ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ, ಆರೋಪಿಯ ಬಂಧನ

Twitter
Facebook
LinkedIn
WhatsApp
woman rape 0 sixteen nine

ಜಮಖಂಡಿ(ಬಾಗಲಕೋಟೆ)(ಜ.24): ಅನುದಾನಿತ ಶಾಲೆಯೊಂದರ ಶಿಕ್ಷಕ ಅಪ್ರಾಪ್ತ ಬಾಲಕಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅನುದಾನಿತ ಶಾಲೆಯೊಂದರ ಶಿಕ್ಷಕ ಲಕ್ಷ್ಮಣ ದೇವೆಂದ್ರಪ್ಪ ಕೊಪ್ಪದ ಬಂಧಿತ ಆರೋಪಿ. ಆರೋಪಿ ಮೂಲತಃ ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ಕಾಲುವೆ ಯಲ್ಲಾಪೂರ ಗ್ರಾಮದವನು. ಕಳೆದೊಂದು ವರ್ಷದಿಂದ ತನ್ನ ಮನೆಯಲ್ಲಿ ಇಂಗ್ಲಿಷ್‌ ಟ್ಯೂಷನ್‌ ಹೇಳಿಕೊಡುವುದಾಗಿ ಕರೆಸಿಕೊಂಡು ಟ್ಯೂಷನ್‌ ಬಿಟ್ಟ ನಂತರ ಮನೆಯಲ್ಲಿ ಪತ್ನಿ ಇಲ್ಲದ ವೇಳೆ ಹಾಗೂ ಶಾಲೆ ಬಿಟ್ಟ ನಂತರ ಶಾಲೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಇಬ್ಬರು ವಿದ್ಯಾರ್ಥಿನಿಯರು ಪಾಲಕರಿಗೆ ಮಾಹಿತಿ ನೀಡಿದ್ದರು.

ಹಲವು ದಿನಗಳಿಂದ ಪ್ರತಿನಿತ್ಯ ಶಿಕ್ಷಕ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ವಿದ್ಯಾರ್ಥಿನಿಯರು ಪಾಲಕರಿಗೆ ಈ ವಿಷಯ ತಿಳಿಸಿದ್ದರು. ಆರೋಪಿ ಲಕ್ಷ್ಮಣ ದೇವೇಂದ್ರಪ್ಪ 12 ವರ್ಷದಿಂದ ಸಾವಳಗಿಯಲ್ಲೇ ಬಾಡಿಗೆ ಮನೆಯಲ್ಲಿ ವಾಸವಿದ್ದ. ಈ ಕುರಿತು ಸಾವಳಗಿ ಠಾಣೆಯಲ್ಲಿ ಪೋಕ್ಸೊ ಕಾಯ್ಡೆಯಡಿ ಪ್ರಕರಣ ದಾಖಲಾಗಿದೆ.

ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ