ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಡುಪಿ: ಅವಧಿ ಮೀರಿ ಡಿಜೆ ಸೌಂಡ್ - ಮೆಹಂದಿ ಕಾರ್ಯಕ್ರಮದ ಮನೆಗೆ ಪೊಲೀಸ್ ದಾಳಿ

Twitter
Facebook
LinkedIn
WhatsApp
istockphoto 1191407748 170667a

ಉಡುಪಿ, ,ಫೆ 28 : ಮೆಹಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಅತೀ ಕರ್ಕಶವಾದ ಡಿ.ಜೆ ಸೌಂಡ್‌ ಹಾಕಿದ್ದ ಮನೆಗೆ ಪೊಲೀಸರು ದಾಳಿ ಮಾಡಿದ ಘಟನೆ ಕುಂಜಿಬೆಟ್ಟು ಪರಿಸರದಲ್ಲಿ ನಡೆದಿದೆ.

ಕುಂಜಿಬೆಟ್ಟು ಪರಿಸರದಲ್ಲಿ ಫೆ.26ರಂದು ತಡರಾತ್ರಿ 1.30ರ ಸುಮಾರಿಗೆ ಮೆಹಂದಿ ಕಾರ್ಯಕ್ರಮದಲ್ಲಿ ಅತೀ ಕರ್ಕಶವಾದ ಡಿಜೆ ಸೌಂಡ್‌ ಹಾಕಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಮೇರೆಗೆ ರೌಂಡ್ಸ್‌ ಕರ್ತವ್ಯದಲ್ಲಿದ್ದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ 76 ಬಡಗಬೆಟ್ಟು ಗ್ರಾಮದ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನದ ಬಳಿ ಆರೋಪಿ ಶರತ್‌ ಎಂಬವರ ಮನೆಯಲ್ಲಿ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮದಲ್ಲಿ ಯಾವುದೇ ಪರವಾನಿಗೆ ಅಥವಾ ಪೂರ್ವಾನುಮತಿ ಇಲ್ಲದೆ ಅತೀ ಕರ್ಕಶವಾಗಿ ಡಿಜೆ ಸೌಂಡ್‌ ಹಾಕಿಕೊಂಡು ರಾತ್ರಿ 2 ಗಂಟೆಯವರೆಗೆ ನೃತ್ಯ ಮಾಡುತ್ತಿದ್ದರು.

ಈ ವೇಳೆ ಪೊಲೀಸರು 4 ಸೌಂಡ್‌ ಬಾಕ್ಸ್‌, ಡಿಜೆ ಪರಿಕರಗಳು, ಲೈಟಿಂಗ್‌ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ