ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಕ್ರೇನ್ -ರಷ್ಯಾ ಸಮರ: ಭಾರತದ ಹಲವು ವಿದ್ಯಾರ್ಥಿಗಳು ನಾಪತ್ತೆ?

Twitter
Facebook
LinkedIn
WhatsApp
ಉಕ್ರೇನ್ -ರಷ್ಯಾ ಸಮರ: ಭಾರತದ ಹಲವು ವಿದ್ಯಾರ್ಥಿಗಳು ನಾಪತ್ತೆ?

ನವದೆಹಲಿ: ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಓದುತ್ತಿದ್ದ ತಮ್ಮ ಅನೇಕ ಭಾರತೀಯ ಸ್ನೇಹಿತರು ‘ಕಾಣೆಯಾಗಿದ್ದಾರೆ’ ಮತ್ತು ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಅಳಲು ತೊಡಿಕೊಳ್ಳುತ್ತಿದ್ದಾರೆ. ಇದಲ್ಲದೆ ಅಲ್ಲಿ ಎಂಬಿಬಿಎಸ್ ಓದಲು ಹೋಗಿರುವ ಮಕ್ಕಳ ಅನೇಕ ಕುಟುಂಬಸ್ಥರು ಸಂಪರ್ಕ ಕಡಿದುಕೊಂಡು ಚಿಂತಾಕ್ರಾಂತರಾಗಿದ್ದಾರೆ.

ಡೊನೆಸ್ಟ್ಕ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಆಶಿತಾ ಭಾರದ್ವಾಜ್ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ. ದೆಹಲಿಯಲ್ಲಿ ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಆಕೆಯ ಹಿರಿಯ ಸಹೋದರಿ ಶಿವಾಂಗಿ ಅವರ ಪ್ರಕಾರ, ಆಶಿತಾ ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಆಕೆಯೂ ಕುಟುಂಬಸ್ಥರನ್ನು ಸಂಪರ್ಕಿಸುತ್ತಿಲ್ಲ. ಅವಳು ಪೋಲೆಂಡ್ ಗಡಿಯನ್ನು ತಲುಪಲು ಪ್ರಯತ್ನಿಸುತ್ತಿದ್ದಳು ಆದರೆ ನಮಗೆ ಅವಳನ್ನು ಸಂಪರ್ಕಿಸಲು, ಪತ್ತೆಹಚ್ಚಲು ಸಾಧ್ಯವಾಗಲಿಲ್ಲ” ಎಂದು ನೊಂದು ನುಡಿದಿದ್ದಾರೆ.

ಖಾರ್ವಿಕ್ ರಾಷ್ಟ್ರೀಯ ಮೆಡಿಕಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಾಹಿಲ್ ಲತ್ ವಾಲ್, ತಮ್ಮ ವಿಶ್ವವಿದ್ಯಾಲಯದಿಂದ ಹಲವು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು ಇವರ ಬಗ್ಗೆ ಕಾಲಕಾಲಕ್ಕೆ ಮಾಹಿತಿ ಸಿಗುತ್ತಿದ್ದಂತೆ ಕಾಲೇಜು ವಾಟ್ಸಾಪ್ ಗ್ರೂಪ್ ನಲ್ಲಿ ಮಾಹಿತಿ ನೀಡುತ್ತಾರೆ ಎನ್ನುತ್ತಾರೆ.
ಹರ್ಯಾಣದ ಎಂಬಿಬಿಎಸ್ ವಿದ್ಯಾರ್ಥಿ ಪ್ರೇಮ್ ಸಿಂಗ್(ಹೆಸರು ಬದಲಿಸಲಾಗಿದೆ)ಇದೇ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದು, ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದು ಅವರ ಫೋನ್ ಕೂಡ ಸಿಗುತ್ತಿಲ್ಲ. ಅವರನ್ನು ನಿರಂತರವಾಗಿ ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಖಾರ್ವಿಕ್ ನಲ್ಲಿರುವ ಸಾಹಿಲ್ ಹೇಳುತ್ತಾರೆ.
ವಿನ್ನಿಟ್ಸಿಯಾ ನ್ಯಾಷನಲ್ ಪಿರೋಗೊವ್ ವೈದ್ಯಕೀಯ ವಿಶ್ವವಿದ್ಯಾಲಯದ ಅಬ್ದುಲ್ (ಹೆಸರು ಬದಲಾಯಿಸಲಾಗಿದೆ) ಮತ್ತೊಬ್ಬ ವಿದ್ಯಾರ್ಥಿ ಕೂಡ ಪತ್ತೆಯಾಗಿಲ್ಲ. “ನಾವು ಅವನ ವಿವರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದೇವೆ ಅವರು ಎಲ್ಲಿದ್ದಾರೆಂದು ಕೇಳುತ್ತಿದ್ದೇವೆ” ಎಂದು ಅದೇ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಅವನ ಸ್ನೇಹಿತ ಸೌರವ್ (ಹೆಸರು ಬದಲಾಯಿಸಲಾಗಿದೆ) ಹೇಳಿದರು. ಅಬ್ದುಲ್ ಪೋಲೆಂಡ್ ಗಡಿಯ ಕಡೆಗೆ ಹೋಗುತ್ತಿದ್ದರು ಮತ್ತು ನಂತರ ಟ್ರ್ಯಾಕ್ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳುತ್ತಾರೆ
ಭಾರತಕ್ಕೆ ಹಿಂತಿರುಗಲು ಪೋಲೆಂಡ್ ಗಡಿಭಾಗದಲ್ಲಿ ಕಾಯುತ್ತಿರುವ ಸಂದೀಪ್ ಕೌರ್, ಉಕ್ರೇನ್-ಪೋಲೆಂಡ್ ಗಡಿಭಾಗಕ್ಕೆ ಹೋಗಿರುವ ಹಲವು ವಿದ್ಯಾರ್ಥಿಗಳ ಫೋನ್ ಗಳು ಸಂಪರ್ಕ ಕಳೆದುಕೊಂಡಿದ್ದು ಈ ವಿದ್ಯಾರ್ಥಿಗಳ ಫೋನ್ ಗಳನ್ನು ಅಲ್ಲಿನ ಭದ್ರತಾ ಸಿಬ್ಬಂದಿ ತೆಗೆದಿಟ್ಟುಕೊಂಡಿದ್ದಾರೆ ಎಂದು ಆರೋಪಿಸುತ್ತಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ