ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ ಅನ್ಲಾಕ್ ಪ್ರಕ್ರಿಯೆಯಲ್ಲಿ ಕೆಲವೊಂದು ಚಟುವಟಿಕೆಗಳಿಗೆ ಮಾತ್ರ ನಿರ್ಬಂಧ ತೆರವು-ಜಿಲ್ಲಾಧಿಕಾರಿ ಮಾಹಿತಿ.

Twitter
Facebook
LinkedIn
WhatsApp
ಉಡುಪಿ ಅನ್ಲಾಕ್ ಪ್ರಕ್ರಿಯೆಯಲ್ಲಿ ಕೆಲವೊಂದು ಚಟುವಟಿಕೆಗಳಿಗೆ ಮಾತ್ರ ನಿರ್ಬಂಧ ತೆರವು-ಜಿಲ್ಲಾಧಿಕಾರಿ ಮಾಹಿತಿ.

ಜಿಲ್ಲೆಯಲ್ಲಿ ಜೂ.14 ರ ಬೆಳಗ್ಗೆ 6 ಗಂಟೆಯಿOದ ಕೋವಿಡ್ ನಿಯಂತ್ರಣಕ್ಕೆ ವಿಧಿಸ ಲಾಗಿದ್ದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ಸೂಚಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ, ಇತರೆ ಚಟುವಟಿಕೆಗಳನ್ನು ಕೈಗೊಂಡರೆ ಅಂತಹವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.

ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ,ಜಿಲ್ಲೆಯಲ್ಲಿ ಅನ್‌ಲಾಕ್ ಸಮಯದಲ್ಲಿ ಕೈಗೊಳ್ಳಬಹುದಾದ ಚಟುವಟಿ ಕೆಗಳ ಸಮರ್ಪಕ ಅನುಷ್ಠಾನ ಮಾಡುವ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಕಡಿಮೆಯಿರುವ ಕಾರಣ ರಾಜ್ಯ ಸರ್ಕಾರ ಪ್ರಸ್ತುತ ವಿಧಿಸಲಾಗಿದ್ದ ನಿರ್ಬಂದಗಳಲ್ಲಿ ಸಡಿಲಿಕೆ ನೀಡಿ ಜಿಲ್ಲೆ ಯಲ್ಲಿ ವಿವಿಧ ಚಟುವಟಿಕೆಗಳನ್ನು ಆರಂಭಿಸಲು ಮಾರ್ಗಸೂಚಿ ಹೊರಡಿಸಿದ್ದು, ಅದರಂತೆ ಜೂ.14 ರಿಂದ21 ರ ವರೆಗೆ ಜಿಲ್ಲೆ ಯಲ್ಲಿ ಈ ಮುಂದಿನOತೆ ಚಟುವಟಿಕೆಗಳನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ ಎಂದು ಜಿಲ್ಲಾದಿಕಾರಿ ಹೇಳಿದರು.

ಸೋಮವಾರದಿಂದ ಶುಕ್ರವಾರದ ವರೆಗೆ ಪ್ರತಿದಿನ ಬೆಳಗ್ಗೆ 6 ರಿಂದ 2 ಗಂಟೆಯವರೆಗೆ,ಎಲ್ಲಾ ಉತ್ಪಾದನಾ ಚಟುವಟಿಕೆ ನಿರ್ವಹಿಸುವ ಕೈಗಾರಿಕೆಗಳು, ಸಂಸ್ಥೆಗಳು ಶೇ.50 ರಷ್ಟು ಕಾರ್ಮಿಕರೊಂದಿಗೆ ಕಾರ್ಯನಿರ್ವಹಿಸಬಹುದು. ಗಾರ್ಮೆಂಟ್ ಗಳಲ್ಲಿ ಮಾತ್ರ ಶೇ.30 ಸಿಬ್ಬಂದಿ ಕಾರ್ಯನಿರ್ವಹಿಸಬಹುದು. ಕಟ್ಟಡ ನಿರ್ಮಾಣ ಮತ್ತು ರಿಪೇರಿ ಚಟುವಟಿಕೆಗಳಿಗೆ ಅಗತ್ಯವಿರುವ ಕಟ್ಟಡ ಸಾಮಗ್ರಿ ಗಳಾದ ಸಿಮೆಂಟ್ , ಕಬ್ಬಿಣ ಸೇರಿದಂತೆ ಅಗತ್ಯವಿರುವ ವಸ್ತುಗಳ ಮಾರಾಟ ಮಳಿಗೆಗಳು ತೆರೆಯಲು ಅವಕಾಶವಿದೆ.
ಆಹಾರ ಪದಾರ್ಥಗಳು, ದಿನಸಿ ವಸ್ತುಗಳು, ಹಣ್ಣು ಮತ್ತು ತರಕಾರಿ, ಮೀನು ಮತ್ತು ಮಾಂಸ ಡೈರಿ ಮತ್ತು ಹಾಲಿನ ಬೂತ್ ಗಳು ತೆರೆಯಲು ಮತ್ತು ಪಶು ಆಹಾರ ಮಾರಾಟಕ್ಕೆ ಅನುಮತಿ ನೀಡಲಾಗಿದೆ.ಬೀದಿ ಬದಿ ವ್ಯಾಪಾರಿಗಳು ಹಾಗೂ ಪಡಿತರ ಅಂಗಡಿಗಳು ಸಹ ಈ ಸಮಯದಲ್ಲಿ ಕಾರ್ಯನಿರ್ವಹಿಸಬಹುದು ಆದರೆ ಬೀದಿ ಬದಿ ವ್ಯಾಪಾರಿಗಳು ಯಾವುದೇ ಆಹಾರ ಪದಾರ್ಥಗಳನ್ನು ಮಾರುವಂತಿಲ್ಲ.

ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಮದ್ಯ ಪಾರ್ಸೆಲ್ ಗೆ ಅವಕಾಶವಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅನುಮತಿ ನೀಡಲಾಗಿದೆ.

ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ರಾತ್ರಿ ನೈಟ್ ಕರ್ಫ್ಯೂ ಇರಲಿದ್ದು,ರಾತ್ರಿ 7 ಗಂಟೆಯಿAದ ಮರುದಿನ ಬೆಳಗ್ಗೆ 5 ರ ವರೆಗೆ ಓಡಾಟವನ್ನು ನಿರ್ಭಂದಿಸಿದೆ. ಆದರೆ ಚಕಿತ್ಸೆಗಾಗಿ ಆಸ್ಪತ್ರೆಗೆ ತೆರಳುವವರು , ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಸಂಸ್ಥೆಗಳ ನೌಕರರು ಸೂಖ್ತ ಗುರುತಿನ ಚೀಟಿಯೊಂದಿಗೆ , ಟೆಲಿಕಾಂ ಮತ್ತು ಇಂಟರ್ನೆಟ್ ಸೇವೆ ಸೇರಿದಂತೆ ಅಗತ್ಯ ಸೇವೆಗಳನ್ನು ಒದಗಿಸುವ ನೌಕರರು , ವೈದ್ಯಕೀಯ ಸಿಬ್ಬಂದಿಗಳ ಸಂಚಾರಕ್ಕೆ ನಿರ್ಬಂಧಗಳಿಲ್ಲ, ಸರಕು ಸಾಗಾಣಿಕೆ ವಾಹನಗಳು, ಇ ಕಾಮಸ್ ð ಮತ್ತು ಹೋಂ ಡೆಲಿವರಿ ಸೇವೆ ನೀಡುವ ವಾಹನಗಳು ಹಾಗೂ ರೈಲು ಮತ್ತು ವಿಮಾನ ಪ್ರಯಾಣಕ್ಕೆ ತೆರಳುವವರು ಪ್ರಯಾಣದ ಟಿಕೆಟ್ ನೊಂದಿಗೆ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಇದನ್ನು ಉಲ್ಲಂಘಿಸಿ ಸಂಚರಿಸುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಜಿಲ್ಲಾದಿಕಾರಿ ಸೂಚನೆ ನೀಡಿದರು.

ಶುಕ್ರವಾರ ರಾತ್ರಿ 7 ಗಂಟೆಯಿ೦ದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದ್ದು, ಈ ಅವಧಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಬ೦ದಪಟ್ಟ ಇಲಾಖೆಗಳು , ತುರ್ತು ಮತ್ತು ಅಗತ್ಯ ಸೇವೆ , ಟೆಲಿಕಾಂ ಮತ್ತು ಇಂಟರ್ನೆಟ್ ಸೇವೆ ಒದಗಿಸುವ ಇಲಾಖೆಗಳು ಮತ್ತು ಕೈಗಾರಿಕೆ ಕಾರ್ಯನಿರ್ವಹಿಸಲು ಅನುಮತಿಯಿದ್ದು, ಈ ಕಚೇರಿಗಳ ಮತ್ತು ಸಂಸ್ಥೆಗಳ ನೌಕರರು ಸೂಕ್ತ ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದು. . ಆಹಾರ ಪದಾರ್ಥಗಳು, ದಿನಸಿ ವಸ್ತುಗಳು, ಹಣ್ಣು ಮತ್ತು ತರಕಾರಿ, ಮೀನು ಮತ್ತು ಮಾಂಸ ಡೈರಿ ಮತ್ತು ಹಾಲಿನ ಬೂತ್ ಗಳು ತೆರೆಯಲು ಮತ್ತು ಪಶು ಆಹಾರ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಹಾಗೂ ಪಡಿತರ ಅಂಗಡಿಗಳು ಸಹ ಈ ಸಮಯದಲ್ಲಿ ಕಾರ್ಯನಿರ್ವಹಿಸಬಹುದು ಆದರೆ ಬೀದಿ ಬದಿ ವ್ಯಾಪಾರಿಗಳು ಯಾವುದೇ ಆಹಾರ ಪದಾರ್ಥಗಳನ್ನು ಮಾರುವಂತಿಲ್ಲ. ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಮದ್ಯ ಪಾರ್ಸೆಲ್ ಗೆ ಅವಕಾಶವಿದೆ.* ಹೋಂ ಡೆಲಿವರಿ ಸೇವೆ ಒದಗಿಸುವವರಿಗೆ ಈ ಹಿಂದಿನOತೆ ಯಾವುದೇ ನಿರ್ಭಂಧಗಳಿಲ್ಲ , ರೈಲು ಮತ್ತು ವಿಮಾನ ಪ್ರಯಾಣಕ್ಕೆ ತೆರಳುವವರು ಪ್ರಯಾಣದ ಟಿಕೆಟ್ ನೊಂದಿಗೆ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು