ಮಂಗಳೂರು: ಯುದ್ಧಗ್ರಸ್ಥ ಉಕ್ರೇನ್ ನಲ್ಲಿ ಸಿಲುಕಿರುವ ಮಂಗಳೂರು ಮೂಲದ ಇಬ್ಬರು ವಿದ್ಯಾರ್ಥಿಗಳ ಮನೆಗೆ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕ ಡಿ. ವೇದವ್ಯಾಸ ಕಾಮತ್ ಮಾ 2ರ ಬುಧವಾರ ಭೇಟಿ ನೀಡಿ ಧೈರ್ಯ ತುಂಬಿದರು.
ಬಿಜೈ ನ್ಯೂರೋಡ್ ನಲ್ಲಿರುವ ವಿದ್ಯಾರ್ಥಿ ಮನೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲು, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಐವರು ವಿದ್ಯಾರ್ಥಿಗಳ ಕುಟುಂಬಗಳ ಪೈಕಿ ಇಬ್ಬರ ಮನೆಗೆ ಈಗಾಗಲೇ ಭೇಟಿ ನೀಡಲಾಗಿದ್ದು, ಹೆತ್ತವರಿಗೆ ಧೈರ್ಯ ತುಂಬಲಾಗಿದೆ. ಇನ್ನು ಇಬ್ಬರು ವಿದ್ಯಾರ್ಥಿಗಳ ಮನೆಗೆ ಬುಧವಾರವೇ ತೆರಳಲಾಗುವುದು. ಓರ್ವನ ಮನೆಯಲ್ಲಿ ಯಾರೂ ಇಲ್ಲದ ಕಾರಣ ಗುರುವಾರ ತೆರಳಿ ಪೋಷಕರಲ್ಲಿ ಮಾತನಾಡಿ ಆತ್ಮವಿಶ್ವಾಸ ತುಂಬಲಾಗುವುದು ಎಂದರು.
ಭಾರತದ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಸ್ಥರ ಜೊತೆ ಕೇಂದ್ರ ಸರಕಾರ ನಿರಂತರ ಸಂಪರ್ಕದಲ್ಲಿದೆ. ಕರ್ನಾಟಕ ಮೂಲದವರೊಂದಿಗೂ ರಾಜ್ಯ ಸರಕಾರ ಸಂಪರ್ಕದಲ್ಲಿದೆ. ವಿದ್ಯಾರ್ಥಿಗಳ ಮನೆಯವರಿಗೆ ಆತ್ಮವಿಶ್ವಾಸ ತುಂಬುವ ಸಲುವಾಗಿ ಈಗಾಗಲೇ ಬಿಜೆಪಿ ಪಕ್ಷದ ವತಿಯಿಂದ ವಾರ್ ರೂಂ ಕೂಡಾ ತೆರೆಯಲಾಗಿದ್ದು, ನಿರಂತರವಾಗಿ
ಮಾಹಿತಿ ಪಡೆಯಲಾಗುತ್ತಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist