿಮ್ಮ ಆರೋಪಗಳನ್ನು ಸಕ್ಷಮ ಪ್ರಾಧಿಕಾರದ ಮುಂದೆ ಮಾಡಬಹುದು. ಮಾಧ್ಯಮಗಳ ಮುಂದೆ ಆರೋಪ ಮಾಡಿದ್ದೀರಾ. ಹೀಗಾಗಿ ನೀವು ಇನ್ನು ಮುಂದೆ ಮಾಧ್ಯಮಗಳ ಮುಂದೆ ಹೋಗಬಾರದು ಎಂದು ತಾಕೀತು ಮಾಡಿದೆ.

ರಾಜ್ಯ ಸರ್ಕಾರದಿಂದ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದು, ಸಿಬ್ಬಂದಿ ಮತ್ತು ಆಡಳಿತ ಇಲಾಖೆಯಿಂದ ನೋಟಿಸ್ ಜಾರಿ ಮಾಡಿದೆ. ಸಿಎಂ ಸೂಚನೆ ಬಳಿಕ ಮಹಿಳಾ ಅಧಿಕಾರಿಗಳಿಗೆ ನೊಟೀಸ್ ಜಾರಿಯಾಗಿದ್ದು ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಈ ಆದೇಶ ಹೊರಡಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ