ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಕ್ರೇನ್ ಮೇಲೆ ಆಕ್ರಮಣ: ರಷ್ಯಾದ ಎಫ್ಎಟಿಎಫ್ ಸದಸ್ಯತ್ವ ಅಮಾನತು

Twitter
Facebook
LinkedIn
WhatsApp
thumbs b c fd0d6527a5506b37903380d4f7925c56

ಪ್ಯಾರಿಸ್: ಉಕ್ರೇನ್ ಮೇಲೆ ರಷ್ಯಾ ಆಕ್ರಮಣದಿಂದಾಗಿ ಅದರ ಸದಸ್ಯತ್ವವನ್ನು ಅಮಾನತುಗೊಳಿಸಿರುವುದಾಗಿ ಜಾಗತಿಕ ಹಣ ವರ್ಗಾವಣೆ ವಿರೋಧಿ ನಿಗಾ ಸಂಸ್ಥೆ ಹಣಕಾಸು ಕ್ರಿಯಾ ಕಾರ್ಯಪಡೆ (ಎಫ್ಎಟಿಎಫ್) ಶುಕ್ರವಾರ ಹೇಳಿದೆ. ಸಂಘಟನೆಯ ತತ್ವಗಳನ್ನು ಉಲ್ಲಂಘಿಸಿರುವುದರಿಂದ ರಷ್ಯಾದ ಸದಸ್ಯತ್ವವನ್ನು ಅಮಾನತುಗೊಳಿಸಲು ನಿರ್ಧರಿಸಿರುವುದಾಗಿ ಅದು ತಿಳಿಸಿದೆ.

ಎಫ್ ಐಟಿಎಫ್  200 ಕ್ಕೂ ಹೆಚ್ಚು ದೇಶಗಳಿಗೆ ಮಾನದಂಡಗಳನ್ನು ನಿಗದಿಪಡಿಸುತ್ತದೆ ಮತ್ತು ಮಾದಕವಸ್ತು ಕಳ್ಳಸಾಗಣೆ, ಮಾನವ ಕಳ್ಳಸಾಗಣೆ ಮತ್ತು ಭಯೋತ್ಪಾದನೆ ಸೇರಿದಂತೆ ಗಂಭೀರ ಅಪರಾಧಗಳನ್ನು ನಿಭಾಯಿಸಲು ಅಧಿಕಾರಿಗಳಿಗೆ ಸಹಾಯ ಮಾಡಲು ಪ್ರಯತ್ನಿಸುತ್ತದೆ.

ರಷ್ಯಾದ ಒಕ್ಕೂಟದ ಕ್ರಮಗಳು ಭದ್ರತೆ, ಸುರಕ್ಷತೆ ಮತ್ತು ಜಾಗತಿಕ ಹಣಕಾಸು ವ್ಯವಸ್ಥೆಯ ಸಮಗ್ರತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಎಫ್ ಎಟಿಎಫ್ ಮೂಲ ತತ್ವಗಳಿಗೆ ವಿರುದ್ಧವಾಗಿದ್ದು ಸ್ವೀಕಾರಾರ್ಹವಲ್ಲ ಎಂದು ಗುಂಪು ಹೇಳಿದೆ. ಎಫ್ಎಟಿಎಫ್ ಮಾನದಂಡಗಳನ್ನು ಜಾರಿಗೆ ತರಲು ರಷ್ಯಾ ಇನ್ನೂ ಜವಾಬ್ದಾರಯುತವಾಗಿರುವುದಾಗಿ ತಿಳಿಸಿದೆ.

ಪ್ಯಾರಿಸ್‌ನಲ್ಲಿ ನಡೆದ ಐದು ದಿನಗಳ ಸಭೆಯ ನಂತರ ನೈಜೀರಿಯಾ ಮತ್ತು ದಕ್ಷಿಣ ಆಫ್ರಿಕಾವನ್ನು ತನ್ನ ಹೆಚ್ಚಿನ ಮೇಲ್ವಿಚಾರಣೆಗೆ ಒಳಪಟ್ಟಿರುವ ದೇಶಗಳ ಪಟ್ಟಿಗೆ ಹಣಕಾಸು ಕ್ರಿಯಾ ಕಾರ್ಯ ಪಡೆ ಸೇರಿಸಿಕೊಂಡಿದ್ದು,  ಆ ವರ್ಗದಿಂದ ಕಾಂಬೋಡಿಯಾ ಮತ್ತು ಮೊರಾಕೊವನ್ನು ತೆಗೆದುಹಾಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ